‘ಪುಷ್ಪ 2′ ಸಿನಿಮಾದ (Pushpa 2) ಸಕ್ಸಸ್ ಬಳಿಕ ಅಲ್ಲು ಅರ್ಜುನ್ ಇದೀಗ ‘ಜವಾನ್’ (Jawan) ಡೈರೆಕ್ಟರ್ ಅಟ್ಲಿ ಜೊತೆ ಕೈಜೋಡಿಸಿದ್ದಾರೆ. ಇದೀಗ ಈ ಚಿತ್ರಕ್ಕೆ ನಾಯಕಿಯಾಗಿ ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ನಟಿಸಲಿದ್ದಾರೆ ಎನ್ನಲಾದ ಸುದ್ದಿಯೊಂದು ಹರಿದಾಡುತ್ತಿದೆ. ಇದನ್ನೂ ಓದಿ:ಯಶ್ ತಾಯಿ ನಿರ್ಮಾಣದ ಸಿನಿಮಾದಲ್ಲಿ ಪೃಥ್ವಿ ಅಂಬರ್- ’ಕೊತ್ತಲವಾಡಿ’ ಚಿತ್ರದ ಪೋಸ್ಟರ್ ಔಟ್
ಅಟ್ಲಿ ಸಿನಿಮಾದಲ್ಲಿ ಅಲ್ಲು ಅರ್ಜುನ್ (Allu Arjun) ಅವರು ತ್ರಿಬಲ್ ರೋಲ್‌ನಲ್ಲಿ ನಟಿಸಲಿದ್ದಾರಂತೆ. ಹಾಗಾಗಿ ಅದರಲ್ಲಿ ಒಂದು ಪಾತ್ರಕ್ಕೆ ಅಲ್ಲು ಅರ್ಜುನ್‌ಗೆ ಜೋಡಿಯಾಗಿ ನಟಿಸಲು ಅನನ್ಯಾ (Ananya Panday) ಅವರನ್ನು ಚಿತ್ರತಂಡ ಸಂಪರ್ಕಿಸಿದೆ ಎನ್ನಲಾಗಿದೆ. ಆದರೆ ಈ ಸಿನಿಮಾದಲ್ಲಿ ನಟಿಸಲು ನಟಿ ಒಪ್ಪಿಕೊಂಡ್ರಾ ಎಂಬುದು ಚಿತ್ರತಂಡದ ಕಡೆಯಿಂದ ಖಾತ್ರಿಯಾಗಬೇಕಿದೆ.
ಈ ಹಿಂದೆ ವಿಜಯ್ ದೇವರಕೊಂಡಗೆ ನಾಯಕಿಯಾಗಿ ಅನನ್ಯಾ ‘ಲೈಗರ್’ ಸಿನಿಮಾದಲ್ಲಿ ನಟಿಸಿದ್ದರು. ಹಾಗಾಗಿ ತೆಲುಗಿನ ನಟ ಅಲ್ಲು ಅರ್ಜುನ್ ಸಿನಿಮಾದಲ್ಲಿ ಅವರು ನಟಿಸಲಿದ್ದಾರೆ ಎನ್ನಲಾದ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ: ಪ್ರತಿ ಜನ್ಮಕೂ ನೀನೇ ಬೇಕು – ಚಿರು ಜೊತೆಗಿನ ಸ್ಪೆಷಲ್ ಫೋಟೋ ಹಂಚಿಕೊಂಡ ಮೇಘನಾ
ಅನನ್ಯಾ ಪಾಂಡೆ ಅವರು ಬಾಲಿವುಡ್‌ನಲ್ಲಿ ಬ್ಯುಸಿಯಾಗಿದ್ದಾರೆ. ಅವರು ನಟಿಸುತ್ತಿರುವ ಸಿನಿಮಾ ಸಕ್ಸಸ್ ಕಾಣದೇ ಇದ್ದರೂ ಅವರಿಗೆ ಬೇಡಿಕೆ ಕಮ್ಮಿಯಾಗಿಲ್ಲ.