ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ – ಹೆಚ್‌ಎಎಲ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

Public TV
1 Min Read
Big explosion in Bengalurus Rameshwaram cafe several feared injured Anti Terrorist Squad Entry 2

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಡೆದ ಭೀಕರ ಸ್ಫೋಟಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಎನ್‌ಎಸ್‌ಜಿ ಕಮಾಂಡೋಸ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಬ್ಲಾಸ್ಟ್ (Bomb Blast) ಪ್ರಕರಣದ ಕುರಿತು ಹೆಚ್‌ಎಎಲ್ (HAL) ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಿಸಲಾಗಿದೆ.

ಐಪಿಸಿ ಸೆಕ್ಷನ್ 307 (ಕೊಲೆ ಯತ್ನ), 471 (ಸುಳ್ಳು ಸ್ಪಷ್ಟನೆಯ ದಸ್ತಾವೇಜನ್ನು ನೈಜವಾದುದೆಂದು ಬಳಸುವುದು) ಮತ್ತು ಯುಎಪಿಯ 16 (ಭಯೋತ್ಪಾದಕ ಕೃತ್ಯ), 18 (ಪಿತೂರಿ) ಹಾಗೂ 38 (ಭಯೋತ್ಪಾದಕ ಸಂಘಟನೆಗೆ ಸಂಬಂಧಿಸಿದ ಅಪರಾಧ) ಮತ್ತು ಎಕ್ಸ್‌ಪ್ಲೋಸಿವ್ ಸಬ್ಸ್ಟೆನ್ಸ್ ಆ್ಯಕ್ಟ್ 3 (ಜೀವಕ್ಕೆ ಅಥವಾ ಆಸ್ತಿಗೆ ಅಪಾಯನ್ನುಂಟುಮಾಡುವ ಸ್ಫೋಟ) ಮತ್ತು 4 (ಜೀವಕ್ಕೆ ಹಾನಿಯುಂಟುಮಾಡುವ ಉದ್ದೇಶದಿಂದ ಸ್ಫೋಟಕ ತಯಾರಿಕೆ) ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಕೇಸ್‌ – ಓರ್ವ ವಶಕ್ಕೆ

ಶುಕ್ರವಾರ ಮಧ್ಯಾಹ್ನ ಕೆಫೆಯಲ್ಲಿ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಓರ್ವ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಒಟ್ಟು 9 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಫೆಯ ಒಳಗಡೆ ಸ್ಫೋಟಕವನ್ನು ಇರಿಸಿ ಬಳಿಕ ಬೈಕ್‌ನಲ್ಲಿ ತೆರಳಿದ್ದ ಶಂಕಿತನ ಬೈಕ್ ಮಾಹಿತಿಯನ್ನು ಆಧರಿಸಿ ಆತನನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ – ಗಾಯಗೊಂಡವರ ಪೂರ್ಣ ವಿವರ ಓದಿ

ಕಪ್ಪು ಬ್ಯಾಗ್ ಬೆನ್ನಿಗೆ ಹಾಕಿಕೊಂಡು ಬಂದಿದ್ದ ಬಾಂಬರ್ ರಾಮೇಶ್ವರಂ ಕೆಫೆಯಲ್ಲಿ ತಿಂಡಿ ತಿಂದು ಕೈತೊಳೆದ ಬಳಿಕ ಬ್ಯಾಗ್ ಅನ್ನು ಅಲ್ಲೇ ಬಿಟ್ಟು ಹೋಗಿದ್ದಾನೆ. ಸಿಸಿಟಿವಿಯಲ್ಲಿ ಆತನ ಪ್ರತಿಯೊಂದು ಚಲನವಲನಗಳು ಸೆರೆಯಾಗಿದ್ದು, ಸಿಸಿಟಿವಿ ದೃಶ್ಯಾವಳಿಯನ್ನು ಆಧರಿಸಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಇದನ್ನೂ ಓದಿ: ಐದನೇ ಬಾರಿಗೆ ಬೆಂಗಳೂರಿನಲ್ಲಿ ಬಾಂಬ್‌ ಸ್ಟೋಟ: ಹಿಂದೆ ಎಲ್ಲೆಲ್ಲಿ ಸಂಭವಿಸಿತ್ತು?

Share This Article