ಬಾಲಿವುಡ್‌ನಲ್ಲಿ ಮತ್ತೊಂದು ಜೋಡಿಯ ಮದುವೆ ಸಂಭ್ರಮ ಮನೆ ಮಾಡಿದೆ. ಝಹೀರ್ ಇಖ್ಬಾಲ್ (Zaheer Iqbal) ಜೊತೆ ಸೋನಾಕ್ಷಿ ಸಿನ್ಹಾ (Sonakshi Sinha) ಇದೇ ಜೂನ್ 23ರಂದು ಮದುವೆಯಾಗಲಿದ್ದಾರೆ. ಇದೀಗ ಮಗಳ ಮದುವೆ ಬಗ್ಗೆ ಬಾಲಿವುಡ್ ನಟ ಶತ್ರುಘ್ನ ಸಿನ್ಹಾ ಪ್ರತಿಕ್ರಿಯೆ ನೀಡಿದ್ದಾರೆ. ಮದುವೆ ಬಗ್ಗೆ ನಮ್ಮ ಬಳಿ ಮಗಳು ಏನು ಹೇಳಿಲ್ಲ. ಆದರೆ ಇಂದಿನ ಕಾಲದ ಮಕ್ಕಳು ಮದುವೆಗೆ ಒಪ್ಪಿಗೆ ಕೇಳುವುದಿಲ್ಲ. ಬದಲಿಗೆ ತಮ್ಮ ನಿರ್ಧಾರವನ್ನು ಪೋಷಕರಿಗೆ ತಿಳಿಸುತ್ತಾರೆ ಎಂದು ಶತ್ರುಘ್ನ ಸಿನ್ಹಾ (Shatrughan Sinha) ಮಾತನಾಡಿದ್ದಾರೆ.
ಮಗಳ ಮದುವೆ (Wedding) ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಚುನಾವಣೆ ಫಲಿತಾಂಶದ ನಂತರ ನಾನೀಗ ದೆಹಲಿಯಲ್ಲಿದ್ದೇನೆ. ಮಗಳ ಮದುವೆ ಬಗ್ಗೆ ನನಗೆ ಏನನ್ನೂ ಹೇಳಿಲ್ಲ. ಮಾಧ್ಯಮದಲ್ಲಿ ಏನು ವರದಿ ಆಗಿದೆಯೋ ನನಗೂ ಅಷ್ಟೇ ತಿಳಿದಿದೆ. ಅವಳು ನಮಗೆ ಆಮಂತ್ರಣ ನೀಡಿದರೆ ನಾನು ಮತ್ತು ನನ್ನ ಪತ್ನಿ ಇಬ್ಬರೂ ಹೋಗಿ ಹಾರೈಸಿ ಬರುತ್ತೇವೆ. ಅವಳ ಸಂತೋಷವನ್ನು ಎಂದಿಗೂ ನಾವು ಬಯಸುತ್ತೇವೆ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ:ಬಾಲಯ್ಯಗೆ ‘ಅಖಂಡ’ ಚಿತ್ರದ ನಿರ್ದೇಶಕ ಆ್ಯಕ್ಷನ್ ಕಟ್
ಮಗಳು ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಶತ್ರುಘ್ನ ಸಿನ್ಹಾ ಮಾತನಾಡಿದ್ದಾರೆ. ನಮ್ಮ ಮಗಳ ನಿರ್ಧಾರ ಯಾವತ್ತೂ ಸರಿಯಾಗಿರುತ್ತದೆ ಎನ್ನುವ ವಿಶ್ವಾಸವಿದೆ. ಅವಳು ಎಂದಿಗೂ ಕಾನೂನುಬಾಹಿರ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ. ಮಗಳು ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಹೊಂದಿದ್ದಾಳೆ ಎಂದಿದ್ದಾರೆ. ನನ್ನ ಮಗಳ ಮದುವೆಯಲ್ಲಿ ಡ್ಯಾನ್ಸ್ ಮಾಡಲು ಇಷ್ಟಪಡುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಅಂದಹಾಗೆ, 2020ರಿಂದ ಸಲ್ಮಾನ್ ಖಾನ್ ಆಪ್ತ ನಟ ಝಹೀರ್ ಜೊತೆ ಸೋನಾಕ್ಷಿ ಡೇಟಿಂಗ್ ಮಾಡುತ್ತಿದ್ದಾರೆ. ಈಗ ಮದುವೆ ತಯಾರಿಯಲ್ಲಿ ನಟಿ ಬ್ಯುಸಿಯಾಗಿದ್ದಾರೆ.