ಕರ್ನಾಟಕ ಚಲನಚಿತ್ರ ಅಕಾಡೆಮಿ (Academy) ನಡೆಸುವ ಬೆಂಗಳೂರು (Bangalore) ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ (Film Festival) ಈ ಬಾರಿ ಬಾಲಿವುಡ್ ನಟಿ ರೇಖಾ (Rekha) ಅತಿಥಿಯಾಗಿ (Guest) ಭಾಗಿಯಾಗಲಿದ್ದಾರೆ. ಈ ಕುರಿತು ಸ್ವತಃ ಕಂದಾಯ ಸಚಿವ ಆರ್.ಅಶೋಕ್ ಅವರೇ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮಾರ್ಚ್ ನಲ್ಲಿ ಚಿತ್ರೋತ್ಸವ ನಡೆಯಲಿದ್ದು, ನಾಳೆ ಫಿಲ್ಮ್ ಫೆಸ್ಟಿವಲ್ ಲೋಗೋವನ್ನು ಲಾಂಚ್ ಮಾಡಲಾಗುತ್ತಿದೆ ಎನ್ನುವ ಮಾಹಿತಿಯನ್ನೂ ಅವರು ಹಂಚಿಕೊಂಡಿದ್ದಾರೆ.
Advertisement
ಅಂದುಕೊಂಡಂತೆ ಆಗಿದ್ದರೆ ಫೆಬ್ರವರಿಯಲ್ಲೇ ಚಿತ್ರೋತ್ಸವ ನಡೆಯಬೇಕಿತ್ತು. ಆದರೆ, ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಸರಕಾರದಿಂದ ಈವರೆಗೂ ಯಾವುದೇ ಅನುದಾನ ಬಾರದೇ ಇರುವ ಕಾರಣದಿಂದಾಗಿ ಈ ತಿಂಗಳು ನಡೆಸಲಿಕ್ಕೆ ಆಗಲಿಲ್ಲ. ಚಿತ್ರೋತ್ಸವ ನಡೆಯುವುದಕ್ಕೆ ಬರೋಬ್ಬರಿ ಮೂರು ತಿಂಗಳ ಕಾಲ ಸಿದ್ಧತೆ ಬೇಕು ಎನ್ನುವುದು ಅಕಾಡೆಮಿಯಲ್ಲಿ ಕೆಲಸ ಮಾಡಿರುವವರ ಹೇಳಿಕೆ. ಆದರೆ, ಕಂದಾಯ ಸಚಿವರು ಮಾರ್ಚ್ ನಲ್ಲಿ ಚಿತ್ರೋತ್ಸವ ನಡೆಸುವುದಾಗಿ ಹೇಳಿದ್ದಾರೆ. ಈ ಕುರಿತು ನಾಳೆ ಅವರು ವಿವರಣೆ ನೀಡುತ್ತಾರೆ ಎನ್ನುವುದು ನಿರೀಕ್ಷೆ. ಇದನ್ನೂ ಓದಿ: ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ನಿಧನ
Advertisement
Advertisement
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿಸಂಹಿತೆ ಜಾರಿ ಆಗುವ ಮುನ್ನವೇ ಚಿತ್ರೋತ್ಸವ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಮಾಡಬೇಕು ಎನ್ನುವುದು ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಲಾಗಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ನಾಲ್ಕು ವರ್ಷಗಳಿಂದ ಚಲನಚಿತ್ರ ಪ್ರಶಸ್ತಿಗಳನ್ನೂ ನೀಡಿಲ್ಲ. ಕನಿಷ್ಠ ಎರಡು ವರ್ಷಗಳ ಪ್ರಶಸ್ತಿ ಪ್ರದಾನ ಸಮಾರಂಭ ಮಾಡುವ ತರಾತುರಿ ಕೂಡ ನಡೆದಿದೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಮಾರ್ಚ್ ನಲ್ಲಿ ಅಂದುಕೊಂಡಿರುವ ಕಾರ್ಯಕ್ರಮಗಳು ನಡೆಯುತ್ತಿವೆಯಾ ಎಂದು ಕಾದು ನೋಡಬೇಕು.
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k