ಬಾಲಿವುಡ್ ಖ್ಯಾತ ನಟ ಸಂಜಯ್ ದತ್ ಮೈಸೂರಿನಲ್ಲಿ ಬೀಡು ಬಿಟ್ಟಿದ್ದಾರೆ. ‘ಕೆಡಿ’ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ (Mysore) ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಅವರು ಮೈಸೂರಿನ ಶಕ್ತಿದೇವತೆ ಚಾಮುಂಡೇಶ್ವರಿ (Chamundeshwari) ದೇವಸ್ಥಾನ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ನಿನ್ನ ಭೀಮನ ಅಮವಾಸ್ಯೆ ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಆಗಮಿಸಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ.
ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಂಜಯ್, ‘ಹಲವಾರು ಬಾರಿ ಮೈಸೂರಿಗೆ ಬಂದಿದ್ದರೂ ದೇವಿಯ ದರ್ಶನ ಮಾಡುವುದಕ್ಕೆ ಆಗಿರಲಿಲ್ಲ. ಈ ಬಾರಿ ದೇವಿಯೇ ಕರೆಯಿಸಿಕೊಂಡಿದ್ದಾರೆ ಎನಿಸುತ್ತದೆ. ದೇವಿಯ ದರ್ಶನ ನನಗೆ ಶಾಂತಿ ನೆಮ್ಮದಿ ನೀಡಿದೆ. ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಪ್ರಾರ್ಥಿಸಿದೆ’ ಎಂದಿದ್ದಾರೆ ಸಂಜಯ್. ಇದನ್ನೂ ಓದಿ:ನ್ಯಾಯಕ್ಕಾಗಿ ಇಂದು ಫಿಲ್ಮ್ ಚೇಂಬರ್ ಮುಂದೆ ನಿರ್ಮಾಪಕ ಎನ್.ಕುಮಾರ್ ಪ್ರತಿಭಟನೆ
ಪ್ರೇಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕೆಡಿ ಸಿನಿಮಾದ ಶೂಟಿಂಗ್ ಹಲವು ದಿನಗಳಿಂದ ಮೈಸೂರಿನಲ್ಲಿ ನಡೆಯುತ್ತಿದೆ. ಧ್ರುವ ಸರ್ಜಾ, ಸಂಜಯ್ ದತ್, ರವಿಚಂದ್ರನ್ ಸೇರಿದಂತೆ ಹಲವರು ಈ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಸಂಜಯ್ ದತ್ ವಿಲನ್ ರೀತಿಯ ಪಾತ್ರದಲ್ಲಿ ನಟಿಸುತ್ತಿದ್ದರೆ, ಧ್ರುವ ಸರ್ಜಾ ಹಲವು ಗೆಟಪ್ ಗಳಲ್ಲಿ ಕಾಣಿಸಿಕೊಳ್ಳುತ್ತಾರಂತೆ.
ಕೆಡಿ ಸಿನಿಮಾದಲ್ಲಿ ಧ್ರುವಗೆ ರೆಟ್ರೋ ಲುಕ್
ಮೊನ್ನೆಯಷ್ಟೇ `ಕೆಡಿ’ (Kd Film) ಸಿನಿಮಾದ ಫೋಟೋವೊಂದು ಲೀಕ್ ಆಗಿದೆ. ಸದ್ಯ ಮೈಸೂರಿನಲ್ಲಿ ಚಿತ್ರದ ಶೂಟಿಂಗ್ ನಡೆದಿದ್ದು, ಈ ಭಾಗದ ಶೂಟಿಂಗ್ ನಲ್ಲಿ ಧ್ರುವ ಸರ್ಜಾ ರೆಟ್ರೋ ಲುಕ್ (Retro Look) ನಲ್ಲಿ ಕಂಡಿದ್ದಾರೆ. ಅಭಿಮಾನಿಗಳ ಮಧ್ಯ ಧ್ರುವ ಕಾಣಿಸಿಕೊಂಡಿರುವ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ರೆಟ್ರೋ ಲುಕ್ ನಲ್ಲಿ ಧ್ರುವ ಸಖತ್ ಆಗಿ ಕಾಣುತ್ತಾರೆ.
ಕೆವಿಎನ್ ನಿರ್ಮಾಣದ ಧ್ರುವ ಸರ್ಜಾ (Dhruva Sarja) ಮತ್ತು ನಿರ್ದೇಶಕ ಪ್ರೇಮ್ (Director Prem) ಕಾಂಬಿನೇಷನ್ ಸಿನಿಮಾ ನಾನಾ ಕಾರಣಗಳಿಂದಾಗಿ ಸಖತ್ ಸದ್ದು ಮಾಡ್ತಿದೆ. ಚಿತ್ರದ ಟೈಟಲ್ ಮೂಲಕ ಕ್ಯೂರಿಯಸ್ ಹುಟ್ಟು ಹಾಕಿರುವ ಈ ಸಿನಿಮಾ ಬಗ್ಗೆ ಫ್ಯಾನ್ಸ್ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ ಈ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಜೊತೆಗೆ ರವಿಚಂದ್ರನ್ (Ravichandran) ಕೂಡ ಇದ್ದಾರೆ. ಮೊನ್ನೆಯಷ್ಟೇ ರವಿಚಂದ್ರನ್ ಅವರ `ಕೆಡಿ’ ಸಿನಿಮಾದಲ್ಲಿನ ಫಸ್ಟ್ ಲುಕ್ ಬಿಡುಗಡೆಯಾಗಿ ಮೆಚ್ಚುಗೆ ಗಳಿಸಿತ್ತು.
ಈ ಹಿಂದೆ ತಮ್ಮದೇ ಸಿನಿಮಾದಲ್ಲಿ ನಟಿಸಿದ್ದ ರೀಷ್ಮಾ ನಾಣಯ್ಯ (Reeshma Nanaiah) ಅವರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ ಪ್ರೇಮ್. ಕೆಡಿ ಸಿನಿಮಾದಲ್ಲಿ ರೀಷ್ಮಾ ಅವರು ಮಚ್‌ಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸೂಪರ್ ಸ್ಟಾರ್‌ಗಳಿರುವ ತಾರಾಗಣ ಅಂದ್ರೆ ಅದು ಕೆಡಿ ಸಿನಿಮಾ. ಧ್ರುವ ಸರ್ಜಾ, ರವಿಚಂದ್ರನ್, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) , ಸಂಜಯ್ ದತ್ (Sanjay Dutt), ಹೀಗೆ ಸ್ಟಾರ್‌ಗಳನ್ನ ಸ್ಟಾರ್ ಡೈರೆಕ್ಟರ್ ನಿರ್ದೇಶಕ ಪ್ರೇಮ್ ನಿರ್ದೇಶನ ಮಾಡ್ತಿದ್ದಾರೆ. ವಿಭಿನ್ನ ಕಥೆ ಹೊತ್ತು, ಪ್ಯಾನ್ ಇಂಡಿಯಾ ಸಿನಿಮಾ ಹೊತ್ತು ತರುತ್ತಿದ್ದಾರೆ.
1968ರಿಂದ 1978ರ ನಡುವೆ ನಡೆದ ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಈ ರೆಟ್ರೋ ಸಿನಿಮಾ ಕಟ್ಟಿಕೊಡಲಾಗ್ತಿದೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಅದಕ್ಕೆ ತಕ್ಕಂತೆ ಸ್ಟಾರ್‌ಕಾಸ್ಟ್, ಮೇಕಿಂಗ್, ಪ್ರಮೋಷನ್ ಎಲ್ಲವೂ ಇರಲಿದೆ. ಈ ಚಿತ್ರಕ್ಕಾಗಿ ಕೇವಲ 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿ ಧ್ರುವ ಸರ್ಜಾ ನಟಿಸ್ತಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]