ನವದೆಹಲಿ: ಗುರುಗ್ರಾಮ್‌ನ (Gurugram) ಆಂಬಿಯೆನ್ಸ್ ಮಾಲ್‌ನಲ್ಲಿ ಹುಸಿ ಬಾಂಬ್ ಬೆದರಿಕೆ (Bomb Threat) ಬೆನ್ನಲ್ಲೇ ದಕ್ಷಿಣ ದೆಹಲಿಯ ಮೂರು ಮಾಲ್‌ಗಳು ಮತ್ತು ಒಂದು ಆಸ್ಪತ್ರೆಗೆ ಸೋಮವಾರ ಇ-ಮೇಲ್ (E-mail) ಮೂಲಕ ಬಾಂಬ್ ಬೆದರಿಕೆ ಬಂದಿದೆ. ಬಾಂಬ್ ಬೆದರಿಕೆ ಬೆನ್ನಲ್ಲೇ ಜನರನ್ನು ಸ್ಥಳಾಂತರಿಸಿ, ಸ್ಥಳ ಪರಿಶೀಲನೆ ನಡೆಸಲಾಯಿತು.
ಚಾಣಕ್ಯಪುರಿಯ ಚಾಣಕ್ಯ ಮಾಲ್, ಸಾಕೇತ್‌ನಲ್ಲಿರುವ ಸೆಲೆಕ್ಟ್ ಸಿಟಿ ವಾಕ್, ವಸಂತ್ ಕುಂಜ್‌ನಲ್ಲಿರುವ ಆಂಬಿಯೆನ್ಸ್ ಮಾಲ್ ಮತ್ತು ಚಾಣಕ್ಯಪುರಿಯಲ್ಲಿರುವ ಪ್ರೈಮಸ್ ಆಸ್ಪತ್ರೆ ಸೇರಿ ಇತರ ಕೆಲವು ಸ್ಥಳಗಳಲ್ಲಿ ಬಾಂಬ್ ಬೆದರಿಕೆಯ ಕುರಿತು ಮಾಹಿತಿ ಪಡೆದಿರುವುದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಲು SIT ಪತ್ರ ಬರೆದಿದೆ: ಸಿದ್ದರಾಮಯ್ಯ
ಇ-ಮೇಲ್‌ನಲ್ಲಿ ಬರೆಯಲಾದ ಬೆದರಿಕೆಯು ಕೆಲವೇ ಗಂಟೆಗಳಲ್ಲಿ ಬಾಂಬ್ ಸ್ಫೋಟಗೊಳ್ಳುತ್ತದೆ ಎಂದು ಉಲ್ಲೇಖಿಸಿತ್ತು. ಈ ಹಿನ್ನೆಲೆ ಭದ್ರತಾ ಸಿಬ್ಬಂದಿ ಅಲ್ಲಿರುವ ಜನರನ್ನು ಸ್ಥಳಾಂತರಿಸಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದರು. ಈ ವೇಳೆ ಯಾವುದೇ ಬಾಂಬ್ ಪತ್ತೆಯಾಗದ ಹಿನ್ನೆಲೆ ಇದನ್ನು ಹುಸಿ ಬಾಂಬ್ ಬೆದರಿಕೆ ಎಂದು ನಿರ್ಧರಿಸಲಾಯಿತು. ಇದನ್ನೂ ಓದಿ: ರಾಜ್ಯಪಾಲರನ್ನು ನಮ್ಮ ನಾಯಕರು ನಿಂದನೆ ಮಾಡಿಲ್ಲ, ಇರೋದನ್ನೆ ಹೇಳಿದ್ದಾರೆ: ಸಿದ್ದರಾಮಯ್ಯ
ಆ.17 ರಂದು ಗುರುಗ್ರಾಮ್‌ನಲ್ಲಿರುವ ಆಂಬಿಯೆನ್ಸ್ ಮಾಲ್ ಮ್ಯಾನೇಜ್‌ಮೆಂಟ್‌ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಇಮೇಲ್ ಕಳುಹಿಸಿದವರು ಕಟ್ಟಡದಲ್ಲಿರುವ ಪ್ರತಿಯೊಬ್ಬರನ್ನು ಕೊಲ್ಲಲು ಬಾಂಬ್‌ಗಳನ್ನು ಇಡಲಾಗಿದೆ ಎಂದು ಹೇಳಿದ್ದರು. ಮಾಲ್‌ನಲ್ಲಿ ಶೋಧ ನಡೆಸಿದ ಬಳಿಕ ಯಾವುದೇ ಸ್ಫೋಟಕ, ಬಾಂಬ್ ಪತ್ತೆಯಾಗಿರಲಿಲ್ಲ. ಇದನ್ನೂ ಓದಿ: ದೇವರಾಜ್ ಅರಸ್ ಅವರಿಗೆ ಮರಣೋತ್ತರ ಭಾರತ ರತ್ನ ನೀಡಲು ಕೇಂದ್ರಕ್ಕೆ ಶಿಫಾರಸು- ಸಿದ್ದರಾಮಯ್ಯ
ಅದೇ ದಿನ ನೋಯ್ಡಾದ ಡಿಎಲ್‌ಎಫ್ ಮಾಲ್ ಆಫ್ ಇಂಡಿಯಾದ ಅಧಿಕಾರಿಗಳು ಕಟ್ಟಡದಿಂದ ಜನರನ್ನು ಸ್ಥಳಾಂತರಿಸಿದರು. ಇದು ಭಯದ ವಾತಾವರಣವನ್ನು ಸೃಷ್ಟಿಸಿತ್ತು. ಬಳಿಕ ಮಾಲ್‌ನ ಭದ್ರತೆಯನ್ನು ಪರಿಶೀಲಿಸಲು ಅಣಕು ಡ್ರಿಲ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಆ.2ರಂದು ಗ್ರೇಟರ್ ಕೈಲಾಶ್‌ನ ಶಾಲೆಗೆ ಇ-ಮೇಲ್ ಬಾಂಬ್ ಬೆದರಿಕೆ ಬಂದಿತ್ತು. ಅದರಲ್ಲಿ ಕಟ್ಟಡವನ್ನು ಸ್ಫೋಟಿಸಲಾಗುವುದು ಎಂದು ಬೆದರಿಸಲಾಗಿತ್ತು. ಇದನ್ನೂ ಓದಿ: ವಿಧಾನ ಪರಿಷತ್‌ನಲ್ಲಿ ಬಹುಮತ ಬಂದ್ರೆ ಬಿಜೆಪಿ ತಂದಿದ್ದ ಭೂ ಕಂದಾಯ ಕಾಯ್ದೆ ರದ್ದು ಮಾಡ್ತೀನಿ: ಸಿದ್ದರಾಮಯ್ಯ