ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ (Rishab Shetty) ಅವರು ಭಾರತ ವಿರೋಧಿ ಕತೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡುವ ಬಾಲಿವುಡ್ ಮಂದಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಹಿಂದಿ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ ಎಂದು ರಿಷಬ್ ಶೆಟ್ಟಿ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಇದನ್ನೂ ಓದಿ:ಮಾತಾಡೋ ಗೊಂಬೆಯ ‘ಡಿಂಕು’ ಸಿನಿಮಾ
ಭಾರತೀಯ ಸಿನಿಮಾಗಳು (Indian Films) ಅದರಲ್ಲೂ ವಿಶೇಷವಾಗಿ ಬಾಲಿವುಡ್ ಚಿತ್ರಗಳಲ್ಲಿ (Bollywood Film) ಭಾರತವನ್ನು ಕೆಟ್ಟದಾಗಿ ತೋರಿಸಲಾಗಿದೆ. ಇದೇ ಸಿನಿಮಾ ಮಾಡೋ ಆರ್ಟ್ಸ್ ಎಂದು ಕೊಂಡು ಹೊರದೇಶಗಳಿಗೆ ಹೋಗಿ ಅವಾರ್ಡ್‌ಗಳನ್ನು ಗೆದ್ದು ಬಂದಿದ್ದನ್ನು ನೋಡಿದ್ದೇನೆ. ನಮ್ಮ ದೇಶ ನಮ್ಮ ಹೆಮ್ಮೆ, ನನ್ನ ರಾಜ್ಯ ನನ್ನ ಹೆಮ್ಮೆ, ನನ್ನ ಭಾಷೆ ನನ್ನ ಹೆಮ್ಮೆ. ನಮ್ಮಲ್ಲಿರೋದನ್ನು ಪಾಸಿಟಿವ್ ನೋಟ್‌ನಲ್ಲಿ ತೋರಿಸಬಹುದಲ್ಲ ಎಂದು ರಿಷಬ್ ಶೆಟ್ಟಿ ಮಾತನಾಡಿದ್ದಾರೆ. ಇದನ್ನೂ ಓದಿ:ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಮಿಂಚಿದ ಮಿಲನಾ ನಾಗರಾಜ್
ರಿಷಬ್ ಶೆಟ್ಟಿ ಹೇಳಿಕೆ ನೀಡಿದ ಬೆನ್ನಲ್ಲೇ ಅನೇಕರು ಬೆಂಬಲ ಸೂಚಿಸಿದ್ದಾರೆ. ರಿಷಬ್ ಸರಿಯಾಗಿ ಮಾತನಾಡಿದ್ದಾರೆ. ಎಂದಿಗೂ ನಮ್ಮ ಭಾರತದ ಸಂಸ್ಕೃತಿಯನ್ನು ಎತ್ತಿ ತೋರಿಸುವ ಸಿನಿಮಾಗಳು ಬರಬೇಕು ಎಂದು ಅಭಿಮಾನಿಗಳು ನಟನ ಪರ ಮಾತನಾಡಿದ್ದಾರೆ.
ಇನ್ನೂ ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ 1’ ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದೇ ಆಗಸ್ಟ್ ಕೊನೆಯ ವಾರದಲ್ಲಿ ‘ಕಾಂತಾರ 1’ ಸಿನಿಮಾದ 4ನೇ ಹಂತದ ಶೂಟಿಂಗ್ ಶುರುವಾಗಲಿದೆ.