ಬಾಲಿವುಡ್‌ನ ಖ್ಯಾತ ನಟಿ ಟಬು (Tabu) ಕಾಲಿವುಡ್‌ನತ್ತ (Kollywood) ಮುಖ ಮಾಡಿದ್ದಾರೆ. ವಿಜಯ್ ಸೇತುಪತಿ (Vijay Sethupathi) ನಟನೆಯ ಸಿನಿಮಾಗೆ ಟಬು ಎಂಟ್ರಿ ಕೊಟ್ಟಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸ್ವತಃ ಡೈರೆಕ್ಟರ್ ಪುರಿ ಜಗನ್ನಾಥ್ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಬೇಬಿ ಬಂಪ್ ಫೋಟೋ ಹಂಚಿಕೊಂಡ ಸಂಜನಾ ಗಲ್ರಾನಿ
ಬಗೆ ಬಗೆಯ ಪಾತ್ರಗಳ ಮೂಲಕ ಹಿಂದಿ ಚಿತ್ರರಂಗದಲ್ಲಿ ಕಮಾಲ್ ಮಾಡಿರೋ ಟಬು ಈಗ ತಮಿಳಿನ ಸಿನಿಮಾಗೆ ಓಕೆ ಎಂದಿದ್ದಾರೆ. ನಟಿಯ ಜೊತೆಗಿನ ಫೋಟೋ ಶೇರ್ ಮಾಡಿ, ಭಾರತೀಯ ಸಿನಿಮಾರಂಗದ ಹೆಮ್ಮೆ ಟಬು ನಮ್ಮ ಚಿತ್ರತಂಡ ಸೇರುತ್ತಿರೋದಕ್ಕೆ ಸ್ವಾಗತ ಎಂದು ನಿರ್ದೇಶಕ ಪುರಿ ಜಗನ್ನಾಥ್ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ವಿದ್ಯಾಪತಿಗೆ ನಡುಕ ಹುಟ್ಟಿಸಿದ ‘ಕೆಜಿಎಫ್’ ಗರುಡ!
View this post on Instagram
ವಿಜಯ್ ಸೇತುಪತಿಯವರಿಗಾಗಿಯೇ ನಿರ್ದೇಶಕ ಒಂದೊಳ್ಳೆಯ ಅದ್ಭುತ ಕಥೆಯನ್ನು ಸಿದ್ಧಪಡಿಸಿಕೊಂಡಿದ್ದು, ಹಿಂದೆಂದೂ ಕಾಣದ ಲುಕ್‌ನಲ್ಲಿ ಅವರನ್ನು ಪ್ರೇಕ್ಷಕರಿಗೆ ತೋರಿಸಲಿದ್ದಾರೆ. ಟಬು ಕೂಡ ಪವರ್‌ಫುಲ್ ರೋಲ್‌ನಲ್ಲಿ ನಟಿಸಲಿದ್ದಾರೆ.
ಪುರಿ ಕನೆಕ್ಟ್ಸ್ ಬ್ಯಾನರ್ ನಡಿ ಪುರಿ ಜಗನ್ನಾಥ್ ಹಾಗೂ ಚಾರ್ಮಿ ಕೌರ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇದು ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಆಗಿದ್ದು, ಜೂನ್ ತಿಂಗಳಿನಿಂದ ಚಿತ್ರೀಕರಣ ಶುರುವಾಗಲಿದೆ. ಇತ್ತೀಚೆಗೆ ವಿಜಯ್ ಸೇತುಪತಿ ಅಭಿನಯದ ‘ಮಹಾರಾಜ’ ಸಿನಿಮಾ ಬಾಕ್ಸಾಫೀಸ್‌ನಲ್ಲಿ ದಾಖಲೆ ಬರೆದಿತ್ತು.