ಪುಣೆ: ಮುಂಡ್ವಾ ಪ್ರದೇಶದ ಬಹುಮಹಡಿ ವಾಣಿಜ್ಯ ಕಟ್ಟಡದ 11ನೇ ಮಹಡಿಯಲ್ಲಿರುವ ಗೂಗಲ್ ಕಚೇರಿಗೆ (Google Office) ಭಾನುವಾರ ತಡ ರಾತ್ರಿ ಬಾಂಬ್ ಬೆದರಿಕೆ ಕರೆ (Bomb Threat Call) ಬಂದಿದೆ. ಬಾಂಬ್ ಬೆದರಿಕೆ ಬಳಿಕ ಕಟ್ಟೆಚ್ಚರ ವಹಿಸಿ ಪರಿಶೀಲನೆ ನಡೆಸಿದ್ದು, ಸ್ಫೋಟಕ ಪತ್ತೆಯಾಗದ ಹಿನ್ನೆಲೆ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದು ಬಾಂಬ್ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಹೈದರಾಬಾದ್‌ನಲ್ಲಿ ಸೋಮವಾರ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದ್ದು ಮದ್ಯದ ಅಮಲಿನಲ್ಲಿ ಬೆದರಿಕೆ ಕರೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಪಾಕ್ ಬೌಲರ್‌ಗಳ ಬೆವರಿಳಿಸಿದ ಜೆಮಿಯಾಗೆ ಸ್ಫೂರ್ತಿಯಾಗಿದ್ದು ಕೊಹ್ಲಿ ಇನ್ನಿಂಗ್ಸ್ǃ
Advertisement
Advertisement
ಭಾನುವಾರ ತಡರಾತ್ರಿ ಕರೆ ಬಂದ ಹಿನ್ನೆಲೆ ಗೂಗಲ್ ಸಂಸ್ಥೆಯಿಂದ ಪೊಲೀಸರಿಗೆ ದೂರು ನೀಡಲಾಗಿತ್ತು. ದೂರಿನ ಬೆನ್ನಲ್ಲೇ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದರು. ಪರಿಶೀಲನೆವರೆಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿತ್ತು. ಇದನ್ನೂ ಓದಿ: ಕೆ-ಸೆಟ್ ಪರೀಕ್ಷೆಗಳನ್ನು ಕೆಇಎ ನಡೆಸಲಿದೆ: ಅಶ್ವಥ್ ನಾರಾಯಣ
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k