ಅಂಕಾರಾ: ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಭಾರೀ ಸ್ಫೋಟ (Blast) ಉಂಟಾಗಿ 4 ಜನರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಭಾನುವಾರ ಟರ್ಕಿಯ (Turkey) ಇಸ್ತಾಂಬುಲ್‌ನಲ್ಲಿ (Istanbul) ನಡೆದಿದೆ. ಘಟನೆಯಲ್ಲಿ 30 ಕ್ಕೂ ಹೆಚ್ಚು ಜನರು ಗಾಯಗೊಂಡಿರುವುದಾಗಿ ವರದಿಗಳು ತಿಳಿಸಿವೆ.
ಇಸ್ತಾಂಬುಲ್‌ನ ಇಸ್ತಿಕ್‌ಲಾಲ್‌ನಲ್ಲಿರುವ (Istiklal) ಮಾರುಕಟ್ಟೆ ಪ್ರದೇಶದಲ್ಲಿ ಇಂದು ಮಧ್ಯಾಹ್ನದ ವೇಳೆ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ಹೆಚ್ಚಿನ ಮಾಹಿತಿ ನೀಡಿಲ್ಲ.
❗Blast hits central #Istanbul, local media report. pic.twitter.com/s95VcL1BRr
— NonMua (@NonMyaan) November 13, 2022
ಪ್ರಾಥಮಿಕ ಮಾಹಿತಿಯ ಪ್ರಕಾರ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. 38 ಮಂದಿ ಗಾಯಗೊಂಡಿದ್ದಾರೆ ಎಂದು ಇಸ್ತಾಂಬುಲ್ ಗವರ್ನರ್ ಅಲಿ ಯರ್ಲಿಕಾಯಾ ಟ್ವೀಟ್ ಮಾಡಿದ್ದಾರೆ. ಸ್ಫೋಟ ಸಂಭವಿಸಿದ ಪ್ರದೇಶಕ್ಕೆ ಜನರು ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದ್ದು, ಭದ್ರತಾ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: 2019 ಏಕದಿನ ವಿಶ್ವಕಪ್ ನೆನೆಪಿಸಿದ ಬೆನ್‍ಸ್ಟೋಕ್ಸ್ – ನಿಜವಾದ ಮ್ಯಾಚ್ ವಿನ್ನರ್ ಎಂದ ಫ್ಯಾನ್ಸ್
2015-16ರ ಸಮಯದಲ್ಲಿ ಇಸ್ತಾಂಬುಲ್ ಅನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿತ್ತು. ಆ ವೇಳೆ ಇಸ್ತಿಕ್‌ಲಾಲ್ ಸ್ಟ್ರೀಟ್ ಕೂಡಾ ದಾಳಿಯನ್ನು ಎದುರಿಸಿತ್ತು. ಸುಮಾರು 500 ಜನರು ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದರೆ, 2,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದನ್ನೂ ಓದಿ: ರೈಲ್ವೇ ಹಳಿಯಲ್ಲಿ ಬಿರುಕು, ಭಾರೀ ಸ್ಫೋಟಕ ಪತ್ತೆ – ಉಗ್ರ ಕೃತ್ಯ ಶಂಕೆ