ದಕ್ಷಿಣ ಸಿನಿರಂಗದತ್ತ ಬಾಲಿವುಡ್ ತಾರಾ ದಂಡು ಒಬ್ಬೊಬ್ಬರಾಗಿ ಹೆಜ್ಜೆ ಹಾಕುತ್ತಿರುವುದು ಹೊಸ ವಿಷಯವಲ್ಲ. ಈಗಾಗಲೇ ಅನೇಕ ಸಿನಿಮೇಕರ್ಸ್, ಸ್ಟಾರ್ಸ್ ಕಾಲಿವುಡ್, ಸ್ಯಾಂಡಲ್‌ವುಡ್, ಟಾಲಿವುಡ್ ನಲ್ಲಿ ಧೂಳ್ ಎಬ್ಬಿಸುತ್ತಿದ್ದಾರೆ. ಇದೀಗ ಹೊಸ ಸೇರ್ಪಡೆ ಬಾಲಿವುಡ್ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್. ಇದನ್ನೂ ಓದಿ:ಫ್ಯಾನ್ಸ್ ಜೊತೆ ಬರ್ತ್‌ಡೇ ಆಚರಿಸಿದ ರಾಧಿಕಾ ಪಂಡಿತ್
ಅನುರಾಗ್ ಕಶ್ಯಪ್ (Anurag Kashyap) ದಕ್ಷಿಣದ ಕಡೆಗೆ ಬಂದಾಗಿದೆ. ತಮಿಳಿನ ‘ಮಹಾರಾಜ’ (Maharaja) ಚಿತ್ರದಲ್ಲಿ ಅದ್ಭುತ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ. ಈ ಮೂಲಕ ತಮಿಳು ಪ್ರೇಕ್ಷಕರನ್ನ ರಂಜಿಸಿದ್ದಾರೆ. ತೆಲುಗಿನ ‘ಡಕಾಯಿತ್’ ಚಿತ್ರದಲ್ಲಿ ಪೊಲೀಸ್ ಆಫೀಸರ್ ಪಾತ್ರದಲ್ಲಿ ನಟಿಸುತ್ತಿರುವ ಅವರೀಗ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಾಸ್ಯ ನಟ-ನಿರ್ದೇಶಕ ಸುಜಯ್ ಶಾಸ್ತ್ರಿ (Sujay Shastry) ಈ ಚಿತ್ರವನ್ನ ಡೈರೆಕ್ಷನ್ ಮಾಡುತ್ತಿದ್ದಾರೆ. ಈ ಮೂಲಕ ಒಂದು ಒಳ್ಳೆಯ ಕಥೆಯನ್ನ ಹೇಳುತ್ತಿದ್ದಾರೆ.
‘8’ ಸಿನಿಮಾದ ಟೈಟಲ್ ಲಾಂಚ್ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಿತು. ಈ ವೇಳೆ, ನಿರ್ದೇಶಕ ಕಮ್ ನಟ ಅನುರಾಗ್ ಕಶ್ಯಪ್ ಮಾತನಾಡಿ, ಇದೊಂದು ಎಮೋಷನಲ್ ಕಥೆ. ಜೀವನ ಎಲ್ಲರಿಗೂ ಎರಡನೇ ಅವಕಾಶ ನೀಡುತ್ತದೆ. ಈ ಚಿತ್ರ ಕೂಡ ಅದನ್ನೇ ಹೇಳುತ್ತದೆ. ಈ ಸಿನಿಮಾದ ಭಾಗವಾಗಿರೋದಕ್ಕೆ ಅರವಿಂದ್ ಹಾಗೂ ಸುಜಯ್ ಶಾಸ್ತ್ರಿಗೆ ಧನ್ಯವಾದ ಎಂದರು.
ಕನ್ನಡದ ‘8’ ಎಂಬ ಚಿತ್ರದಲ್ಲಿ ಅನುರಾಗ್ ಕಶ್ಯಪ್ ನಟಿಸುತ್ತಿದ್ದಾರೆ. ಹಾಸ್ಯನಟ ಸುಜಯ್ ಶಾಸ್ತ್ರೀ ಈ ಚಿತ್ರದ ಸಾರಥಿ. ಎವಿಆರ್ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಅರವಿಂದ್ ವೆಂಕಟೇಶ್ ರೆಡ್ಡಿ ಚಿತ್ರಕ್ಕೆ ಹಣ ಹೂಡುತ್ತಿದ್ದಾರೆ.ಫುಟ್‌ಬಾಲ್ ಆಟದ ಸುತ್ತ ನಡೆಯುವ ಕಥೆ ‘8’ ಚಿತ್ರದಲ್ಲಿದೆ.
ಕನ್ನಡ ಚಿತ್ರರಂಗಕ್ಕೆ ಸದಾ ಅಭಿರುಚಿ ಸಿನಿಮಾಗಳನ್ನು ನೀಡುವ ಉದ್ದೇಶದಿಂದ ಶುರುವಾಗಿರುವ ಎವಿಆರ್ ಚೊಚ್ಚಲ ಕಾಣಿಕೆ 8. ಅರವಿಂದ್ ರೆಡ್ಡಿ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿ ಬರಲಿದೆ. ಈ ಚಿತ್ರದ ಜೊತೆಗೆ ಸಿಂಪಲ್ ಸುನಿ ಜೊತೆಗೂ ಎವಿಆರ್ ಕೈ ಜೋಡಿಸಿದೆ. ‘ಬಿಗ್ ಬಾಸ್’ ಖ್ಯಾತಿಯ ಮಹೇಶ್ ಕಾರ್ತಿಕ್ (Karthik Mahesh) ನಾಯಕನಾಗಿ ನಟಿಸಲಿರುವ ಈ ಸಿನಿಮಾ ಈಗಾಗಲೇ ಘೋಷಣೆಯಾಗಿದೆ. ಸದ್ಯ ‘8’ ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ಭರದಿಂದ ಸಾಗುತ್ತಿದೆ.