ಬಾಲಿವುಡ್ ಬೆಡಗಿ ಜಾಕ್ವೆಲಿನ್ (Jacqueline Fernandez) ತಾಯಿ ಕಿಮ್ ಫರ್ನಾಂಡಿಸ್ (Kim Fernandez) ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ:’ಸಿಕಂದರ್’ ಚಿತ್ರದ ಟ್ರೈಲರ್‌ನಲ್ಲಿ ಮಿಂಚಿದ ಕನ್ನಡಿಗ ಕಿಶೋರ್
View this post on Instagram
‘ವಿಕ್ರಾಂತ್ ರೋಣ’ ನಟಿ ಜಾಕ್ವೆಲಿನ್ ತಾಯಿ ಕಿಮ್‌ರನ್ನು ಐಸಿಯುಗೆ ದಾಖಲಿಸಲಾಗಿದೆ. ಆದರೆ ಅವರ ವೈದ್ಯಕೀಯ ಸ್ಥಿತಿಯ ಬಗ್ಗೆ ಯಾವುದೇ ವಿಚಾರ ಬಹಿರಂಗ ಆಗಿಲ್ಲ. ಇನ್ನೂ ಈ ಸುದ್ದಿ ತಿಳಿದ ಕೂಡಲೇ ಜಾಕ್ವೆಲಿನ್ ಕೂಡ ತಾಯಿಯನ್ನು ನೋಡಲು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಅವರ ತಾಯಿಗೆ ಏನಾಗಿದೆ ಎಂಬುದರ ಬಗ್ಗೆ ಜಾಕ್ವೆಲಿನ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
View this post on Instagram
ಇನ್ನೂ ಜಾಕ್ವೆಲಿನ್ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಿರುವ ವಿಚಾರವನ್ನು ಸೆಲೆಬ್ರಿಟಿ ಛಾಯಾಗ್ರಾಹಕ ವೈರಲ್ ಭಯಾನಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಟಿಯ ತಾಯಿಯನ್ನು ಐಸಿಯುನಲ್ಲಿ ದಾಖಲಿಸಿರೋದಾಗಿ ತಿಳಿಸಿದ್ದಾರೆ.