ಬಾಲಿವುಡ್‌ನಲ್ಲಿ ಸಾಕಷ್ಟು ಸಿನಿಮಾ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ಅನುರಾಗ್ ಕಶ್ಯಪ್ (Anurag Kashyap) ಅವರು ಈಗ ಟಾಲಿವುಡ್‌ನತ್ತ (Tollywood) ಮುಖ ಮಾಡಿದ್ದಾರೆ. ನಿರ್ದೇಶಕನಾಗಿ ಅಲ್ಲ, ಖಳನಟನಾಗಿ ಅಬ್ಬರಿಸಲು ಸಜ್ಜಾಗಿದ್ದಾರೆ. ಸದ್ಯ ಅವರ ಪಾತ್ರದ ಪೋಸ್ಟರ್ ಕೂಡ ರಿವೀಲ್ ಆಗಿದೆ.
Advertisement
ಕಳೆದ ವರ್ಷ ತಮಿಳಿನಲ್ಲಿ ತೆರೆಕಂಡ ‘ಮಹಾರಾಜ’ (Maharaja) ಸಿನಿಮಾದಲ್ಲಿ ವಿಜಯ್ ಸೇತುಪತಿ ಮುಂದೆ ಅನುರಾಗ್ ಕಶ್ಯಪ್ ವಿಲನ್ ಆಗಿ ಅಬ್ಬರಿಸಿದ್ದರು. ಈ ಸಿನಿಮಾದ ನಂತರ ಅವರಿಗೆ ಆಫರ್ ಹೆಚ್ಚಾಗಿದೆ. ಈ ಬಾರಿ ತೆಲುಗು ಸಿನಿಮಾವೊಂದನ್ನು ಅವರು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ:ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಸುದೀಪ್
Advertisement
View this post on Instagram
Advertisement
ಅಡವಿ ಶೇಷ್ ಮತ್ತು ಮೃಣಾಲ್ ಠಾಕೂರ್ ನಟನೆಯ ‘ಡಕೋಯ್ಟ್’ (Dacoit) ಸಿನಿಮಾದಲ್ಲಿ ಅನುರಾಗ್ ಕಶ್ಯಪ್ ಖಡಕ್ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿ ಸ್ವಾಮಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ರಿಲೀಸ್ ಆದ ಪೋಸ್ಟರ್‌ನಲ್ಲಿ ಮಾಲೆ ಧರಿಸಿ ಕಪ್ಪು ಬಣ್ಣದ ಉಡುಗೆ ತೊಟ್ಟು ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.
Advertisement
ಇದಷ್ಟೇ ಅಲ್ಲ, ತಮಿಳಿನ ‘ಒನ್ ಟು ಒನ್’ ಸಿನಿಮಾದಲ್ಲಿ ಅನುರಾಗ್ ನಟಿಸಿದ್ದಾರೆ. ಇದರೊಂದಿಗೆ ಹಾಲಿವುಡ್ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ನಿರ್ದೇಶಕನಾಗಿ ಸೈ ಎನಿಸಿಕೊಂಡಿದ್ದ ಅನುರಾಗ್ ಕಶ್ಯಪ್‌ಗೆ ಈಗ ನಟಿಸಲು ಬಂಪರ್ ಅವಕಾಶಗಳು ಅರಸಿ ಬರುತ್ತಿವೆ.