Bollywood

ನಿಮ್ಮನ್ನು ತುಂಬಾ ಮಿಸ್ ಮಾಡ್ಕೊಳ್ತೇನೆ – ಐಟಿ ಅಧಿಕಾರಿಗಳಿಗೆ ಹೇಳಿದ್ರಂತೆ ಸೋನು ಸೂದ್

Published

on

Share this

ಮುಂಬೈ: ಐಟಿ ಅಧಿಕಾರಿಗಳು ಮನೆ ಮೇಲೆ ದಾಳಿ ಮಾಡಿ ಪರಿಶಿಲನೆ ನಡೆಸಿ ಹೊರಡುವಾಗ ‘ನಾನು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ’ ಎಂದು ಬಾಲಿವುಡ್ ನಟ ಸೋನು ಸೂದ್ ಹೇಳಿರುವುದಾಗಿ ತಿಳಿಸಿದ್ದಾರೆ.

ರಾಷ್ಟ್ರೀಯ ಪತ್ರಿಕೆಯ ಸಂದರ್ಶನದಲ್ಲಿ ಸೋನು ಸೂದ್ ಮಾತನಾಡುತ್ತಾ ಐಟಿ ಅಧಿಕಾರಿಗಳು ತಮ್ಮ ಮನೆ ಮೇಲೆ ದಾಳಿ ನಡೆಸಿದ ವಿಚಾರದ ಕುರಿತು ತಿಳಿಸಿದ್ದಾರೆ. ಐಟಿ ಅಧಿಕಾರಿಗಳು ಬರೋಬ್ಬರಿ ನಾಲ್ಕು ದಿನಗಳ ಕಾಲ ನಮ್ಮ ಮನೆಯಲ್ಲಿದ್ದರು. ಆ ಸಂದರ್ಭದಲ್ಲಿ ನಾನು ಅವರನ್ನು ಚೆನ್ನಾಗಿ ನೋಡಿಕೊಂಡಿದ್ದೇನೆ. ಹೀಗಾಗಿ ಅವರು ಖಂಡಿತವಾಗಿ ನನ್ನ ಆತಿಥ್ಯವನ್ನು ಮೆಚ್ಚಿಕೊಂಡಿದ್ದಾರೆ. ಅವರು ಮನೆಯಲ್ಲಿ ಪರೀಲನೆ ನಡೆಸಿ ಹೋಗುವಾಗ ‘ನಿಮ್ಮನ್ನು ನಾನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ ಎಂದು ಹೇಳಿರುವುದಾಗಿ ತಿಳಿಸಿದರು.

ವಿದೇಶ ದೇಣಿಗೆ ಸ್ವೀಕರಿಸಿರುವ ಸೋನು ಸೂದ್ ಅವರು ಸುಮಾರು 20 ಕೋಟಿ ರೂ. ತೆರಿಗೆ ವಂಚಿಸಿದ್ದಾರೆ ಎಂದು ಆರೋಪಿಸಿ ಐಟಿ ಅಧಿಕಾರಿಗಳು ಅವರ ಕಚೇರಿ ಹಾಗೂ ಮನೆ ಮೇಲೆ ದಾಳಿ ಮಾಡಿದ್ದರು. ಮುಂಬೈ ಕಚೇರಿ ಮತ್ತು ಲಕ್ನೋದಲ್ಲಿರುವ ಕಂಪನಿ ಸೇರಿದಂತೆ ಒಟ್ಟು ಆರು ಕಡೆ ಈ ದಾಳಿ ನಡೆದಿತ್ತು. ಸೋನು ಸೂದ್ ಕಂಪನಿ ಮತ್ತು ಲಕ್ನೋ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಯ ನಡುವಿನ ಇತ್ತೀಚಿಗೆ ಒಪ್ಪಂದ ನಡೆದಿತ್ತು. ಈ ಒಪ್ಪಂದದ ವೇಳೆ ತೆರಿಗೆ ವಂಚನೆ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ಹೇಳಲಾಗಿತ್ತು. ಇದನ್ನೂ ಓದಿ: ಮುಂಬೈ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡ ಐರಾವತ, ಭದ್ರ ಚೆಲುವೆಯರು

ಸೋನು ಸೂದ್ ಮೇಲೆ ಐಟಿ ದಾಳಿ ನಡೆಯುತ್ತಿರುವುದು ಇದೇ ಮೊದಲೆನಲ್ಲ. ಈ ಹಿಂದೆ 2012 ರಲ್ಲಿ ತೆರಿಗೆ ವಂಚನೆ ಆರೋಪದ ಮೇಲೆ ದಾಳಿ ನಡೆದಿತ್ತು. 48 ವರ್ಷದ ಸೋನ್ ಸೂದ್ ಎರಡು ದಶಕಗಳಿಂದ ಚಲನ ಚಿತ್ರರಂಗದಲ್ಲಿದ್ದಾರೆ. ಕೋವಿಡ್ 19 ಸಮಯದಲ್ಲಿ ಅವರು ನೀಡಿದ ಸಹಾಯ ಕಾರ್ಯ ದೇಶದೆಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿತ್ತು. ದೆಹಲಿ ಸರ್ಕಾರ ಕೆಲ ದಿನಗಳ ಹಿಂದೆ ಶಾಲಾ ವಿದ್ಯಾರ್ಥಿಗಳಿಗೆ ಆರಂಭಿಸಿರುವ ಮಾರ್ಗದರ್ಶನ ಕಾರ್ಯಕ್ರಮದ ರಾಯಭಾರಿಯಾಗಿ ಸೋನು ಸೂದ್ ಅವರನ್ನು ಆಯ್ಕೆ ಮಾಡಿತ್ತು. ಇದನ್ನೂ ಓದಿ: ಮಹಿಳೆಯರಿಗೆ ಸೂಟ್ ಆಗುವಂತಹ ಸ್ಯಾಟಿನ್ ಬೆಸ್ಟ್ ಪಾರ್ಟಿ ವೇರ್‌ಗಳು

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications