ಶಿಲ್ಲಾಂಗ್: ಮೇಘಾಲಯದ ಶಿಲ್ಲಾಂಗ್ ನಗರದ ಜನನಿಬಿಡ ಪೊಲೀಸ್ ಬಜಾರ್ ಪ್ರದೇಶದಲ್ಲಿ ಭಾನುವಾರ ಸಂಜೆ ಸ್ಫೋಟ ಸಂಭವಿಸಿದೆ.
ಸ್ಫೋಟದಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ಸ್ಫೋಟ ಸಂಭವಿಸಿದ ಪ್ರದೇಶದಲ್ಲಿದ್ದ ಫೋನ್ ಅಂಗಡಿ ಹಾಗೂ ವೈನ್ ಅಂಗಡಿಯ ಮುಂಭಾಗಕ್ಕೆ ಹಾನಿಯಾಗಿದೆ. ಭಾನುವಾರ ಸಂಜೆ ಸುಮಾರು 6:15ರ ವೇಳೆ ಸಂಭವಿಸಿದ ಸ್ಫೋಟದ ಪ್ರದೇಶವನ್ನು ಭದ್ರತಾ ಸಿಬ್ಬಂದಿ ಸುತ್ತುವರಿದಿದ್ದು, ಮಾರುಕಟ್ಟೆ ಪ್ರದೇಶವನ್ನು ಬ್ಯಾರಿಕೇಡ್‍ಗಳಿಂದ ಮುಚ್ಚಲಾಗಿದೆ. ಇದನ್ನೂ ಓದಿ: ಮಣಿಪುರ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಟಿಕೆಟ್ ವಂಚಿತರ ಬೆಂಬಲಿಗರಿಂದ ಪ್ರತಿಭಟನೆ
ಸುಧಾರಿತ ಸ್ಫೋಟಕ ಸಾಧನದಿಂದ(ಐಇಡಿ) ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಾಂಬ್ ಸ್ಕ್ವಾಡ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಇದು ಯಾವ ರೀತಿಯ ಸ್ಫೋಟಕ ಎಂದು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇಬ್ಬರು ಯುಎನ್ ತಜ್ಞರ ಹತ್ಯೆ – 51 ಮಂದಿಗೆ ಮರಣದಂಡನೆ
ಇಂದು ಸಂಜೆ ಶಿಲ್ಲಾಂಗ್‍ನ ಪೊಲೀಸ್ ಬಜಾರ್‍ನಲ್ಲಿ ನಡೆದ ಸ್ಫೋಟವನ್ನು ಬಲವಾಗಿ ಖಂಡಿಸುತ್ತೇನೆ. ಶಾಂತಿ ಕದಡುವ ಹಾಗೂ ಹಾನಿ ಮಾಡುವ ಪ್ರಯತ್ನ ಹೇಡಿತನ. ದುಷ್ಕರ್ಮಿಗಳಿಗೆ ಸರಿಯಾದ ಪಾಠ ಕಲಿಸುತ್ತೇವೆ. ರಾಜ್ಯದಲ್ಲಿ ಶಾಂತಿಯನ್ನು ಕಾಪಾಡುತ್ತೇವೆ ಎಂದು ಸ್ಫೋಟದ ಬಗ್ಗೆ ಮೇಘಾಲಯ ಮುಖ್ಯಮಂತ್ರಿ ಕನ್ರಾಡ್ ಸಂಗ್ಮಾ ತಿಳಿಸಿದರು.