ಮುಂಬೈ: ಮಹಾರಾಷ್ಟ್ರ (Maharashtra) ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಗೆ (Eknath Shinde) ಬಾಂಬ್ ಬೆದರಿಕೆ (Bomb threat) ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು (Mumbai Police) ಬಂಧಿಸಿದ್ದಾರೆ.
ಮಹಾರಾಷ್ಟ್ರದ ದೆಲ್ಗಾಂವ್ ಮಾಹಿ ಬುಲ್ದಾನಾದ ನಿವಾಸಿಗಳಾದ ಮಂಗೇಶ್ ವಾಯಲ್ (35), ಅಭಯ್ ಶಿಂಗ್ನೆ (22) ಬಂಧಿತ ಆರೋಪಿಗಳು. ಇಬ್ಬರನ್ನೂ ಬುಲ್ದಾನಾ ಪೊಲೀಸರು ಬಂಧಿಸಿದ್ದಾರೆ ಎಂದು ಡಿಸಿಪಿ ದತ್ತ ನಲವಾಡೆ ತಿಳಿಸಿದ್ದಾರೆ. ಇದನ್ನೂ ಓದಿ: ಡಿವೋರ್ಸ್ ಬಳಿಕ ಚಹಲ್‌ನಿಂದ 60 ಕೋಟಿ ಜೀವನಾಂಶ – ಧನಶ್ರೀ ಕುಟುಂಬ ಹೇಳಿದ್ದೇನು?
ಏಕನಾಥ್ ಶಿಂಧೆ ಅವರ ಕಾರಿಗೆ ಬಾಂಬ್ ಹಾಕುವುದಾಗಿ ಗೋರೆಗಾಂವ್ ಮತ್ತು ಜೆ.ಜೆ ಮಾರ್ಗ್ ಪೊಲೀಸ್ ಠಾಣೆಗಳಿಗೆ ಇ-ಮೇಲ್ ಬೆದರಿಕೆ ಸಂದೇಶಗಳು ಬಂದಿದ್ದವು. ಮರಾಠಿ ಭಾಷೆಯಲ್ಲಿದ್ದ ಇ-ಮೇಲ್‌ಗಳನ್ನು ಬೇರೆ ಬೇರೆ ಹೆಸರುಗಳಲ್ಲಿ ಎರಡೂ ಪೊಲೀಸ್ ಠಾಣೆಗಳಿಗೆ ಆರೋಪಿಗಳು ಕಳುಹಿಸಿದ್ದರು. ಇ-ಮೇಲ್ ಐಪಿ ಅಡ್ರಸ್‌ಗಳನ್ನು ಟ್ರ್ಯಾಕ್ ಮಾಡಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಐಫೋನ್ 16ಇ ಬಿಡುಗಡೆ | ಬೆಲೆ ಎಷ್ಟು? ಬೇರೆ ದೇಶದಲ್ಲಿ ಎಷ್ಟು? ಭಾರತದಲ್ಲಿ ದುಬಾರಿ ಯಾಕೆ?
ಅಪರಿಚಿತರಿಂದ ಬಂದ ಇ-ಮೇಲ್ ವಿರುದ್ಧ ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್‌ಗಳ 351 (3) ಮತ್ತು 353 (2) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ʻಲೇಡಿ ಡಾನ್ʼ ಜೋಯಾ ಅರೆಸ್ಟ್ – ಈಕೆ ಹಿನ್ನೆಲೆ ಕಂಡು ಪೊಲೀಸರೇ ಶಾಕ್
ಶಿಂಧೆ ಅವರಿಗೆ ಬಂದಿರುವ ಬೆದರಿಕೆಯು ದೇಶದ ಕಾನೂನು ಮತ್ತು ಸುವ್ಯವಸ್ಥೆಯ ಸ್ಥಿತಿಯ ಬಗ್ಗೆ ಜನರಲ್ಲಿ ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಕಾಂಗ್ರೆಸ್ ಶಾಸಕ ಸತೇಜ್ ಪಾಟೀಲ್ ಟೀಕಿಸಿದ್ದಾರೆ. ಇದನ್ನೂ ಓದಿ: ಹೃದಯ ಕುಂಡದಲ್ಲಿ ಹೂಗಳ ಜೋಡಿಸುವ ಅವಳ ಮಾತುಗಳು ನಂಗಿಷ್ಟ!