ಬಾಲಿವುಡ್ ಬೆಡಗಿ ಪೂಜಾ ಹೆಗ್ಡೆ (Pooja Hegde) ಅವರು ಉಡುಪಿಯ ಕಾಪು ಮಾರಿಗುಡಿಯ (Kapu Marigudi) ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕುಟುಂಬದ ಜೊತೆ ಭಾಗಿಯಾಗಿ ಕಾಪು ಮಾರಿಯಮ್ಮನ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ:40 ಬಾರಿ ದುಬೈಗೆ ಹೋಗಿದ್ದ ರನ್ಯಾ ಅಧಿಕಾರಿಗಳ ಬಲೆಗೆ ಬಿದ್ದಿದ್ದೆ ರೋಚಕ
ಪೂಜಾ ಹೆಗ್ಡೆ ಮೂಲತಃ ಮಂಗಳೂರಿನವರು. ಹಾಗಾಗಿ ಆಗಾಗ ಕರಾವಳಿ ಭಾಗದ ದೇವಸ್ಥಾನಗಳಿಗೆ ಭೇಟಿ ನೀಡುತ್ತಲೇ ಇರುತ್ತಾರೆ. ಇದೀಗ ಫ್ಯಾಮಿಲಿ ಜೊತೆ ಕಾಪು ಮಾರಿಗುಡಿಗೆ ನಟಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
View this post on Instagram
ಇನ್ನೂ ಕಾಪು ಮಾರಿಗುಡಿಗೆ ಶಿಲ್ಪಾ ಶೆಟ್ಟಿ, ಕಂಗನಾ ರಣಾವತ್, ಸೂರ್ಯಕುಮಾರ್ ಯಾದವ್ ಸೇರಿದಂತೆ ಅನೇಕರು ಭೇಟಿ ನೀಡಿದ್ದರು. ಈಗ ಪೂಜಾ ಹೆಗ್ಡೆ ಭೇಟಿ ಕೊಟ್ಟಿದ್ದಾರೆ.
ಅಂದಹಾಗೆ, ಸದ್ಯ ಪೂಜಾ ಅವರು ತೆಲುಗು, ತಮಿಳು, ಬಾಲಿವುಡ್‌ನಲ್ಲಿ ಸಕ್ರಿಯರಾಗಿದ್ದಾರೆ. ತಮಿಳು ನಟ ಸೂರ್ಯ ಜೊತೆಗಿನ ಸಿನಿಮಾ, ದಳಪತಿ ವಿಜಯ್ ಮತ್ತು ಕೆವಿಎನ್ ಸಂಸ್ಥೆಯೊಂದಿಗಿನ ಚಿತ್ರ, ಸುನೀಲ್ ಶೆಟ್ಟಿ ಪುತ್ರನಿಗೆ ನಾಯಕಿಯಾಗಿ ಬಾಲಿವುಡ್ ಚಿತ್ರ, ರಜನಿಕಾಂತ್ ನಟನೆಯ ‘ಕೂಲಿ’ ಸಿನಿಮಾದಲ್ಲಿ ಐಟಂ ಸಾಂಗ್‌ಗೆ ಹೆಜ್ಜೆ ಹಾಕಲಿದ್ದಾರೆ.