ನವದೆಹಲಿ: ದೆಹಲಿಯ (New Delhi) ಚಾಣಕ್ಯಪುರಿಯಲ್ಲಿರುವ (Chanakyapuri) ಇಸ್ರೇಲ್ ರಾಯಭಾರಿ ಕಚೇರಿಗೆ (Israel Embassy) ಇಂದು ಬಾಂಬ್ ಬೆದರಿಕೆ ಕರೆ (Bomb Threat Call) ಬಂದಿದ್ದು, ದೆಹಲಿ ಪೊಲೀಸರು (Delhi Police) ಈ ಕುರಿತು ತನಿಖೆ ನಡೆಸುತ್ತಿದ್ದಾರೆ.
ಇಂದು ಸಂಜೆ 6 ಗಂಟೆ ಸುಮಾರಿಗೆ ದೆಹಲಿ ಪೊಲೀಸರಿಗೆ ಅಪರಿಚಿತ ಕರೆ ಬಂದಿದೆ. ಕರೆಯಲ್ಲಿ ಸ್ಫೋಟದ ಬಗ್ಗೆ ಅಧಿಕಾರಿಗಳಿಗೆ ವರದಿಯಾಗಿದೆ. ಇಸ್ರೇಲಿ ರಾಯಭಾರ ಕಚೇರಿಯ ಹಿಂದೆ ಖಾಲಿ ಜಾಗದಲ್ಲಿ ಸ್ಫೋಟ ಸಂಭವಿಸಿದೆ ಎಂದು ಕರೆ ಮಾಡಿದ ಅನಾಮಿಕ ವ್ಯಕ್ತಿ ತಿಳಿಸಿದ್ದಾನೆ. ಇದನ್ನೂ ಓದಿ: ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮವನ್ನು ಬಹಿಷ್ಕರಿಸಿದ ಸಿಪಿಎಂ
ಬೆದರಿಕೆ ಕರೆ ಬಂದ ತಕ್ಷಣ ಬಾಂಬ್ ಸ್ಕ್ವಾಡ್‌ನೊಂದಿಗೆ ಪೊಲೀಸರ ವಿಶೇಷ ಸೆಲ್ ತಂಡ ಸ್ಥಳಕ್ಕೆ ಆಗಮಿಸಿ ಪರಿಶಿಲನೆ ನಡೆಸಿದೆ. ಅಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಕರೆ. ಕರೆ ಮಾಡಿದವರ ಗುರುತು, ಮತ್ತು ಉದ್ದೇಶವನ್ನು ತನಿಖೆ ಮಾಡಲಾಗುತ್ತಿದೆ. ಈ ಕುರಿತು ವಿವರವಾದ ತನಿಖೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮುಂಬೈನಲ್ಲಿ ಲ್ಯಾಂಡ್ ಆಯ್ತು ಫ್ರಾನ್ಸ್ ವಶದಲ್ಲಿದ್ದ 303 ಭಾರತೀಯರಿದ್ದ ವಿಮಾನ