ನಿನ್ನೆಯಷ್ಟೇ ಬಾಲಿವುಡ್ನಲ್ಲಿ ಬಹುದೊಡ್ಡ ಬರ್ತ್ಡೇ ಪಾರ್ಟಿ ನಡೆದಿದೆ. ನಿರ್ದೇಶಕ, ನಟ, ನಿರ್ಮಾಪಕ ಕರಣ್ ಜೋಹಾರ್ ಅವರಿಗೆ 50 ತುಂಬಿದ ಸಂದರ್ಭದಲ್ಲಿ ಇಡೀ ಭಾರತೀಯ ಸಿನಿಮಾ ರಂಗವನ್ನೇ ಪಾರ್ಟಿಯ ನೆಪದಲ್ಲಿ ಒಂದಾಗಿಸಿದ್ದರು ಕರಣ್. ಇದನ್ನೂ ಓದಿ : ತೆರೆಯ ಮೇಲೂ ನಿರ್ದೇಶಕನಾಗಿ ನಟಿಸಿದ ಯೋಗರಾಜ್ ಭಟ್
ಈ ಬಾರಿ ಬಾಲಿವುಡ್ ನಟ ನಟಿಯರಿಗೆ ಮಾತ್ರವಲ್ಲ, ದಕ್ಷಿಣದ ಅನೇಕ ತಾರೆಯರಿಗೆ ಕರಣ್ ಆಹ್ವಾನ ನೀಡಿದ್ದರು. ಹಾಗಾಗಿ ಸಮಂತಾ, ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ಸೇರಿದಂತೆ ಹಲವು ದಕ್ಷಿಣದ ಕಲಾವಿದರು ಕೂಡ ಈ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ : ಪೊಲೀಸ್ ಪೇದೆ ನನ್ನನ್ನು ಸೆಕ್ಸ್ ವರ್ಕರ್ ರೀತಿ ನೋಡಿದ : ಮಲಯಾಳಿ ನಟಿ ಅರ್ಚನಾ ಆರೋಪ
ತಡರಾತ್ರಿವರೆಗೂ ನಡೆದ ಪಾರ್ಟಿಯಲ್ಲಿ ಸಖತ್ ಮಿಂಚಿದ್ದು ಅಂದರೆ, ಕನ್ನಡದ ಬೆಡಗಿ ರಶ್ಮಿಕಾ ಮಂದಣ್ಣ. ಕರಿ ಬಣ್ಣದ ಕಾಸ್ಟ್ಯೂಮ್ನಲ್ಲಿ ರಶ್ಮಿಕಾ ಮಂದಣ್ಣ ಆಧುನಿಕ ದೇವತೆಯಂತೆ ಮಿಂಚಿದ್ದಾರೆ ಎಂದು ಬಾಲಿವುಡ್ ಸಿನಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ : ಕಾಶ್ಮೀರ ಟಿವಿ ಸ್ಟಾರ್ ನಟಿ ಹತ್ಯೆ ಮಾಡಿದ ಭಯೋತ್ಪಾದಕರು
ಈ ಪಾರ್ಟಿಯಲ್ಲಿ ವಿಜಯ್ ದೇವರಕೊಂಡ ಭಾಗಿಯಾಗಿದ್ದರೂ ಕೂಡ, ರಶ್ಮಿಕಾ ಮತ್ತು ವಿಜಯ್ ಅಂತರವನ್ನು ಕಾಪಾಡಿಕೊಂಡಿದ್ದರು ಎನ್ನುವ ಸುದ್ದಿಯು ಕೂಡ ಇದೆ. ಒಟ್ಟಿಗೆ ಅನೇಕ ಪಾರ್ಟಿಗಳಲ್ಲಿ ಜೊತೆಯಾಗಿಯೇ ಕಾಣಿಸಿಕೊಳ್ಳುತ್ತಿದ್ದ ವಿಜಯ್ ಮತ್ತು ರಶ್ಮಿಕಾ ಇತ್ತೀಚಿನ ದಿನಗಳಲ್ಲಿ ದೂರ ದೂರ ಓಡಾಡುತ್ತಿದ್ದಾರೆ. ಈ ಪಾರ್ಟಿಯಲ್ಲೂ ಅವರಿಬ್ಬರೂ ಬೇರೆ ಬೇರೆಯಾಗಿಯೇ ಬಂದರು ಎನ್ನುತ್ತಿವೆ ಮೂಲಗಳು. ಹಾಗಾಗಿ ಇಬ್ಬರ ಮಧ್ಯ ಮನಸ್ತಾಪ ಆಗಿರುವುದು ನಿಜ ಎನ್ನಲಾಗುತ್ತಿದೆ.