ಬೆಂಗಳೂರು: ರಾಜಭವನಕ್ಕೆ (Raj Bhavan) ಬಾಂಬ್ ಬೆದರಿಕೆ (Bomb Threat) ಕರೆ ಬಂದಿದೆ. ಸೋಮವಾರ ರಾತ್ರಿ 11:30ರ ವೇಳೆಗೆ ಯಾರೋ ದುಷ್ಕರ್ಮಿಗಳು ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯೊಡ್ಡಿದ್ದಾರೆ.
ಪೊಲೀಸ್ ಕಂಟ್ರೋಲ್ ರೂಮ್‌ಗೆ ಕರೆ ಮಾಡಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆ ಬೆದರಿಕೆ ಜಾಡು ಹಿಡಿದು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಬಾಂಬ್ ಬೆದರಿಕೆ ಕರೆ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ – ತನಿಖೆಗೆ ಹಾಜರಾಗದೇ ಶ್ರೀಕಿ ಕಳ್ಳಾಟ
Advertisement
Advertisement
ಈ ಕಿಡಿಗೇಡಿಗಳು ಎನ್‌ಐಎ (NIA) ಅಧಿಕಾರಿಗಳಿಗೆ ಬೆದರಿಕೆ ಕರೆ ಮಾಡಿದ್ದು, ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾರೆ. ಎನ್‌ಐಎ ಅಧಿಕಾರಿಗಳಿಗೆ ಕರೆ ಮಾಡಿ ರಾಜಭವನದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆ ಎನ್‌ಐಎ ಅಧಿಕಾರಿಗಳು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಕೇಂದ್ರ ವಿಭಾಗದ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೆರೆಯ ಮಣ್ಣು ಅಕ್ರಮ ಸಾಗಾಟ – ಗ್ರಾಮಸ್ಥರಿಂದ 50ಕ್ಕೂ ಹೆಚ್ಚು ಲಾರಿಗಳನ್ನು ತಡೆದು ಆಕ್ರೋಶ
Advertisement