ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ (Saif Ali Khan) ದುಷ್ಕರ್ಮಿಗಳು ಚಾಕುವಿನಿಂದ ಇರಿದಿರುವ ಹಿನ್ನೆಲೆ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ನಟನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹಾಗಾದ್ರೆ ಪತ್ನಿ ಕರೀನಾ ಕಪೂರ್ (Kareena Kapoor) ಮತ್ತು ಮಕ್ಕಳು ಸೇವ್ ಆಗಿದ್ದು ಹೇಗೆ? ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಇದನ್ನೂ ಓದಿ:ಈ ವಾರ ನಿರ್ಣಾಯಕ – ದರ್ಶನ್ ಸರ್ಜರಿ ಬಗ್ಗೆ ವೈದ್ಯರಿಂದ ಸ್ಫೋಟಕ ಮಾಹಿತಿ
ಜ.15ರಂದು ಮನೆಯಲ್ಲಿ ಸೈಫ್ ಅಲಿ ಖಾನ್ ಮತ್ತು ಕೆಲಸಗಾರರು ಅಷ್ಟೇ ಮನೆಯಲ್ಲಿದ್ದರು. ದುಷ್ಟರ್ಮಿಗಳು ನಟನ ಮೇಲೆ ಅಟ್ಯಾಕ್ ಮಾಡಿದ ಸಂದರ್ಭದಲ್ಲಿ ಕರೀನಾ ಕಪೂರ್ ಮತ್ತು ಮಕ್ಕಳು ಮನೆಯಲ್ಲಿ ಇರಲಿಲ್ಲ. ಈ ಸಂದರ್ಭದಲ್ಲಿ ಕರೀನಾ ಕಪೂರ್ ಅವರು ಸಹೋದರಿ ಕರೀಷ್ಮಾ ಕಪೂರ್ (Karishma Kapoor) ಹಾಗೂ ರಿಯಾ, ಸೋನಂ ಜೊತೆ ಪಾರ್ಟಿಗೆ ತೆರಳಿದ್ದರು. ಪಾರ್ಟಿ ಮಾಡುತ್ತಿರುವ ಫೋಟೋವನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದಕ್ಕೆ ‘ಗರ್ಲ್ಸ್ ನೈಟ್ ಇನ್’ ಎಂದು ಅಡಿಬರಹ ನೀಡಿದ್ದಾರೆ. ಹಾಗಾಗಿ ದರೋಡೆಕೋರರ ಹಲ್ಲೆಯಿಂದ ಅವರು ಬಚಾವ್ ಆಗಿದ್ದಾರೆ. ಕರೀನಾ ಮತ್ತು ಮಕ್ಕಳಿಬ್ಬರು ಸೇಫ್ ಆಗಿದ್ದಾರೆ.
ಇನ್ನೂ ಮುಂಬೈನ ಬಾಂದ್ರಾದಲ್ಲಿರುವ ನಟನ ನಿವಾಸಕ್ಕೆ ತಡರಾತ್ರಿ ದರೋಡೆ ಮಾಡಲು ಕೆಲ ದುಷ್ಕರ್ಮಿಗಳು ನುಗ್ಗಿದ್ದಾರೆ. ಈ ವೇಳೆ, ದರೋಡೆಕೋರನಿಗೆ ಪ್ರತಿರೋಧ ತೋರುವಾಗ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ, ಸೈಫ್ ಕುತ್ತಿಗೆ, ಕೈ ಸೇರಿ 6 ಕಡೆ ಗಾಯವಾಗಿದೆ. 2 ಕಡೆ ಗಂಭೀರವಾಗಿ ಪೆಟ್ಟಾಗಿದೆ. ಹೆಚ್ಚು ರಕ್ತಸ್ರಾವ ಆಗಿರುವ ಹಿನ್ನೆಲೆ ಕೂಡಲೇ ನಟನನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಿದ್ದು, ಎರಡೂವರೆ ಗಂಟೆಗಳ ಕಾಲ ಆಪರೇಷನ್ ನಡೆದಿದೆ. ಸದ್ಯ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ.