ರಾಮ್ ಗೋಪಾಲ್ ವರ್ಮ ನಿರ್ದೇಶನದ ‘ಡೇಂಜರಸ್’ ಚಿತ್ರದ ಮೂಲಕ ಜನಪ್ರಿಯರಾಗಿರುವ ನಟಿ ಅಪ್ಸರ ರಾಣಿ (Apsara Rani) ಇದೇ ಮೊದಲ ಬಾರಿಗೆ ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ. ಎಂ.ಶಂಕರ್ ನಿರ್ದೇಶನದ ‘ಮುದುಡಿದ ಎಲೆಗಳು’ ಚಿತ್ರದ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಪ್ಸರ ರಾಣಿ ಅಭಿನಯಿಸಿದ ಹಾಡಿನ ಚಿತ್ರೀಕರಣ ಇತ್ತೀಚಿಗೆ ಹೆಬ್ಬಾಳದ ಪಶು ವೈದ್ಯಕೀಯ ಕಾಲೇಜಿನಲ್ಲಿ ನಡೆಯಿತು. ಇದನ್ನೂ ಓದಿ:ಖ್ಯಾತ ಗಾಯಕಿ ಉಷಾ ಉತ್ತುಪ್ ಪತಿ ಹೃದಯಾಘಾತದಿಂದ ನಿಧನ
ದುಬಾರಿ ಕಾರೊಂದರಲ್ಲಿ ಕಾಲೇಜ್‌ಗೆ ಕಾಲಿಟ್ಟ ಹುಡುಗಿಯ ಸೌಂದರ್ಯ ಹಾಗೂ ಸ್ಟೈಲ್‌ಗೆ ಕಾಲೇಜು ಹುಡುಗರು ಮಾರು ಹೋಗುತ್ತಾರೆ. ಹೊಸದಾಗಿ ಕಾಲೇಜು ಸೇರಿರುವ ಹುಡುಗಿ ಇರಬಹುದು ಎಂದು ಹುಡುಗರು ಆಲೋಚಿಸುತ್ತಿದ್ದಾಗ, ಅವರು ಕಾಲೇಜು ಸೇರಲು ಬಂದಿರುವ ಹುಡುಗಿಯಲ್ಲ. ಕೆಮಿಸ್ಟಿç ಟೀಚರ್ ಅಂತ ಗೊತ್ತಾಗುತ್ತದೆ. ಇದನ್ನು ನಿರ್ದೇಶಕರು ಹಾಡಿನ ಮೂಲಕ ತೋರಿಸಿದ್ದಾರೆ. ಭಜರಂಗಿ ಮೋಹನ್ ನೃತ್ಯ ಸಂಯೋಜಿಸಿದ ಈ ಹಾಡಿನಲ್ಲಿ ಅಪ್ಸರ ರಾಣಿ, ರಂಜಿತ್ ಕುಮಾರ್ ಹಾಗೂ ಪಂಕಜ್ ನಾರಾಯಣ್ ಅಭಿನಯಿಸಿದ್ದರು.
‘ಮುದುಡಿದ ಎಲೆಗಳು’ ಚಿತ್ರಕ್ಕೆ ಈಗಾಗಲೇ ಎಂಭತ್ತರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಕೆಲವು ಭಾಗಗಳ ಚಿತ್ರೀಕರಣ ಮಾತ್ರ ಬಾಕಿಯದೆ. ಒಂದು ಹಾಡಿನ ಚಿತ್ರೀಕರಣ ಕಾಶ್ಮೀರದಲ್ಲಿ ನಡೆದಿದೆ. ಮತ್ತೊಂದು ಹಾಡು ತಜಿಕಿಸ್ತಾನದಲ್ಲಿ ಚಿತ್ರೀಕರಣಗೊಳ್ಳಲಿದೆ. ‘ಮುದುಡಿದ ಎಲೆಗಳು’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ನಿರ್ದೇಶಕ ಎಂ.ಶಂಕರ್ ಬರೆದಿದ್ದಾರೆ. ರಂಜನಿ ಈ ಚಿತ್ರದ ಸಹ ನಿರ್ಮಾಪಕಿ. ವಿಕಾಸ್ ವಸಿಷ್ಠ ಸಂಗೀತ ನಿರ್ದೇಶನ ನಿರ್ದೇಶನವಿರುವ ಈ ಚಿತ್ರಕ್ಕೆ ಶ್ಯಾಮ್ ಸಿಂಧನೂರು ಅವರ ಛಾಯಾಗ್ರಹಣವಿದೆ.
ರಂಜಿತ್ ಕುಮಾರ್ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಪಂಕಜ್ ನಾರಾಯಣ್, ಪಾವನ ಗೌಡ, ನಿಕಿತಾ ಸ್ವಾಮಿ, ಸೂರ್ಯದರ್ಶನ್, ಪ್ರೀತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಅಪ್ಸರ ರಾಣಿ, ಕೊಡಗಿನ ಬೆಡಗಿ ಹರ್ಷಿಕಾ, ರಮೇಶ್ ಭಟ್, ಭವ್ಯ, ಶೋಭ್ ರಾಜ್, ಶಂಕರ್ ಅಶ್ವತ್ಥ್, ಪೂನಂ ಪಾಂಡೆ, ಪದ್ಮಾ ವಾಸಂತಿ, ಜೋಸೈಮನ್ ಮುಂತಾದವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.