ಮುಂಬೈ: ಬಾಲಿವುಡ್ ನಟಿ ಬಿಪಾಶಾ ಬಸು ತೀವ್ರ ಉಸಿರಾಟದ ಸಮಸ್ಯೆಯಿಂದ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇತ್ತೀಚೆಗೆ ಬಿಪಾಶಾ ಬಸು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಅಲ್ಲದೇ ಆಗಾಗ ಆಸ್ಪತ್ರೆಗೂ ಕೂಡ ಭೇಟಿ ನೀಡುತ್ತಿದ್ದರು. ಆದರೆ ಈಗ ಅವರಿಗೆ ಉಸಿರಾಟದ ಸಮಸ್ಯೆ ಹೆಚ್ಚಾಗಿದ್ದು, ಆಸ್ಪತ್ರೆಯಲ್ಲೇ ದಾಖಲಾಗಿದ್ದಾರೆ.
ಬಿಪಾಶಾ ಆರೋಗ್ಯದ ಬಗ್ಗೆ ಆಕೆಯ ಕುಟುಂಬದವರಾಗಲೀ ಅಥವಾ ಸ್ನೇಹಿತರಾಗಲಿ ಅಧಿಕೃತವಾಗಿ ಯಾವುದೇ ಮಾಹಿತಿ ನೀಡುತ್ತಿಲ್ಲ. ಸದ್ಯ ಬಿಪಾಶಾ ಅವರನ್ನು ಎಲ್ಲಾ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲು ಶುರು ಮಾಡಿದ್ದಾರೆ.