ಬಾಲಿವುಡ್ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ (Anurag Kashyap) ಅವರು ದಕ್ಷಿಣ ಭಾರತ ಚಿತ್ರರಂಗದತ್ತ ಮುಖ ಮಾಡಿದ್ದಾರೆ. ತಮಿಳು, ತೆಲುಗು ಸಿನಿಮಾ ಬಳಿಕ ಕನ್ನಡ ಸಿನಿಮಾದಲ್ಲಿ ನಟಿಸಲು ಅವರು ಮುಂದಾಗಿದ್ದಾರೆ. ಇದನ್ನೂ ಓದಿ:‘ಭಗವಂತ ಕೇಸರಿ’ ನಿರ್ದೇಶಕನ ಸಿನಿಮಾಗೆ ಮೆಗಾಸ್ಟಾರ್ ಚಿರಂಜೀವಿ ಗ್ರೀನ್ ಸಿಗ್ನಲ್
ನಟ ಕಮ್ ನಿರ್ದೇಶಕ ಸುಜಯ್ ಶಾಸ್ತ್ರಿ ನಿರ್ದೇಶನದ ‘8’ ಸಿನಿಮಾದಲ್ಲಿ ಅನುರಾಗ್ ಕಶ್ಯಪ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಮೂಲಕ ಅವರು ಸ್ಯಾಂಡಲ್‌ವುಡ್‌ಗೂ (Sandalwood) ಪಾದಾರ್ಪಣೆ ಮಾಡ್ತಿದ್ದಾರೆ. ಈ ಚಿತ್ರವು ಕ್ರಿಡೆಗೆ ಸಂಬಂಧಿಸಿದ ಸ್ಟೋರಿಯಾಗಿದ್ದು, ಅವರ ಪಾತ್ರ ಹೇಗಿರಲಿದೆ ಎಂಬುದರ ಬಗ್ಗೆ ಫ್ಯಾನ್ಸ್‌ಗೆ ಕುತೂಹಲವಿದೆ.
ಅಂದಹಾಗೆ, ಇತ್ತೀಚೆಗೆ ಅನುರಾಗ್ ಕಶ್ಯಪ್ ನಟಿಸುತ್ತಿರುವ ತಮಿಳು ಸಿನಿಮಾವೊಂದು ಅನೌನ್ಸ್ ಆಗಿತ್ತು. ಅಡವಿ ಶೇಷ್ ಮತ್ತು ಮೃಣಾಲ್ ಠಾಕೂರ್ ನಟನೆಯ ‘ಡಕೋಯ್ಟ್’ ಸಿನಿಮಾದಲ್ಲಿ ಖಡಕ್ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿ ಸ್ವಾಮಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ಮಾಲೆ ಧರಿಸಿ ಕಪ್ಪು ಬಣ್ಣದ ಉಡುಗೆ ತೊಟ್ಟಿರುವ ಪೋಸ್ಟರ್ ರಿಲೀಸ್ ಮಾಡಲಾಗಿತ್ತು.
ಕಳೆದ ವರ್ಷ ತಮಿಳಿನಲ್ಲಿ ತೆರೆಕಂಡ ‘ಮಹಾರಾಜ’ ಸಿನಿಮಾದಲ್ಲಿ ವಿಜಯ್ ಸೇತುಪತಿ ಮುಂದೆ ಅನುರಾಗ್ ಕಶ್ಯಪ್ ವಿಲನ್ ಆಗಿ ಅಬ್ಬರಿಸಿದ್ದರು. ಈ ಸಿನಿಮಾದ ನಂತರ ಅವರಿಗೆ ಆಫರ್ ಹೆಚ್ಚಾಗಿದೆ.