ಮುಂಬೈ: ಮಹಾರಾಷ್ಟ್ರ (Maharashtra) ಭಾರತೀಯ ರಿಸರ್ವ್ ಬ್ಯಾಂಕ್ (RBI)ನ ಗ್ರಾಹಕ ಸೇವಾ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ನ.16 ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಆರ್‌ಬಿಐನ (RBI) ಗ್ರಾಹಕ ಸೇವಾ ಕೇಂದ್ರದ ಸಹಾಯವಾಣಿ ಸಂಖ್ಯೆಗೆ ಕರೆ ಬಂದಿದ್ದು, ಸೆಂಟ್ರಲ್ ಬ್ಯಾಂಕನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ.ಇದನ್ನೂ ಓದಿ: IPL Mega Auction 2025: ಹರಾಜಲ್ಲಿ 13ರ ಬಾಲಕ!
Advertisement
Advertisement
ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ನಾನು ಲಕ್ಷರ್ ಇ ತೊಯ್ಬಾ ಗುಂಪಿನ ಸಿಇಓ ಎಂದು ಹೇಳಿ, ಹಾಡನ್ನು ಹಾಡಿದ್ದಾರೆ. ಬಳಿಕ ಬಾಂಬ್ ಬೆದರಿಕೆ ಹಾಕಿದ್ದಾರೆ. ಜೊತೆಗೆ 2008ರಲ್ಲಿ ಇದೇ ಗುಂಪು ಮುಂಬೈನಲ್ಲಿ ದಾಳಿ ನಡೆಸಿತ್ತು. ಸದ್ಯ ಈ ಸಂಬಂಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.
Advertisement
ಈ ಕುರಿತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಪ್ರತಿಕ್ರಿಯೆ ನೀಡಿದ್ದು, ಇಂತಹ ಬಾಂಬ್ ಬೆದರಿಕೆಗಳು ನಾಗರಿಕರ ಮೇಲೆ ಪರಿಣಾಮ ಬೀರುವುದಲ್ಲದೆ ದೇಶದ ಆರ್ಥಿಕ ಭದ್ರತೆಯನ್ನು ಅಸ್ಥಿರಗೊಳಿಸುತ್ತವೆ. ಈ ಪ್ರಕರಣವನ್ನು ಕೇಂದ್ರ ಸರ್ಕಾರವು ಹೆಚ್ಚಿನ ಕಾಳಜಿಯೊಂದಿಗೆ ಕೈಗೆತ್ತಿಕೊಂಡಿದೆ. ಇಂತಹ ತಪ್ಪು ಮಾಹಿತಿ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಎಚ್ಚರಿಕೆ ನೀಡಿದೆ.
Advertisement
ಇತ್ತೀಚಿನ ದಿನಗಳಲ್ಲಿ ದೇಶಿಯ ಹಾಗೂ ವಿದೇಶಿ ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಕಂಡುಬರುತ್ತಿರುವ ಹೊತ್ತಿನಲ್ಲೇ ಆರ್‌ಬಿಐಗೆ ಬಾಂಬ್ ಬೆದರಿಕೆ ಬಂದಿದೆ.ಇದನ್ನೂ ಓದಿ: ಗುಡ್‌ನ್ಯೂಸ್ – ʻಕಾಂತಾರ ಚಾಪ್ಟರ್-1ʼ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್