Bomb Threat: ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ಹುನ್ನಾರ- ಹೆಚ್‍ಡಿಕೆ

Public TV
1 Min Read
HD Kumaraswamy 1

ಬೆಂಗಳೂರು: ಸಿಲಿಕಾನ್ ಸಿಟಿಯ ಸುಮಾರು 20ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ (Bomb Threat) ಇ-ಮೇಲ್ ಬಂದಿರುವ ಪ್ರಕರಣ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ.

ಈ ಸಂಬಂಧ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಹೆಚ್‍ಡಿಕೆ, ಸಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ಹುನ್ನಾರ ಇದಾಗದೆ ಎಂದು ಹೇಳಿದ್ದಾರೆ.

ಎಕ್ಸ್ ನಲ್ಲಿ ಹೆಚ್‍ಡಿಕೆ ಬರೆದಿದ್ದೇನು..?: ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ. ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ದುರುದ್ದೇಶದಿಂದಲೇ ದುಷ್ಟಶಕ್ತಿಗಳು ಇಂತಹ ಹುನ್ನಾರ ನಡೆಸಿರಬಹುದು.

ರಾಜ್ಯ ಕಾಂಗ್ರೆಸ್ (Congress) ಸರ್ಕಾರವು ಯಾವುದೇ ಕಾರಣಕ್ಕೂ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಪೋಷಕರು ಮಕ್ಕಳನ್ನು ಧೈರ್ಯವಾಗಿ ಶಾಲೆಗಳಿಗೆ ಕಳಿಸುವಂತಹ ಸುರಕ್ಷತೆ, ಭದ್ರತೆಯ ಖಾತರಿಯನ್ನು ನೀಡಬೇಕು. ಈ ಬೆದರಿಕೆಗಳ ಬಗ್ಗೆ ಅಮೂಲಾಗ್ರ ತನಿಖೆ ನಡೆಸಿ, ಇದರ ಹಿಂದೆ ಯಾರಿದ್ದಾರೆ? ಮೂಲ ಯಾವುದು ಎನ್ನುವುದನ್ನು ಪತ್ತೆ ಹಚ್ಚಿ ದುಷ್ಟರ ಹೆಡೆಮುರಿ ಕಟ್ಟಬೇಕು. ಈ ಬಗ್ಗೆ ಕೇಂದ್ರ ಸರ್ಕಾರದ ನೆರವು ಪಡೆಯುವ ಬಗ್ಗೆ ರಾಜ್ಯ ಸರ್ಕಾರ ಮೀನಾಮೇಷ ಎಣಿಸಬಾರದು ಎಂದು ಬರೆದುಕೊಂಡಿದ್ದಾರೆ.

HDK 1

ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ನಗರದ 20ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ. ಖಾರಿಜೈಟ್ಸ್ ಎಂಬ ಮೂಲಭೂತವಾದಿ ಸಂಘಟನೆ ಹೆಸರಲ್ಲಿ ಬಂದ ಇ-ಮೇಲ್ ಬಂದಿದೆ. ಇ-ಮೇಲ್‍ನಲ್ಲಿ ‘ನಿಮ್ಮನ್ನು ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ. ತಾಜ್ ಮೇಲೆ ದಾಳಿ ಮಾಡಿದಂತೆ ದಾಳಿ ಮಾಡುತ್ತೇವೆ. ಇಸ್ಲಾಂಗೆ ಮತಾಂತರವಾಗಿ ಇಲ್ಲವೇ ಸಾಯಲು ಸಿದ್ಧರಾಗಿ’ ಎಂದು ಕೆಂಗೇರಿಯ ಚಿತ್ರಕೂಟ ಶಾಲೆಗೆ ಬಂದ ಈ-ಮೇಲ್‍ನಲ್ಲಿ ಬೆದರಿಕೆ ಹಾಕಲಾಗಿದೆ.

ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸದ್ಯ ಎಲ್ಲಾ ಶಾಲೆಗಳಿಲ್ಲಿಯೂ ಬಾಂಬ್ ನಿಷ್ಕ್ರೀಯದ ದಳದ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತ ವಿಚಾರ ತಿಳಿಯುತ್ತಿದ್ದಂತೆಯೇ ಪೋಷಕರು ಶಾಲೆ ಬಳಿ ಓಡೋಡಿ ಬಂದಿದ್ದಾರೆ. ಅಲ್ಲದೇ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ.

Share This Article