– ಕೋರ್ಟ್ ಕಲಾಪ ಬಿಟ್ಟು ಹೊರಗೆ ಓಡಿದ ವಕೀಲರು, ಕಕ್ಷಿದಾರರು, ಸಿಬ್ಬಂದಿ
ಹಾವೇರಿ: ಕೊಡಗು, ಧಾರವಾಡ ಹಾಗೂ ಹಾವೇರಿ ಜಿಲ್ಲಾ ನ್ಯಾಯಾಲಯಗಳಿಗೆ (District Court) ಮತ್ತೊಮ್ಮೆ ಬಾಂಬ್ ಬೆದರಿಕೆ (Bomb Threat) ಕರೆ, ಇಮೇಲೆ ಸಂದೇಶ ಬಂದಿದ್ದು, ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಕೋರ್ಟ್ ಆವರಣದ ಸುತ್ತ ಪರಿಶೀಲನೆ ನಡೆಸಿದ್ದಾರೆ.
ಹಾವೇರಿ ಜಿಲ್ಲಾ ನ್ಯಾಯಾಲಯಕ್ಕೆ ಎರಡನೇ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬೆದರಿಕೆ ಕರೆಯ ಮಾಹಿತಿ ಬರುತ್ತಿದ್ದಂತೆ ಕೋರ್ಟ್ ಕಲಾಪಗಳನ್ನು ಸ್ಥಗಿತಗೊಳಿಸಿ, ವಕೀಲರು, ಕಕ್ಷಿದಾರರು ಹಾಗೂ ನ್ಯಾಯಾಲಯದ ಸಿಬ್ಬಂದಿ ಹೊರಗಡೆ ಓಡಿ ಬಂದಿದ್ದಾರೆ. ಇದನ್ನೂ ಓದಿ: ಸಿಶೆಲ್ಸ್ ನ್ಯಾಷನಲ್ ಡೇಗೆ ಪ್ರಧಾನಿ ಮೋದಿ ಮುಖ್ಯ ಅತಿಥಿ – 194 ವರ್ಷದ ದೈತ್ಯ ಆಮೆ ಜೋನಥನ್ ಭೇಟಿ
ಸ್ಥಳಕ್ಕೆ ಹಾವೇರಿ ನಗರ ಠಾಣೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದ ಸಿಬ್ಬಂದಿ ಆಗಮಿಸಿ ನ್ಯಾಯಾಲಯದ ಆವರಣದಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಕೋರ್ಟ್ ಕಟ್ಟಡ, ಪಾರ್ಕಿಂಗ್ ಪ್ರದೇಶ ಸೇರಿದಂತೆ ಎಲ್ಲಾ ಭಾಗಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ದುಷ್ಕರ್ಮಿಗಳು ಮಧ್ಯಾಹ್ನ 2:15ಕ್ಕೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿರುವುದರಿಂದ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ನ್ಯಾಯಾಲಯದ ಹೊರಭಾಗದಲ್ಲಿ ನೂರಾರು ವಕೀಲರು, ಕಕ್ಷಿದಾರರು ಹಾಗೂ ಸಾರ್ವಜನಿಕರು ಸೇರಿದ್ದು, ಪರಿಶೀಲನೆ ಪೂರ್ಣಗೊಳ್ಳುವವರೆಗೆ ಕೋರ್ಟ್ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಈ ಕುರಿತು ಹಾವೇರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಬೆದರಿಕೆ ಸಂದೇಶದ ಮೂಲ ಪತ್ತೆಗಾಗಿ ಪೊಲೀಸರು ತನಿಖೆಯನ್ನ ಮುಂದುವರಿಸಿದ್ದಾರೆ. ಇಂದಿನ ಕಲಾಪಗಳನ್ನ ಸೋಮವಾರಕ್ಕೆ ಮುಂದೂಡಲಾಯಿತು. ಇದನ್ನೂ ಓದಿ: ಶಾಲೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅತಿಥಿ ಶಿಕ್ಷಕ – ಹೃದಯಾಘಾತದಿಂದ ಸಾವು
ಇನ್ನು ಮಡಿಕೇರಿ ನಗರದ ಹೊರವಲಯದಲ್ಲಿರುವ ಕೇಂದ್ರೀಯ ವಿದ್ಯಾಲಯ ಮತ್ತು ಜಿಲ್ಲಾ ನ್ಯಾಯಾಲಯಕ್ಕೆ ಅಪರಿಚಿತರಿಂದ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ಆರಂಭಿಸಿದರು. ಬಾಂಬ್ ಬೆದರಿಕೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲಾಗಿತ್ತು. ಶಾಲಾ ಆವರಣದಲ್ಲಿ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಹಾಯದಿಂದ ಸಂಪೂರ್ಣ ತಪಾಸಣೆ ನಡೆಸಲಾಯಿತು. ಈ ನಡುವೆ ಶಾಲೆಯಲ್ಲಿ ಬಾಂಬ್ ಇರುವ ಬಗ್ಗೆ ಮೇಲ್ ಬಂದ ಹಿನ್ನೆಲೆಯಲ್ಲಿ ಕೇಂದ್ರಿಯ ವಿದ್ಯಾಲಯದ ಮಕ್ಕಳ ಪೋಷಕರು ಹಾಗೂ ಮಕ್ಕಳು ಸಿಬ್ಬಂದಿಗಳು ಕೆಲ ಕಾಲ ಆತಂಕಕ್ಕೆ ಒಳಗಾಗಿದ್ದರು. ಇದನ್ನೂ ಓದಿ: ಕಾರಲ್ಲೇ ಪ್ರೇಮಿಗಳ ಗಲಾಟೆ – ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಯುವಕ ಆತ್ಮಹತ್ಯೆ
ಅಲ್ಲದೇ ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಎಂಟು ದಿನದಲ್ಲಿ ಮೂರು ಬಾರಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಇ-ಮೇಲ್ ಮುಖಾಂತರ ಈ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮೂರು ಬಾರಿಯೂ ಬೇರೆ ಬೇರೆ ಹೆಸರಿನಲ್ಲಿಯೇ ಈ ಬೆದರಿಕೆ ಸಂದೇಶ ಬಂದಿದೆ. ಈ ಬಾರಿ ಅನ್ನನಾಥಮ್ ಅರಿಯಪ್ಪನ್ ಎಂಬ ಹೆಸರಿನಲ್ಲಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಇದನ್ನೂ ಓದಿ: ಮದುವೆ ಸಂಭ್ರಮದಲ್ಲಿದ್ದ ನಿರ್ಮಾಪಕ ಭಾ.ಮಾ.ಹರೀಶ್ ಪುತ್ರ ಉಲ್ಲಾಸ್‌ಗೌಡ ನಿಧನ
ಆದಷ್ಟು ಬೇಗ ನ್ಯಾಯಾಲಯದಲ್ಲಿ ಬಾಂಬ್ ಸಿಡಿಯಲಿದೆ. ನ್ಯಾಯಾಲಯದ ಸಿಬ್ಬಂದಿ ಹಾಗೂ ನ್ಯಾಯಾಧೀಶರು ಕಣ್ಣು, ಮೂಗು ಮುಚ್ಚಿ ಕುಳಿತಿದ್ದಾರೆ. ಮೂರು ಗಂಟೆಯಲ್ಲಿ ಬಾಂಬ್ ಸಿಡಿಯಲಿದೆ. ಅದು ನನ್ನ ಕೈಯಲ್ಲಿಲ್ಲ ಎಂದು ಇ-ಮೇಲ್‌ನಲ್ಲಿ ಬರೆಯಲಾಗಿದೆ. ಎಂಟು ದಿನದಲ್ಲಿ ಮೂರು ಬಾರಿ ಈ ರೀತಿಯ ಸಂದೇಶ ನ್ಯಾಯಾಲಯಕ್ಕೆ ಬಂದಿದೆ. ಈ ರೀತಿ ಸಂದೇಶ ಬಂದಾಗೊಮ್ಮೆ ಪೊಲೀಸರು, ಶ್ವಾನ ದಳದವರು ಹಾಗೂ ಬಾಂಬ್ ನಿಷ್ಕ್ರೀಯ ದಳದವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಶನಿವಾರ ಕೂಡ ಇ-ಮೇಲ್ ಸಂದೇಶವನ್ನು ಪೊಲೀಸರ ಗಮನಕ್ಕೆ ತರಲಾಗಿದ್ದು, ಮತ್ತೆ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ‘ಮೌನದ ಏಕೈಕ ಧ್ವನಿ’ – ಗಾಜಾ ಕುರಿತು ಕೇಂದ್ರವನ್ನು ಟೀಕಿಸಿ ಸೋನಿಯಾ ಗಾಂಧಿ ಲೇಖನ
