ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ!

Public TV
1 Min Read
SCHOOL

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಾಂಬ್ ಬೆದರಿಕೆಗಳು (Bomb Threat For Schools) ಮತ್ತೆ ಆರಂಭವಾಗಿದೆ.

ಈ ಬಾರಿ ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಆಗಂತುಕರು ಬಾಂಬ್ ಬೆದರಿಕೆ ಹಾಕಿದ್ದಾರೆ. ಇ- ಮೇಲ್ ಮೂಲಕ ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ ಸೇರಿದಂತೆ 15 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಾರೆ.

ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಇತ್ತ ಬೆದರಿಕೆ ಹಿನ್ನೆಲೆಯಲ್ಲಿ ಆತಂಕಗೊಂಡ ಪೋಷಕರು ಶಾಲೆಯ ಬಳಿ ಓಡಿ ಬಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಎಚ್ಚರಿಕೆ

ಕಳೆದ ವರ್ಷವೂ ಬೆಂಗಳೂರು ನಗರದ ನಾಲ್ಕು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು. ಅಂದು ಕೂಡ ಇ-ಮೇಲ್ ಮಾಡಿರುವ ಆಗಂತುಕರು, ನಿಮ್ಮ ಶಾಲೆಯಲ್ಲಿ ಶಕ್ತಿಶಾಲಿ ಬಾಂಬ್ ಇರಿಸಲಾಗಿದ್ದು. ಎಚ್ಚರಿಕೆ ವಹಿಸುವುದು ನಿಮ್ಮ ಕರ್ತವ್ಯ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿ ಎಂದು ಹೇಳಲಾಗಿತ್ತು.

ಮಹದೇವಪುರದ ಗೋಪಾಲನ್ ಇಂಟನ್ರ್ಯಾಷನಲ್ ಶಾಲೆ, ವರ್ತೂರು ಠಾಣಾ ವ್ಯಾಪ್ತಿಯ ಡೆಲ್ಲಿ ಪಬ್ಲಿಕ್ ಸ್ಕೂಲ್, ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯ ನ್ಯೂ ಅಕಾಡೆಮಿ ಸ್ಕೂಲ್, ಹೆಣ್ಣೂರು ಠಾಣಾ ವ್ಯಾಪ್ತಿಯ ಸೇಂಟ್ ವಿನ್ಸೆಂಟ್ ಪೌಲ್ ಶಾಲೆ, ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್‍ನಲ್ಲಿ ಬಾಂಬ್ ಇಟ್ಟಿರುವುದಾಗಿ ದುಷ್ಕರ್ಮಿಗಳು ಬೆದರಿಸಿದ್ದರು. ಕೂಡಲೇ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರೀಯ ದಳದ ಸಿಬ್ಬಂದಿ ದೌಡಾಯಿಸಿ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದರು.

Share This Article