LatestLeading NewsMain PostNational

ಹೂವಿನ ಮಾರುಕಟ್ಟೆಯಲ್ಲಿ ಇಟ್ಟಿದ್ದ ಬ್ಯಾಗ್‌ನಲ್ಲಿ ಬಾಂಬ್ ಪತ್ತೆ – ಜನರಲ್ಲಿ ಆತಂಕ

ನವದೆಹಲಿ: ಪೂರ್ವ ದೆಹಲಿಯ ಘಾಜಿಪುರ್ ಹೂವಿನ ಮಾರುಕಟ್ಟೆಯಲ್ಲಿ ಪತ್ತೆಯಾಗಿದ್ದ ಬ್ಯಾಗ್‌ವೊಂದರಲ್ಲಿ ಬಾಂಬ್ ಪತ್ತೆಯಾಗಿದ್ದು, ಕೆಲಕಾಲ ಜನರಲ್ಲಿ ಆತಂಕ ಮೂಡಿಸಿತು.

ಹೂವಿನ ಮಾರುಕಟ್ಟೆಯಲ್ಲಿ ಭಾರಿ ಸಂಖ್ಯೆಯಲ್ಲಿ ಗ್ರಾಹಕರಿದ್ದರು. ಈ ವೇಳೆ ಅನುಮಾನಾಸ್ಪದ ಬ್ಯಾಗ್‌ನಲ್ಲಿ ಬಾಂಬ್ ಪತ್ತೆಯಾಗಿದೆ. ಇದರಿಂದ ಜನರು ಭಯಭೀತರಾಗಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಬಾಂಬ್ ನಿಷ್ಕ್ರಿಯ ದಳವನ್ನು ಸ್ಥಳಕ್ಕೆ ಕಳುಹಿಸಿದ್ದರು. ಬ್ಯಾಗ್‌ನಲ್ಲಿದ್ದ ಬಾಂಬ್ ಅನ್ನು ನಿಷ್ಕ್ರಿಯಗೊಳಿಸಲು ಜನನಿಬಿಡ ಪ್ರದೇಶದಿಂದ ಬೇರೆಡೆಗೆ ಕೊಂಡೊಯ್ಯಲಾಯಿತು. ಇದನ್ನೂ ಓದಿ: ನೊವಾಕ್ ಜೊಕೊವಿಕ್ ವೀಸಾ 2ನೇ ಬಾರಿ ರದ್ದು – 3 ವರ್ಷ ಆಸ್ಟ್ರೇಲಿಯಾಗೆ ಪ್ರವೇಶವಿಲ್ಲ

ಮಾರುಕಟ್ಟೆಯಲ್ಲಿ ಅನುಮಾನಾಸ್ಪದ ಬ್ಯಾಗ್‌ವೊಂದರಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪತ್ತೆಯಾಗಿತ್ತು. ಅದನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನ ತಿಳಿಸಿದ್ದಾರೆ.

ಬ್ಯಾಗ್ ಬಿಟ್ಟುಹೋದ ವ್ಯಕ್ತಿ ಇಂದು ಬೆಳಗ್ಗೆ ಸ್ಕೂಟಿಯಲ್ಲಿ ಮಾರುಕಟ್ಟೆಗೆ ಹೋಗಿದ್ದಾನೆ. ಒಂದು ಅಂಗಡಿಯಲ್ಲಿ ಹೂವನ್ನು ಖರೀದಿಸಿ ನಂತರ ಬ್ಯಾಗ್‌ನ್ನು ಅಲ್ಲೇ ಇಟ್ಟು ಹೋಗಿದ್ದಾನೆ. ನಂತರ ಇತರೆ ಗ್ರಾಹಕರು ಬ್ಯಾಗ್ ಪರಿಶೀಲಿಸಿದ್ದಾರೆ. ಈ ವೇಳೆ ಹೂ ಮಾರಾಟಗಾರರು ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಇದನ್ನೂ ಓದಿ: ಜನವರಿ 31ರಿಂದ ಕೇಂದ್ರ ಬಜೆಟ್ ಅಧಿವೇಶನ

Leave a Reply

Your email address will not be published.

Back to top button