ಮಧ್ಯಪ್ರದೇಶ ವಿಧಾನಸಭೆ ಸ್ಪೀಕರ್ ನರೇಂದ್ರ ಸಿಂಗ್ ತೋಮರ್ (Narendra Singh Tomar) ಪುತ್ರ ಪ್ರಬಲ್ ಪ್ರತಾಪ್ ತೋಮರ್ ಮದುವೆ ಅದ್ಧೂರಿಯಾಗಿ ಜರುಗಿದೆ. ಈ ಮದುವೆಯಲ್ಲಿ ‘ವಿಕ್ರಾಂತ್ ರೋಣ’ ನಟಿ ಜಾಕ್ವೆಲಿನ್ (Jacqueline Fernandez) ಡ್ಯಾನ್ಸ್ ಮಾಡಿರೋದು ಸಖತ್ ವೈರಲ್ ಆಗಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ಇದನ್ನೂ ಓದಿ:ಪ್ರತಿ ಜನ್ಮಕೂ ನೀನೇ ಬೇಕು – ಚಿರು ಜೊತೆಗಿನ ಸ್ಪೆಷಲ್ ಫೋಟೋ ಹಂಚಿಕೊಂಡ ಮೇಘನಾ
ಜೈಪುರನ ಜೈಮಹಲ್ ಅರಮನೆಯಲ್ಲಿ ಅರುಂಧತಿ ಸಿಂಗ್ ರಾಜಾವತ್ ಜೊತೆ ಪ್ರಬಲ್ (Prabal Pratap Tomar) ಮದುವೆ ಗ್ರ್ಯಾಂಡ್ ಆಗಿ ನಡೆದಿದೆ. ಹಾಗಾಗಿ ಬಿಜೆಪಿ ಮುಖಂಡ ನರೇಂದ್ರ ತೋಮರ್ ಮಗನ ಮದುವೆಯಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಸೊಂಟ ಬಳುಕಿಸಿರೋದು ಅನೇಕರ ಕೆಂಗಣ್ಣಿಗೆ ಗುರಿಯಾಗಿದೆ. ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಮಂದಿ ಬಲಿಯಾಗಿದ್ದಾರೆ. ದೇಶವು ದಾಳಿಯ ಬಗ್ಗೆ ಶೋಕಿಸುತ್ತಿರುವಾಗ ನರೇಂದ್ರ ತೋಮರ್ ಪುತ್ರನ ಮದುವೆಯಲ್ಲಿ ಜಾಕ್ವೆಲಿನ್ ಅವರನ್ನು ಕರೆಸಿ ಡ್ಯಾನ್ಸ್ ಮಾಡಿಸೋದು ಬೇಕಿತ್ತಾ? ಎಂದು ನೆಟ್ಟಿಗರು ಕೆಂಡಕಾರಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಟೀಕಿಸಿದ್ದಾರೆ. ಇದನ್ನೂ ಓದಿ:ಯಶ್ ತಾಯಿ ನಿರ್ಮಾಣದ ಸಿನಿಮಾದಲ್ಲಿ ಪೃಥ್ವಿ ಅಂಬರ್- ’ಕೊತ್ತಲವಾಡಿ’ ಚಿತ್ರದ ಪೋಸ್ಟರ್ ಔಟ್
Jacqueline Fernandez performed in #Gwalior at Prabal Pratap Singh Tomar wedding. pic.twitter.com/yEa51dfiSD
— SouLSteer Gwalior (@SouLSteer) April 28, 2025
ಈ ಮದುವೆಯಲ್ಲಿ ರಾಜಕೀಯ ಗಣ್ಯರಾದ ರಾಜಸ್ಥಾನದ ರಾಜ್ಯಪಾಲ ಹರಿಭಾವು ಬಾಗ್ಡೆ, ಸಿಕ್ಕಿಂ ರಾಜ್ಯಪಾಲ ಓಂ ಮಾಥೂರ್, ರಾಜಸ್ಥಾನ ಸಿಎಂ ಭಜನ್‌ಲಾಲ್ ಶರ್ಮಾ, ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು.