ಕೊಲಂಬೋ: ಶ್ರೀಲಂಕಾ ರಾಜಧಾನಿ ಕೊಲೊಂಬೋದಲ್ಲಿ ಮೂರು ಚರ್ಚ್, ಮೂರು ಫೈವ್‍ಸ್ಟಾರ್ ಹೋಟೆಲ್‍ಗಳು ಸೇರಿದಂತೆ 6 ಕಡೆ ಸರಣಿ ಬಾಂಬ್ ಸ್ಫೋಟ ನಡೆದಿದ್ದು, ಈಸ್ಟರ್ ಹಬ್ಬದ ಹಿನ್ನೆಲೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಸೇರಿದ್ದ 139 ಮಂದಿ ಸಾವನ್ನಪ್ಪಿದ್ದು, 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
Advertisement
ಈಸ್ಟರ್ ಶುಭ ಸಂದರ್ಭದಲ್ಲಿ ಪ್ರಾರ್ಥನೆಗೆ ಸೇರಿದ್ದವರನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ ಎಂದು ಶಂಕಿಸಲಾಗಿದೆ. ಚರ್ಚ್ ಗಳಲ್ಲಿ ಕ್ರಿಶ್ಚಿಯನ್ನರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ವೇಳೆಯೇ ಬಾಂಬ್ ಸ್ಫೋಟಗೊಂಡಿದೆ. ಪರಿಣಾಮ ಕೊಲಂಬೋ ಬಂದರು ಸಮೀದ ಸೆಬಾಸ್ಟಿಯನ್ ಚರ್ಚ್ ರಕ್ತಸಿಕ್ತವಾಗಿದೆ.
Advertisement
Advertisement
ಕೊಚ್ಚಿಕೇಡ್‍ನ ಸೆಂಟ್ ಅಂಟೋನಿ ಚರ್ಚ್, ನೆಗೊಂಬೆ ಚರ್ಚ್ ನಲ್ಲಿ ಬಾಂಬ್ ಸ್ಫೋಟವಾಗಿದ್ದು, ಈವರೆಗೆ 139 ಮಂದಿ ಸಾವನ್ನಪ್ಪಿದ್ದು, 400ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಮೃತರಲ್ಲಿ ಭಾರತೀಯರು ಸೇರಿ ಹಲವು ವಿದೇಶಿಯರು ಇರುವ ಸಾಧ್ಯತೆಯಿದೆ.
Advertisement
ನಗರದಲ್ಲಿರುವ 3 ಫೈವ್ ಸ್ಟಾರ್ ಹೋಟೆಲ್ಗಳಲ್ಲೂ ಬಾಂಬ್ ಸ್ಪೋಟ ಸಂಭವಿಸಿರುವ ಕುರಿತಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದು, ಇಲ್ಲಿನ ಶಾಂಗ್ರಿ ಲಾ ಹಾಗೂ ಸಿನಾಮೊನ್ ಗ್ರ್ಯಾಂಡ್ ಹೋಟೆಲ್ಗಳಲ್ಲಿ ಸ್ಫೋಟ ನಡೆದಿದೆ. ಭಾರತೀಯರನ್ನು ಗುರಿಯಾಗಿಸಿಕೊಂಡು ಇಸಿಸ್ ಉಗ್ರರು ದಾಳಿ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಹಾಗೆಯೇ ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
#UPDATE AFP news agency: Death toll rises to 42. #SriLankaBlasts https://t.co/zUyGwpklsP
— ANI (@ANI) April 21, 2019