ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ (Saif Ali Khan) ಹಲ್ಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಈ ಬೆನ್ನಲ್ಲೇ ಸೈಫ್ ಒಬ್ಬರೇ ಅಲ್ಲ ಶಾರುಖ್ ಖಾನ್ (Shah Rukh Khan) ಮೇಲೆಯೂ ದಾಳಿ ನಡೆಸಲು ಸ್ಕೆಚ್ ಹಾಕಲಾಗಿತ್ತು ಎಂಬ ಸುಳಿವು ಪೊಲೀಸರಿಗೆ ಸಿಕ್ಕಿದೆ.
Advertisement
ಸೈಫ್ ಅಲಿ ಖಾನ್‌ಗೆ ಹಲ್ಲೆ ಮಾಡುವ ಮೊದಲು ಶಾರುಖ್ ಮನೆಯ ಮುಂದೆ ಕೂಡ ಹಲವು ಬಾರಿ ವ್ಯಕ್ತಿಯೊಬ್ಬ ಕಾಣಿಸಿಕೊಂಡಿದ್ದಾನೆ. ಸೈಫ್‌ಗೂ ಮುನ್ನ ಶಾರುಖ್‌ಗೂ ಈ ಆರೋಪಿ ಏನಾದ್ರೂ ಟಾರ್ಗೆಟ್ ಮಾಡಿದ್ನಾ? ಎಂಬ ಅನುಮಾನ ಪೊಲೀಸರಲ್ಲಿ ಮೂಡಿದೆ. ಇದನ್ನೂ ಓದಿ:ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಅರೆಸ್ಟ್
Advertisement
Advertisement
ಸೈಫ್‌ಗೂ ಮುನ್ನ ಜ.14ರಂದು ಶಾರುಖ್ ದಾಳಿಗೂ ಆರೋಪಿ ಸ್ಕೆಚ್ ಹಾಕಿದ್ದ ಎಂಬ ವಿಚಾರ ಬೆಳಕಿಗೆ ಬಂದಿದ್ದು, ನಟನ ನಿವಾಸದ ಬಳಿ 6-8 ಅಡಿಯ ಕಬ್ಬಿಣದ ಏಣಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈಗಾಗಲೇ ಶಾರುಖ್ ಅವರ ಮನ್ನತ್ ನಿವಾಸಕ್ಕೆ ಭೇಟಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Advertisement
ನಿನ್ನೆ ಶಂಕಿತ ಆರೋಪಿಯ ಫೋಟೋ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಮುಂಬೈ ಪೊಲೀಸರೇ ಬಹಿರಂಗಪಡಿಸಿದ್ದರು. ಟೀ-ಶರ್ಟ್, ಜೀನ್ಸ್ ಪ್ಯಾಂಟ್ ಧರಿಸಿರುವ ಶಂಕಿತ, ಬ್ಯಾಗ್‌ವೊಂದನ್ನ ಹಾಕಿಕೊಂಡಿದ್ದು, ಕಿತ್ತಳೆ ಬಣ್ಣದ ಸ್ಕಾಫ್ ಧರಿಸಿದ್ದಾನೆ. ಮೆಟ್ಟಿಲುಗಳಿಂದ ಇಳಿದು ಹೋಗುತ್ತಿರುವಾಗ ಸಿಟಿಟಿವಿ ಕ್ಯಾಮೆರಾ ನೋಡಿದ್ದು, ವಿಡಿಯೋದಲ್ಲಿ ಸೆರೆಯಾಗಿದೆ.
ಸೈಫ್ ಅಲಿಖಾನ್ ಮನೆಯಲ್ಲಿ ಅಡುಗೆ ಮಾಡುವವರಲ್ಲಿ ಒಬ್ಬರಾದ ಎಲಿಯಾಮಾ ಫಿಲಿಪ್ಸ್ ಅಲಿಯಾಸ್ ಲಿಮಾ, ಶಂಕಿತನನ್ನ ಮೊದಲು ನೋಡಿದ್ದರಂತೆ. ದುಷ್ಕರ್ಮಿಯನ್ನ ನೋಡಿದ ಕೂಡಲೇ ಭಯದಲ್ಲಿ ಜೋರಾಗಿ ಕಿರುಚಿದ್ದಾರೆ. ಇದರಿಂದ ಎಚ್ಚರಗೊಂಡ ಸೈಫ್, ಹಂತಕನನ್ನ ಒಳ ನುಗ್ಗದಂತೆ ತಡೆಯಲು ಹೋರಾಡಿದ್ದಾರೆ. ಈ ವೇಳೆ ಹಂತಕ 6 ಬಾರಿ ಇರಿದು, ಎಡಗೈ ಮತ್ತು ಗುತ್ತಿಗೆ ಭಾಗವನ್ನ ಗಾಯಗೊಳಿಸಿದ್ದಾನೆ. ಹಂತಕ ಒಳ ನುಗ್ಗಲು ಪ್ರಯತ್ನಿಸಿದಾಗ ನಿನಗೇನು ಬೇಕು ಎಂದು ಕೇಳಲಾಗಿತ್ತಂತೆ. ಆಗ 1 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ದಾಳಿಯಲ್ಲಿ ಇಬ್ಬರು ಮನೆಯ ಸಹಾಯಕರೂ ಗಾಯಗೊಂಡಿದ್ದಾರೆ.
ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟನ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ.