Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಕಾಂತಾರ’ ಸಿನಿಮಾ ನೋಡಿ ಕಣ್ಣೀರಿಟ್ಟ ಬಾಲಿವುಡ್ ನಟ ಸುನೀಲ್ ಶೆಟ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಕಾಂತಾರ’ ಸಿನಿಮಾ ನೋಡಿ ಕಣ್ಣೀರಿಟ್ಟ ಬಾಲಿವುಡ್ ನಟ ಸುನೀಲ್ ಶೆಟ್ಟಿ

Cinema

‘ಕಾಂತಾರ’ ಸಿನಿಮಾ ನೋಡಿ ಕಣ್ಣೀರಿಟ್ಟ ಬಾಲಿವುಡ್ ನಟ ಸುನೀಲ್ ಶೆಟ್ಟಿ

Public TV
Last updated: November 19, 2022 4:26 pm
Public TV
Share
2 Min Read
FotoJet 83
SHARE

ಕಾಂತಾರ ಸಿನಿಮಾ ಐವತ್ತು ದಿನಗಳ ಪೂರೈಸಿದ ನಂತರವೂ ಅದರ ಕ್ರೇಜ್ ಮಾತ್ರ ಇನ್ನೂ ನಿಂತಿಲ್ಲ. ಬಿಡುವಾದಾಗೆಲ್ಲ ಸಿಲೆಬ್ರಿಟಿಗಳು ಸಿನಿಮಾ ನೋಡಿ, ಅದರ ಬಗ್ಗೆ ಮಾತನಾಡುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೂ ಕಾಂತಾರದ ಬಗ್ಗೆ ಬರೆದುಕೊಳ್ಳುತ್ತಿದ್ದಾರೆ. ಮೊನ್ನೆಯಷ್ಟೇ ಸೂಪರ್ ಸ್ಟಾರ್ ರಜನಿಕಾಂತ್ ಸಿನಿಮಾ ನೋಡಿ, ರಿಷಬ್ ಶೆಟ್ಟಿ ಅವರನ್ನೇ ಮನೆಗೆ ಕರೆಯಿಸಿಕೊಂಡು ಸತ್ಕರಿಸಿದ್ದರು. ಇದೀಗ ಬಾಲಿವುಡ್ ನಟ ಸುನೀಲ್ ಶೆಟ್ಟಿ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.

KANTARA

‘ನಾನು ಕಾಂತಾರ ಸಿನಿಮಾ ನೋಡಿದೆ. ನನಗೆ ಅರಿವಿಲ್ಲದಂತೆ ಕಣ್ಣೀರು ಬಂತು. ತುಂಬಾ ಭಾವುಕನಾಗಿಬಿಟ್ಟೆ. ಯಾಕೆಂದರೆ, ನಾನು ಆ ನೆಲದವನು. ಅಲ್ಲಿ ಹುಟ್ಟಿ ಬೆಳೆದವನು. ಹಾಗಾಗಿ ಕಾಂತಾರ ಸಿನಿಮಾ ನನಗೆ ಬೇಗ ಕನೆಕ್ಟ್ ಆಯಿತು’ ಎಂದು ಮಾತನಾಡಿದ್ದಾರೆ. ರಿಷಬ್ ಶೆಟ್ಟಿ ಅವರ ನಿರ್ದೇಶನ ಹಾಗೂ ನಟನೆಯ ಬಗ್ಗೆಯೂ ಕೊಂಡಾಡಿದ್ದಾರೆ. ರಿಷಬ್ ಇಡೀ ಸಿನಿಮಾವನ್ನು ಆವರಿಸಿಕೊಂಡಿದ್ದಾರೆ. ಗ್ರೇಟ್ ಜಾಬ್ ಎಂದು ಹಾಡಿಹೊಗಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಸುನೀಲ್ ಶೆಟ್ಟಿ, ಕನ್ನಡದ ಸಿನಿಮಾ ಬಗ್ಗೆ ಹೆಮ್ಮೆ ಪಟ್ಟಿದ್ದಾರೆ. ಇದನ್ನೂ ಓದಿ:ನಾವು ನಟರಿಗೆ ಹೆಚ್ಚು ಕ್ರೆಡಿಟ್ ನೀಡುತ್ತೇವೆ: ಪ್ರಿಯಾಂಕಾ ಚೋಪ್ರಾ

kantara 4

‘ಕಾಂತಾರ’ ಚಿತ್ರವು ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿದೆ. ಸೆ. 30ರಂದು ಬಿಡುಗಡೆಯಾದ ಚಿತ್ರವು ರಾಜ್ಯದ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲದೆ, ವಿದೇಶಗಳಲ್ಲೂ ಹಲವು ಚಿತ್ರಮಂದಿರಗಳಲ್ಲಿ 50 ದಿನಗಳನ್ನು ಮುಗಿಸಿ, 100ನೇ ದಿನದತ್ತ ದಾಪುಗಾಲಿಟ್ಟಿದೆ. ಬರೀ ಕನ್ನಡವಷ್ಟೇ ಅಲ್ಲ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂಗೆ ಡಬ್ ಆಗಿರುವ ‘ಕಾಂತರ’, ಅಲ್ಲೂ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದ್ದು, ಸದ್ಯದಲ್ಲೇ ಅಲ್ಲೂ 50 ದಿನಗಳನ್ನು ಪೂರೈಸಲಿದೆ.

kantara 3

‘ಕೆಜಿಎಫ್ 1’ ಮತ್ತು ‘ಕೆಜಿಎಫ್ 2’ ಚಿತ್ರಗಳ ಮೂಲಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲರೂ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ್ದು ಹೊಂಬಾಳೆ ಫಿಲಂಸ್. ಈಗ ಅದೇ ಸಂಸ್ಥೆಯಿಂದ ನಿರ್ಮಾಣವಾಗಿರುವ ‘ಕಾಂತಾರ’ ಚಿತ್ರವನ್ನು ಮನೆ ಮಂದಿಯೆಲ್ಲಾ ನೋಡಿ ಇಷ್ಟಪಟ್ಟಿದ್ದಾರೆ. ಹಿರಿಯರಿಂದ ಕಿರಿಯರವರೆಗೂ ಎಲ್ಲರೂ ಮೆಚ್ಚಿಕೊಂಡಿರುವ ಈ ಚಿತ್ರ ಎಲ್ಲರಿಗೂ ಇಷ್ಟವಾಗುವುದಕ್ಕೆ ಕಾರಣ ಚಿತ್ರದ ಕಥೆ ಮತ್ತು ಮೇಕಿಂಗ್. ಹೊಂಬಾಳೆ ಫಿಲಂಸ್ ಮೊದಲಿನಿಂದಲೂ ಕಥೆಗೆ ವಿಶೇಷವಾದ ಪ್ರಾಮುಖ್ಯತೆ ನೀಡುತ್ತಾ ಬಂದಿದ್ದು, ಈಗಾಗಲೇ ‘ರಾಜ್ಕುಮಾರ’, ‘ಯುವರತ್ನ’, ‘ಕೆಜಿಎಫ್’ ಮುಂತಾದ ಚಿತ್ರಗಳು ಈ ವಿಷಯವನ್ನು ನಿರೂಪಿಸಿದೆ. ಈಗ ‘ಕಾಂತಾರ’ ಸಹ ಇದೇ ನಿಟ್ಟಿನಲ್ಲಿ ಸಾಗಿರುವುದಷ್ಟೇ ಅಲ್ಲ, ‘ಕೆಜಿಎಫ್’ ಸರಣಿಯ ನಂತರ ಒಂದೇ ಸಂಸ್ಥೆಯ ಇನ್ನೊಂದು ಚಿತ್ರ ಸಹ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿರುವುದು ವಿಶೇಷ.

kantara 3 1

ಬರೀ ಕನ್ನಡವಷ್ಟೇ ಅಲ್ಲ, ಮುಂದಿನ ದಿನಗಳಲ್ಲಿ ಒಟ್ಟು ಐದು ಭಾಷೆಗಳಲ್ಲಿ ಏಕಕಾಲಕ್ಕೆ ಹೊಂಬಾಳೆ ಫಿಲಂಸ್ ಸಂಸ್ಥೆಯು ಹಲವು ಚಿತ್ರಗಳನ್ನು ನಿರ್ಮಿಸುತ್ತಿದೆ. ಒಂದೇ ಸಂಸ್ಥೆಯಿಂದ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರ ನಿರ್ಮಾಣ ಮಾಡುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಷ್ಟೇ ಅಲ್ಲ, ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ.

Live Tv
[brid partner=56869869 player=32851 video=960834 autoplay=true]

TAGGED:bollywoodKannirKantaraRishabh ShettySunil Shettyಕಣ್ಣೀರುಕಾಂತಾರಬಾಲಿವುಡ್ರಿಷಬ್ ಶೆಟ್ಟಿಸುನೀಲ್ ಶೆಟ್ಟಿ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Alexander Leonov
Latest

ಬ್ರಹ್ಮೋಸ್ ಕ್ಷಿಪಣಿ ಅಭಿವೃದ್ಧಿಪಡಿಸಿದ್ದ ರಷ್ಯಾದ ಅಲೆಕ್ಸಾಂಡರ್ ಲಿಯೊನೊವ್ ನಿಧನ

Public TV
By Public TV
5 hours ago
rcb
Bengaluru City

ತವರಲ್ಲಿ ಅಬ್ಬರಿಸಿ ಬೊಬ್ಬಿರಿದ RCB – ಚೆನ್ನೈ ವಿರುದ್ಧ 43 ರನ್‌ಗಳ ಭರ್ಜರಿ ಜಯ – ಪಾಯಿಂಟ್‌ ಪಟ್ಟಿಯಲ್ಲಿ ನಂ.1

Public TV
By Public TV
5 hours ago
SHARANYA 1
Districts

ನಾನು ಇದಕ್ಕಿಂತಲೂ ಕಠಿಣ ಟ್ರಕ್ಕಿಂಗ್‌ನಲ್ಲಿ ಭಾಗಿಯಾಗಿದ್ದೆ, ದಾರಿ ತಪ್ಪಿ ಕಾಡಿನಲ್ಲಿ ಸಿಲುಕಿದ್ದೆ: ಶರಣ್ಯ

Public TV
By Public TV
6 hours ago
Weather
Districts

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ಆರ್ಭಟ – ಆರೋಗ್ಯ ಇಲಾಖೆ ಅಲರ್ಟ್

Public TV
By Public TV
6 hours ago
siddu bommai
Bagalkot

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬೊಮ್ಮಾಯಿ

Public TV
By Public TV
7 hours ago
Boeing 787 air india dreamliner
Latest

ಮೇ 31 ರವರೆಗೆ ಇಸ್ರೇಲ್‌ಗೆ ಏರ್ ಇಂಡಿಯಾ ವಿಮಾನ ಹಾರಾಟ ಸ್ಥಗಿತ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?