ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಕ್ವೆಟ್ಟಾ ರೈಲು ನಿಲ್ದಾಣದಲ್ಲಿ (Quetts Bomb Blast) ಬಾಂಬ್ ಸ್ಫೋಟಗೊಂಡಿದ್ದು, 25ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ.
ಇಂದು (ನ.9) ನೈಋತ್ಯ ಪಾಕಿಸ್ತಾನ್‌ನ ಕ್ವೆಟ್ಟಾ ರೈಲು ನಿಲ್ದಾಣದ ಬುಕ್ಕಿಂಗ್ ಕೌಂಟರ್ (Ticket Booking Counter) ಹಾಗೂ ಪ್ಲಾಟ್‌ಫಾರಂ ಬಳಿ ಎರಡು ಬಾಂಬ್ ಸ್ಫೋಟಗೊಂಡಿದೆ.ಇದನ್ನೂ ಓದಿ: ಮುಡಾದಲ್ಲಿ ಫೈಲ್ ಸುಟ್ಟು ಹಾಕಿದ್ದಾರೆ! – 50:50 ಅನುಪಾತದಲ್ಲಿ ಮನೆ ಕಟ್ಟುವುದಕ್ಕೆ ಅನುಮತಿ ಕೊಡಬೇಡಿ: ಶ್ರೀವತ್ಸ
Advertisement
Advertisement
ಪೊಲೀಸ್ ಕಾರ್ಯಾಚರಣೆಯ ಹಿರಿಯ ಅಧೀಕ್ಷಕ ಮುಹಮ್ಮದ್ ಬಲೋಚ್ ಮಾತನಾಡಿ, ಪೇಶಾವರಕ್ಕೆ ಹೋಗುವ ಎಕ್ಸ್ಪ್ರೆಸ್ ರೈಲು ನಿಲ್ದಾಣದಿಂದ ಹೊರಡಲು ಸಿದ್ಧವಾಗಿತ್ತು. ಜೊತೆಗೆ ಪ್ಯಾಸೆಂಜರ್ ರೈಲಿಗಾಗಿ ಹಲವು ಜನ ಕಾಯುತ್ತಿದ್ದರು. ಇದರಿಂದಾಗಿ ನಿಲ್ದಾಣ ಭಾರೀ ಜನಸಂದಣಿಯಿಂದ ಕೂಡಿತ್ತು. ಈ ವೇಳೆ ಅವಘಡ ಸಂಭವಿಸಿದ್ದು, ಒಂದರ ಹಿಂದೆ ಒಂದರಂತೆ ಒಟ್ಟು ಎರಡು ಬಾಂಬ್ ಸ್ಫೋಟಗೊಂಡಿವೆ. ಮೊದಲ ಬಾಂಬ್ ಸ್ಫೋಟಗೊಂಡಾಗ 4 ಜನ ಹಾಗೂ ಎರಡನೇ ಬಾಂಬ್ ಸ್ಫೋಟಗೊಂಡಾಗ 21ಕ್ಕೂ ಜನರು ಸಾವನ್ನಪ್ಪಿದ್ದಾರೆ. ಇನ್ನೂ ಸ್ಫೋಟದಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಆಗಮಿಸಿರುವ ಬಾಂಬ್ ನಿಷ್ಕ್ರಿಯ ದಳ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿದೆ ಎಂದು ತಿಳಿಸಿದ್ದಾರೆ.
Advertisement
ಬೆಳಗ್ಗೆ ಒಂಭತ್ತು ಗಂಟೆ ಸಮಯದಲ್ಲಿ ಮೂರು ಬಾಂಬ್‌ಗಳು ಸ್ಫೋಟಗೊಂಡಿದ್ದು, ಅವಘಡದ ಬಳಿಕ ರೈಲು ನಿಲ್ದಾಣದಲ್ಲಿ ಸಂಚಲನ ಉಂಟಾಗಿ ಜನ ದಿಕ್ಕೆಟ್ಟು ಓಡತೊಡಗಿದರು. ಜನರು ತೀವ್ರವಾಗಿ ಗಾಯಗೊಂಡಿರುವ ಹಿನ್ನಲೆ ಸಾವಿನ ಸಂಖ್ಯೆಯೂ ಹೆಚ್ಚಾಗಬಹುದು ಎನ್ನಲಾಗಿದೆ.
Advertisement
ಬಲೂಚಿಸ್ತಾನ ಮುಖ್ಯಮಂತ್ರಿ ಸರ್ಫರಾಜ್ ಬುಗ್ತಿ ದಾಳಿಯನ್ನು ಖಂಡಿಸಿದ್ದು, ಇದು ಅಮಾಯಕ ನಾಗರಿಕರನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಕೃತ್ಯ ಎಂದು ಖಂಡಿಸಿದ್ದಾರೆ. ಈ ಬಗ್ಗೆ ತಕ್ಷಣ ತನಿಖೆಗೆ ಆದೇಶಿಸಿದ್ದಾರೆ. ಸಾಮಾನ್ಯ ನಾಗರಿಕರು, ಕಾರ್ಮಿಕರು, ಮಹಿಳೆಯರು ಮತ್ತು ಮಕ್ಕಳನ್ನು ಹೆಚ್ಚಾಗಿ ಭಯೋತ್ಪಾದಕರು ಗುರಿಯಾಗಿಸುತ್ತಿದ್ದಾರೆ. ಘಟನೆಗೆ ಕಾರಣವಾದವರನ್ನು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಕ್ವೆಟ್ಟಾ ಸ್ಫೋಟದ ಹೊಣೆಯನ್ನು ಬಲೂಚ್ ಲಿಬರೇಶನ್ ಆರ್ಮಿ ಹೊತ್ತುಕೊಂಡಿದೆ. ಸಂಘಟನೆಯ ಗುಂಪಿನ ವಕ್ತಾರ ಜೀಯಂಡ್ ಬಲೋಚ್, ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಸಂಭವಿಸಿದ ಸ್ಫೋಟದ ಹೊಣೆಯನ್ನು ನಾವು ವಹಿಸಿಕೊಳ್ಳುತ್ತೇವೆ. ಇನ್‌ಫೆಂಟ್ರಿ ಶಾಲೆಯಲ್ಲಿ ಕೋರ್ಸ್ ಮುಗಿಸಿ ಜಾಫರ್ ಎಕ್ಸ್‌ಪ್ರೆಸ್ ಮೂಲಕ ಹಿಂತಿರುಗುತ್ತಿದ್ದ ಸೇನಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ದಾಳಿಯನ್ನು ನಮ್ಮ ಫಿದಾಯಿ ಘಟಕ ಮತ್ತು ಮಜೀದ್ ಬ್ರಿಗೇಡ್ ಕಾರ್ಯಗತಗೊಳಿಸಿತು. ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.ಇದನ್ನೂ ಓದಿ: ಬೆಂಗಳೂರಿನ ಸಿಂಗನಗಳ್ಳಿ ಶೆಡ್‌ನಲ್ಲಿ ಡಬಲ್ ಮರ್ಡರ್ – ಖಾಸಗಿ ಬಸ್ ಸಿಬ್ಬಂದಿ ಕೊಲೆ