– ಉತ್ತರಪ್ರದೇಶದಿಂದ ಬೆಂಗಳೂರಿಗೆ ಆರೋಪಿ ಕರೆತಂದ ಪೊಲೀಸರು
ಬೆಂಗಳೂರು: ಇಲ್ಲಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಕೇಂದ್ರ ಕಚೇರಿಗೆ ಬಾಂಬ್ ಇಡುವುದಾಗಿ ಇ-ಮೇಲ್ ಬೆದರಿಕೆ(Bomb Threat) ಹಾಕಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಉತ್ತರಪ್ರದೇಶದ ಘಾಜಿಯಾಬಾದ್‌ನಲ್ಲಿ ಆರೋಪಿಯನ್ನ ಸಂಜಯನಗರ ಪೊಲೀಸರು ಬಂಧಿಸಿದ್ದಾರೆ. ಯುಪಿ ಮೂಲದ ಆರೋಪಿಯನ್ನ ಬಂಧಿಸಿ ಬೆಂಗಳೂರಿಗೆ ಕರೆ ತಂದಿದ್ದಾರೆ. ಆರೋಪಿ ಬಳಿ ಇದ್ದ ಎಲೆಕ್ಟ್ರಾನಿಕ್ ಸಾಧನಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇನ್ನು ಆರೋಪಿಯ ವಿಚಾರಣೆ ವೇಳೆ ಮಾನಸಿಕ ಅಸ್ವಸ್ಥನೆಂದು ತಿಳಿದು ಬಂದಿದೆ. ಸದ್ಯ ಆರೋಪಿಯನ್ನ ಪೊಲೀಸರು ಹೆಚ್ಚಿನ ತನಿಖೆ ಮಾಡ್ತಿದ್ದಾರೆ.ಇದನ್ನೂ ಓದಿ: ಮಡಿಕೇರಿಯಲ್ಲಿ 3 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ; ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು
ನಿನ್ನೆ ಇಸ್ರೋ ಕಚೇರಿಗೆ ಬಾಂಬ್ ಇಡುವುದಾಗಿ ಮೇಲ್ ಮಾಡಿ ಬೆದರಿಕೆ ಹಾಕಿದ್ದ. ಈ ಸಂಬಂಧ ನಿನ್ನೆ ಇಸ್ರೋ ಸಂಸ್ಥೆಯ ಆಡಳಿತಾಧಿಕಾರಿ ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ರು. ಇದನ್ನೂ ಓದಿ: ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲ, ರೈತರು ಬೆಳೆ ಬೆಳೆಯಬೇಡಿ ಎಂದಿರೋದು ಆಶ್ಚರ್ಯ: ಸಿಎಂ ಹೇಳಿಕೆಗೆ ವಿಜಯೇಂದ್ರ ಕಿಡಿ
