ಹಲವು ವರ್ಷಗಳಿಂದ ಖ್ಯಾತನಟಿ ಐಶ್ವರ್ಯ ರೈ (Aishwarya Rai) ಯಾವುದೇ ಬಾಲಿವುಡ್ ಸಿನಿಮಾಗಳನ್ನು ಒಪ್ಪಿಕೊಳ್ಳದೇ ಇದ್ದರೂ, ದಕ್ಷಿಣದ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ರಿಲೀಸ್ ಆಗಿರುವ ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್ 2’ ಚಿತ್ರದಲ್ಲಿ ನಟಿಸಿ ಗಮನ ಸೆಳೆದಿದ್ದರು. ಈಗ ತೆಲುಗಿನ (Telugu) ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಚಿರಂಜೀವಿ (Chiranjeevi) ನಟಿಸಲಿರುವ ಹೊಸ ಚಿತ್ರಕ್ಕೆ ಐಶ್ವರ್ಯ ರೈ ನಾಯಕಿಯಂತೆ.
ಸಿನಿಮಾಗಳ ಆಯ್ಕೆಯ ವಿಷಯದಲ್ಲಿ ನಾನು ತುಂಬಾ ಚ್ಯೂಸಿಯಾಗಿದ್ದೇನೆ. ಹಾಗಾಗಿ ಸಿಕ್ಕ ಸಿಕ್ಕ ಸಿನಿಮಾಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಐಶ್ವರ್ಯ ಹಲವಾರು ಬಾರಿ ಹೇಳಿದ್ದಿದೆ. ಅವರು ಹೇಳಿದಂತೆ ನಡೆದುಕೊಂಡೂ ಇದ್ದಾರೆ. ಈ ಕಾರಣದಿಂದಾಗಿ ಅವರು ಹೆಚ್ಚೆಚ್ಚು ದಕ್ಷಿಣ ಭಾರತದ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈ ಮೂಲಕ ದಕ್ಷಿಣ ಭಾರತದ ಸಿನಿಮಾಗಳ ಘನತೆಯನ್ನು ಎತ್ತಿ ಹಿಡಿಯುತ್ತಿದ್ದಾರೆ.
ಐಶ್ವರ್ಯ ರೈ ಈ ಹಿಂದೆ ತಮಿಳು ಚಿತ್ರಕ್ಕೆ ಸಹಿ ಮಾಡಿದ್ದರು ಎಂದು ಹೇಳಲಾಗಿತ್ತು. ಅಜಿತ್ ಕುಮಾರ್ (Ajith) ಈ ಸಿನಿಮಾದ ನಾಯಕ ಎಂದೂ ವರದಿಯಾಗಿತ್ತು. ಅಜಿತ್ ನಟನೆಯ ವಾರಿಸು ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಭರ್ಜರಿ ಕಲೆಕ್ಷನ್ ಮಾಡಿರುವ ಬೆನ್ನಲ್ಲೇ ಅವರ ಹೊಸ ಸಿನಿಮಾ ಕೂಡ ಘೋಷಣೆಯಾಗಿತ್ತು, ಈ ಸಿನಿಮಾದಲ್ಲಿ ಐಶ್ವರ್ಯ ರೈ ಪ್ರಮುಖ ಪಾತ್ರವನ್ನು ನಿರ್ವಹಿಸಲಿದ್ದಾರೆ ಎನ್ನುವ ಸುದ್ದಿಯೂ ಆಗಿತ್ತು.
ಐಶ್ವರ್ಯ ರೈ ಅವರಿಗೆ ಸಹಜವಾಗಿಯೇ ದಕ್ಷಿಣದಲ್ಲಿ ಬೇಡಿಕೆ ಹೆಚ್ಚಾಗಿದೆ. ಅದರಲ್ಲೂ ಕೋಟಿ ಕೋಟಿ ಕಲೆಕ್ಷನ್ ಅನ್ನು ಅವರ ಚಿತ್ರಗಳು ಗಳಿಸುತ್ತಿವೆ. ಹಾಗಾಗಿ ಐಶ್ವರ್ಯ ಅವರಿಗೆ ದಕ್ಷಿಣದ ಚಿತ್ರಗಳಲ್ಲಿ ನಟಿಸಲು ಹೆಚ್ಚೆಚ್ಚು ಅವಕಾಶಗಳು ಸಿಗುತ್ತಿವೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]