ಕಾನ್ 2025: ಸಿಂಧೂರ ಹಣೆಗಿಟ್ಟು ರೆಡ್ ಕಾರ್ಪೆಟ್‌ನಲ್ಲಿ ಮಿಂಚಿದ ಐಶ್ವರ್ಯಾ ರೈ

Public TV
1 Min Read
aishwarya rai

ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಬಾಲಿವುಡ್ ಬೆಡಗಿ ಐಶ್ವರ್ಯಾ ರೈ (Aishwarya Rai) ಮಿಂಚಿದ್ದಾರೆ. ಸಿಂಧೂರ ಹಣೆಗಿಟ್ಟು ರೆಡ್ ಕಾರ್ಪೆಟ್‌ನಲ್ಲಿ ನಟಿ ಹೆಜ್ಜೆ ಹಾಕಿದ್ದಾರೆ. ಈ ಮೂಲಕ ಡಿವೋರ್ಸ್ ವದಂತಿ ಹಬ್ಬಿಸುವರಿಗೆ ನಟಿ ತಕ್ಕ ಉತ್ತರ ನೀಡಿದ್ದಾರೆ. ಇದನ್ನೂ ಓದಿ:Exclusive: ಕಾಮಿಡಿ ಕಿಲಾಡಿ ಸ್ಟಾರ್‌, ನಟ ಮಡೆನೂರು ಮನು ವಿರುದ್ಧ ರೇಪ್‌ ಕೇಸ್‌

aishwarya rai 378ನೇ ಕಾನ್ ಫಿಲ್ಮ್ ಫೆಸ್ಟಿವಲ್ (78th Cannes Film Festival) ಮೇ 13ರಿಂದ ಆರಂಭಗೊಂಡಿದ್ದು, 24ರವರೆಗೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಭಾಗಿಯಾಗಲು ಫಿಲ್ಮ್ ಫೆಸ್ಟಿವಲ್ ಟೀಮ್ ಅಳೆದು ತೂಗಿ ಕೆಲವೇ ಕೆಲವು ತಾರೆಯರಿಗೆ ಮಾತ್ರ ಆಮಂತ್ರಣ ನೀಡುತ್ತಾರೆ. ದೇಶ ವಿದೇಶದ ಕಲಾವಿದರಿಗೆ ಆಹ್ವಾನಿಸುತ್ತಾರೆ. ಈ ಕಾರ್ಯಕ್ರಮಕ್ಕೆ ಖ್ಯಾತ ನಟಿ ಐಶ್ವರ್ಯಾ ರೈ ಕೂಡ ಭಾಗಿಯಾಗಿದ್ದಾರೆ.

aishwarya rai 2ಬಿಳಿ ಬಣ್ಣದ ಸೀರೆಯಲ್ಲಿ ನಟಿ ಕಂಗೊಳಿಸಿದ್ದಾರೆ. ಹಣೆಗೆ ಸಿಂಧೂರವಿಟ್ಟು ಸಾಂಪ್ರದಾಯಿಕ ಲುಕ್‌ನಲ್ಲಿ ಐಶ್ವರ್ಯಾ ಮಿಂಚಿದ್ದಾರೆ. ರೆಡ್ ಕಾರ್ಪೆಟ್‌ನಲ್ಲಿ ಹೆಜ್ಜೆ ಹಾಕುವಾಗ ನಗುತ್ತಾ ಕೈ ಮುಗಿದು ನಟಿ ನಮಸ್ಕರಿಸಿದ್ದಾರೆ. ಇದು ಅಭಿಮಾನಿಗಳ ಗಮನ ಸೆಳೆದಿದೆ. ಅಭಿಷೇಕ್ ಬಚ್ಚನ್ ಜೊತೆಗಿನ ನಟಿಯ ದಾಂಪತ್ಯ ಸರಿಯಿಲ್ಲ ಎಂದು ಗಾಸಿಪ್ ಹಬ್ಬಿಸುವವರಿಗೆ ತಕ್ಕ ಉತ್ತರ ಕೊಟ್ಟಿದ್ದಾರೆ.

aishwarya rai 4ಈ ಕಾರ್ಯಕ್ರಮಕ್ಕೆ ಕನ್ನಡತಿ ದಿಶಾ ಮದನ್, ಪ್ರಣಿತಾ ಸುಭಾಷ್, ಜಾನ್ವಿ ಕಪೂರ್, ರುಚಿ ಗುಜ್ಜರ್, ಆದಿತಿ ರಾವ್ ಹೈದರಿ, ಮೌನಿ ರಾಯ್ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ. ಇದನ್ನೂ ಓದಿ:ಯಶ್‌ಗಿಂತ ರಾಧಿಕಾ ಸಖತ್ ಕಿಲಾಡಿ: ಸೊಸೆ ಬಗ್ಗೆ ಮಾತಾಡಿದ ನಿರ್ಮಾಪಕಿ ಪುಷ್ಪ

aishwarya raiಐಶ್ವರ್ಯಾ ರೈ ಭಾಗಿಯಾಗ್ತಿರೋದು ಇದೇ ಮೊದಲೇನಲ್ಲ. ಕಳೆದ ವರ್ಷ ಕೂಡ ನಟಿ ಭಾಗಿಯಾಗಿದ್ದರು. ಮಗಳು ಆರಾಧ್ಯ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು. ಅಮ್ಮನ ರೆಡ್ ಕಾರ್ಪೆಟ್‌ನಲ್ಲಿ ವಾಕ್ ನೋಡಿ ಖುಷಿಪಟ್ಟಿದ್ದರು.

aishwarya rai 1

ಬಾಲಿವುಡ್‌ ಚಿತ್ರರಂಗದ ಸೌಂದರ್ಯದ ಗಣಿ ಐಶ್ವರ್ಯಾ ರೈ ಅವರು ಕಳೆದ ವರ್ಷ ತೆರೆಕಂಡ ‘ಪೊನ್ನಿಯನ್‌ ಸೆಲ್ವನ್‌ 2’ರಲ್ಲಿ ನಟಿಸಿದ್ದರು. ಇದನ್ನು ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನ ಮಾಡಿದ್ದರು.

Share This Article