– ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು
ಬೆಂಗಳೂರು: ಪಂಜಾಬಿ ಖ್ಯಾತ ಗಾಯಕ ದಿಲ್ಜಿತ್ ದೋಸಂಜ್ (Diljit Dosanjh) ಅವರ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ (Bomb Threat) ಬಂದಿದೆ. ಕಾರ್ಯಕ್ರಮದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಲಾಗಿದೆ. ಜೊತೆಗೆ ಖಲಿಸ್ತಾನ್ ಜಿಂದಾಬಾದ್ ಎಂಬ ಸಂದೇಶವನ್ನೂ ಕಳುಹಿಸಲಾಗಿದೆ.
ನವೆಂಬರ್ 29ರಂದು ಮಾದನಾಯಕನಹಳ್ಳಿ (Madanayakanahalli) ಬಳಿಯ ಬಿಇಐಸಿಯಲ್ಲಿ ದಿಲ್ಜಿತ್ ದೋಸಂಜ್ ಅವರ ಸಂಗೀತ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 20ರಿಂದ 25 ಸಾವಿರ ಜನರು ಭಾಗಿಯಾಗುವ ನಿರೀಕ್ಷೆಯಿದೆ. ಕಾರ್ಯಕ್ರಮದ ವೇಳೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: ನಿಲ್ಲದ ಕಾಡಾನೆ ʻಕಾಳಗʼ – ಸ್ಪೀಕರ್ ಭೇಟಿಗೆ ಬಂದ ಚಿಕ್ಕಮಗಳೂರಿನ ಮೂವರು ಶಾಸಕರು
ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಕಚೇರಿಗೆ ಇಮೇಲ್ ಮೂಲಕ ಈ ಬೆದರಿಕೆ ಸಂದೇಶ ರವಾನೆಯಾಗಿದೆ. ಕಾರ್ಯಕ್ರಮಕ್ಕೆ ಮೆಟ್ರೋದಲ್ಲಿ ಬರಬೇಡಿ, ಮಕ್ಕಳನ್ನು ಕರೆದುಕೊಂಡು ಬರಬೇಡಿ ಸ್ಫೋಟ ಮಾಡುತ್ತೇವೆ ಎಂದು ಇಮೇಲ್ನಲ್ಲಿ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಹಿಜಬ್ ಧರಿಸದೆ ಹಾಡಿದ ಇರಾನಿ ಗಾಯಕಿಗೆ 74 ಚಾಟಿ ಏಟುಗಳ ಶಿಕ್ಷೆ
ಈ ಇಮೇಲ್ ಗಮನಿಸಿದ ಬಳಿಕ ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಕಚೇರಿಯಿಂದಲೂ ಈ ಬಗ್ಗೆ ಮಾಹಿತಿ ರವಾನೆಯಾಗಿದೆ. ಈ ಸಂಬಂಧ ಉತ್ತರ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಬಿರಿಯಾನಿ ತಿನ್ನಲು ತೆರಳುತ್ತಿದ್ದಾಗ ಬೈಕಿಗೆ ಲಾರಿ ಡಿಕ್ಕಿ – ಇಬ್ಬರು ಯುವಕರು ಬಲಿ
