ರಾಯ್ಪುರ: ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಶನಿವಾರ ನಕ್ಸಲರು ಹುದುಗಿಸಿಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡ ಪರಿಣಾಮ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿ ಮತ್ತು ಒಬ್ಬ ಪತ್ರಕರ್ತ ಗಾಯಗೊಂಡಿದ್ದಾರೆ.
ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (PLGA) ಸಪ್ತಾಹದ ನಡುವೆ ಜಿಲ್ಲೆಯ ಬಲಸೂರ್ ಪಲ್ಲಿ ಮಾರ್ಗ್ ಪ್ರದೇಶದಲ್ಲಿ ನಕ್ಸಲರು ಹಾಕಿದ್ದ ಪೋಸ್ಟರ್‌ಗಳನ್ನು ಭದ್ರತಾ ಸಿಬ್ಬಂದಿ ತೆಗೆದುಹಾಕುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದನ್ನೂ ಓದಿ: ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ: ಭ್ರೂಣ ಹತ್ಯೆ ಕುರಿತು ನರ್ಸ್ ಮಂಜುಳ ಸ್ಫೋಟಕ ಮಾಹಿತಿ
Advertisement
Advertisement
ಕಳೆದ ವರ್ಷ ಹಲವಾರು ಕಾರಣಗಳಿಂದ ಪ್ರಾಣ ಕಳೆದುಕೊಂಡ 54 ನಕ್ಸಲರ (Naxalites) ಸ್ಮರಣಾರ್ಥ ಭಯೋತ್ಪಾದಕರು ಪಿಎಲ್‌ಜಿಎ ಸಪ್ತಾಹವನ್ನು ಆಚರಿಸುತ್ತಿದ್ದಾರೆ. ಘಟನೆಯ ನಂತರ ಗಾಯಗೊಂಡ ಸಿಬ್ಬಂದಿಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸದ್ಯ ಅಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: 900 ಭ್ರೂಣಗಳ ಹತ್ಯೆ ಆರೋಪಕ್ಕೆ ಅಂಜಿ ವಿಷದ ಚುಚ್ಚುಮದ್ದು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡ್ರಾ ವೈದ್ಯ?
Advertisement
ಇದಕ್ಕೂ ಮುನ್ನ, ಛತ್ತೀಸ್‌ಗಢದಲ್ಲಿ ಎರಡನೇ ಹಂತದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ, ರಾಜ್ಯದ ಬಿಂದ್ರನವಗಢ ಪ್ರದೇಶದಲ್ಲಿ ಮತಗಟ್ಟೆಯನ್ನು ಗುರಿಯಾಗಿಸಿಕೊಂಡು ನಕ್ಸಲರು ಸುಧಾರಿತ ಸ್ಫೋಟಕ ಸಾಧನವನ್ನು ಸ್ಫೋಟಿಸಿದ ಪರಿಣಾಮ ಒಬ್ಬ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಯೋಧ ಸಾವನ್ನಪ್ಪಿದ್ದರು. ಇದನ್ನೂ ಓದಿ: ಶಿಕ್ಷಕನ ಅಪಹರಿಸಿ, ಬಂದೂಕಿನಿಂದ ಬೆದರಿಸಿ ಮಗಳೊಂದಿಗೆ ಮದುವೆ ಮಾಡಿಸಿದ ಕಿಡ್ನ್ಯಾಪರ್
Advertisement
ಮತದಾನಕ್ಕೆ ಒಂದು ದಿನ ಮೊದಲು ಛತ್ತೀಸ್‌ಗಢದ ಧಮ್ತಾರಿ ಪ್ರದೇಶದಲ್ಲಿ ಎರಡು ಕಡಿಮೆ ತೀವ್ರತೆಯ ಐಇಡಿ ಸ್ಫೋಟಕಗಳನ್ನು ಸ್ಫೋಟಿಸಿದ್ದರು. ಇದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ. ಅಧಿಕಾರಿಗಳು ಘಟನಾ ಪ್ರದೇಶದಿಂದ 5 ಕೆಜಿ ಸುಧಾರಿತ ಸ್ಫೋಟಕ ಸಾಧನವನ್ನು ವಶಪಡಿಸಿಕೊಂಡಿದ್ದರು. ಇದನ್ನೂ ಓದಿ: ರೆಸ್ಟೋರೆಂಟಲ್ಲಿ ಕೈ ತೊಳೆದು ಬರುವಷ್ಟರಲ್ಲಿ ಪಿಎಸ್‌ಐ ಪಿಸ್ತೂಲ್ ಮಂಗಮಾಯ!