ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಮೊದಲ ಬಾರಿಗೆ ‘ಮೆಟ್ ಗಾಲಾ 2025’ರ (Met Gala 2025) ಫ್ಯಾಷನ್ ಹಬ್ಬದಲ್ಲಿ ಭಾಗಿಯಾಗಿದ್ದಾರೆ. ಸ್ಟೈಲೀಶ್ ಲುಕ್‌ನಲ್ಲಿ ಶಾರುಖ್ ಮಿಂಚಿದ್ದಾರೆ. ಕಿಂಗ್ ಖಾನ್ ಫ್ಯಾಷನ್ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಇದನ್ನೂ ಓದಿ:ರಮೇಶ್ ಅರವಿಂದ್ ನಟನೆಯ ‘ದೈಜಿ’ ಚಿತ್ರದಲ್ಲಿ ದಿಗಂತ್
ಪ್ರತಿ ವರ್ಷದಂತೆ ಈ ವರ್ಷವು ಕೂಡ ‘ಮೆಟ್ ಗಾಲಾ 2025’ ಫ್ಯಾಷನ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತಿದೆ. ದೇಶ- ವಿದೇಶಗಳಿಂದ ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ. ಈ ಸಾಲಿನಲ್ಲಿ ಶಾರುಖ್ ಖಾನ್ ಕೂಡ ಭಾಗಿಯಾಗಿದ್ದಾರೆ. ಮೊದಲ ಬಾರಿಗೆ ಈ ಫ್ಯಾಷನ್ ಹಬ್ಬದಲ್ಲಿ ಅವರು ಭಾಗಿಯಾಗಿದ್ದಾರೆ. ಇದನ್ನೂ ಓದಿ:ಅಭಿಮಾನಿ ಕಡೆ ಗನ್ ಇಟ್ಟ ದಳಪತಿ ವಿಜಯ್ ಬಾಡಿಗಾರ್ಡ್!
ಮೆಟ್ ಗಾಲಾ ರೆಡ್ ಕಾರ್ಪೆಟ್‌ನಲ್ಲಿ ಕಪ್ಪು ಬಣ್ಣದ ಉಡುಗೆಯಲ್ಲಿ ಶಾರುಖ್ ಸ್ಟೈಲೀಶ್ ಆಗಿ ಪೋಸ್ ನೀಡಿದ್ದಾರೆ. ಕಣ್ಣಿಗೆ ಕೂಲಿಂಗ್ ಗ್ಲಾಸ್, ಕೊರಳಿನಲ್ಲಿ ಕೆ ಪದವಿರುವ ಸರ ಧರಿಸಿದ್ದಾರೆ. ಕೈಯಲ್ಲಿ ಚೆಂದದ ಸ್ಟಿಕ್ ಹಿಡಿದು ಅವರು ಫೋಟೋಗೆ ವಿವಿಧ ಭಂಗಿಯಲ್ಲಿ ಪೋಸ್ ನೀಡಿದ್ದಾರೆ. 59ರ ವಯಸ್ಸೂ ಫಿಟ್ ಆಗಿರೋ ಶಾರುಖ್ ಅವರನ್ನು ನೋಡಿ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಬೇಬಿ ಬಂಪ್‌ನೊಂದಿಗೆ ಕಿಯಾರಾ ಅಡ್ವಾಣಿ, ನಿಕ್ ಜೋನಸ್ ಮತ್ತು ಪ್ರಿಯಾಂಕಾ ಚೋಪ್ರಾ ದಂಪತಿ, ಸಿದ್ಧಾರ್ಥ್ ಮಲ್ಹೋತ್ರಾ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.
ಅಂದದಾಗೆ, ಶಾರುಖ್ ಖಾನ್ ಪ್ರಸ್ತುತ ‘ಕಿಂಗ್’ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಮಗಳು ಸುಹಾನಾರನ್ನು ಈ ಚಿತ್ರದ ಮೂಲಕ ಲಾಂಚ್ ಮಾಡಲು ಮುಂದಾಗಿದ್ದಾರೆ.
200 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣ ಮಾಡುತ್ತಿರುವ ಕಿಂಗ್ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಕೂಡ ಪವರ್‌ಫುಲ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಒಟ್ನಲ್ಲಿ ಮೊದಲ ಸಿನಿಮಾದಲ್ಲೇ ಮಗಳು ಗೆದ್ದು ಬೀಗಬೇಕು ಎಂದು ಅದ್ಧೂರಿಯಾಗಿ ಶಾರುಖ್ ನಿರ್ಮಾಣ ಮಾಡ್ತಿದ್ದಾರೆ.