ನರೇಂದ್ರ ಮೋದಿ (Narendra Modi) ಪ್ರಮಾಣವಚನ ಕಾರ್ಯಕ್ರಮದಲ್ಲಿ ಬಾಲಿವುಡ್ ಸ್ಟಾರ್‌ಗಳ ದಂಡೇ ಭಾಗಿಯಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ವೇಳೆ, ಅಕ್ಷಯ್ ಕುಮಾರ್ (Akshay Kumar), ರಜನಿಕಾಂತ್, ಶಾರುಖ್ ಖಾನ್ (Sharukh Khan) ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
Advertisement
ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಬಾಲಿವುಡ್ ಸ್ಟಾರ್‌ಗಳಾದ ಶಾರುಖ್ ಖಾನ್, ಅಕ್ಷಯ್ ಕುಮಾರ್, ಕಂಗನಾ ರಣಾವತ್, ಅನುಪಮ್ ಖೇರ್, ವಿಕ್ರಾಂತ್, ಬಾಲಿವುಡ್ ನಿರ್ಮಾಪಕ ರಾಜ್‌ಕುಮಾರ್ ಹಿರಾನಿ, ರಜನಿಕಾಂತ್, ಪವನ್ ಕಲ್ಯಾಣ್ ಸೇರಿದಂತೆ ಹಲವರು ಸಾಕ್ಷಿಯಾಗಿದ್ದಾರೆ. ಇದನ್ನೂ ಓದಿ: ಚಂದನ್‌ಗೆ ನಿವೇದಿತಾ ಜೀವನಾಂಶ ಕೇಳಿದ್ರಾ? ಕೊನೆಗೂ ಹೊರಬಿತ್ತು ಅಸಲಿ ಸಂಗತಿ
Advertisement
ಅದಷ್ಟೇ ಅಲ್ಲ, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕೂಡ ಸೋಷಿಯಲ್ ಮೀಡಿಯಾದಲ್ಲಿ ನರೇಂದ್ರ ಮೋದಿ 3ನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವುದ್ದಕ್ಕೆ ಶುಭಕೋರಿದ್ದಾರೆ. ಸಂತಸ ವ್ಯಕ್ತಪಡಿಸಿದ್ದಾರೆ.