ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‍ನಲ್ಲಿ ಬಾಂಬ್ ಇಟ್ಟಿರೋದಾಗಿ ಅಪರಿಚಿತನಿಂದ ಬೆದರಿಕೆ ಕರೆ ಬಂದಿದೆ. ಪರಿಣಾಮ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
Advertisement
ಬೆಳಗಿನ ಜಾವ 3.30 ಸಮಯದಲ್ಲಿ ಅಪರಿಚಿತನೊಬ್ಬ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ್ದು, ಕೆಂಪೇಗೌಡ ಏರ್‌ಪೋರ್ಟ್‍ನಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿದ್ದಾನೆ. ಈ ಹಿನ್ನೆಲೆ ಏರ್‌ಲೈನ್ಸ್ ಗೇಟ್, ಟರ್ಮಿನಲ್ ಮತ್ತು ವಿಮಾನ ನಿಲ್ದಾಣದಲ್ಲಿ ತೀವ್ರ ತಪಾಸಣೆ ನಡೆಯುತ್ತಿದೆ. ಇದನ್ನೂ ಓದಿ: ಭಾರತದ ಮೊದಲ 5ಜಿ ಕರೆ ಯಶಸ್ವೀ ಪರೀಕ್ಷೆ
Advertisement
Advertisement
ಈಶಾನ್ಯ ವಿಭಾಗ ಡಿಸಿಪಿ ಅನೂಪ್ ಶೆಟ್ಟಿ ಅವರು, ಬಾಂಬ್ ನಿಷ್ಟ್ರಿಯ ದಳ, ಶ್ವಾನ ದಳ ಸ್ಥಳಕ್ಕೆ ಆಗಮಿಸಿದೆ. ವಿಮಾನ ನಿಲ್ದಾಣದಲ್ಲಿ ತೀವ್ರ ತಪಾಸಣೆ ಮಾಡಲಾಗ್ತಿದೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
Advertisement
ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಏರ್‌ಪೋರ್ಟ್ ಇಂಚಿಂಚೂ ತಪಾಸಣೆ ನಡೆಸಿದ್ದಾರೆ. ಆದ್ರೆ ಯಾವುದೇ ಅನುಮಾನಸ್ಫದವಾದ ವಸ್ತು ಕಂಡುಬಂದಿಲ್ಲ. ಈ ಹಿನ್ನೆಲೆ ಇದೊಂದು ಹುಸಿಬಾಂಬ್ ಕರೆ ಅಂತ ತೀರ್ಮಾನಕ್ಕೆ ಬಂದಿದ್ದಾರೆ. ಸದ್ಯ ಕರೆ ಮಾಡಿದವನ ಜಾಡು ಬೆನ್ನತ್ತಿರೋ ಪೊಲೀಸರು ಅಪರಿಚಿತನ ಹುಡುಕಾಟದಲ್ಲಿ ತೊಡಗಿದ್ದು, ಹುಸಿಬಾಂಬ್ ಕರೆಯ ಉದ್ದೇಶ ತಿಳಿಯಬೇಕಿದೆ.