ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ

Public TV
1 Min Read
AIR INDIA

ನವದೆಹಲಿ: ಮುಂಬೈನಿಂದ (Mumbai) ನ್ಯೂಯಾರ್ಕ್‌ಗೆ (New York) ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ (Air India flight) ಬಾಂಬ್ ಬೆದರಿಕೆ ಹಾಕಲಾಗಿದ್ದು, ಭದ್ರತಾ ದೃಷ್ಟಿಯಿಂದ ಮಾರ್ಗ ಬದಲಾವಣೆ ಮಾಡಲಾಗಿದೆ. ಮಧ್ಯದಲ್ಲೇ ವಾಪಸ್‌ ತಿರುಗಿಸಿ ದೆಹಲಿ  (Delhi) ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡ್‌ ಮಾಡಲಾಗಿದೆ. ಬಳಿಕ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

ವಿಮಾನವು ಪ್ರಸ್ತುತ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈನಿಂದ ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣಕ್ಕೆ AI 119 ವಿಮಾನವು ಮುಂಬೈನಿಂದ ಸುಮಾರು 2 ಗಂಟೆಗೆ ಹೊರಟಿತ್ತು. ಬಾಂಬ್‌ ಬೆದರಿಕೆ ಬಳಿಕ ವಿಮಾನವನ್ನು ದೆಹಲಿಗೆ ತಿರುಗಿಸಲಾಯಿತು.

ಕಳೆದ ತಿಂಗಳು ಮುಂಬೈನಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಬಳಿಕ ಅದನ್ನು ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿತ್ತು.

Share This Article