ನವದೆಹಲಿ: ಕೋಲ್ಕತ್ತಾ ಏರ್ಪೋರ್ಟ್ (Kolkatta Airport) ಸೇರಿದಂತೆ ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈನ ಶಾಲೆಗಳಿಗೆ ಬಾಂಬ್ ಬೆದರಿಕೆ (Bomb Threat) ಬಂದಿದೆ.
ಮೂಲಗಳ ಪ್ರಕಾರ, ರೋಹಿಣಿಯ ವೆಂಕಟೇಶ್ವರ ಪಬ್ಲಿಕ್ ಸ್ಕೂಲ್ ಮತ್ತು ಮಯೂರ್ ವಿಹಾರ್ನ ಸಲ್ವಾನ್ ಪಬ್ಲಿಕ್ ಸ್ಕೂಲ್ಗೆ ಬಾಂಬ್ ಬೆದರಿಕೆಗಳು ಬಂದಿವೆ. ಮಾಹಿತಿ ತಿಳಿಯುತ್ತಿದ್ದಂತೆ ದೆಹಲಿ ಪೊಲೀಸ್ (Dehli Police) ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಈವರೆಗೂ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇದನ್ನೂ ಓದಿ:ಸಿದ್ದರಾಮಯ್ಯರಿಗೆ ಬ್ಲ್ಯಾಕ್ಮೇಲ್ ಮಾಡಲು ಯತ್ನ, ಸ್ಟಿಂಗ್ನಲ್ಲಿ ಕಾಂಗ್ರೆಸ್ ಮಹಿಳೆಯೇ ಇದ್ದಾಳೆ: ಯತೀಂದ್ರ ಸ್ಫೋಟಕ ಹೇಳಿಕೆ
ಇದಕ್ಕೂ ಮುನ್ನ ಅ.15ರಂದು ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದವು. ಅದಾದ ಒಂದು ವಾರದ ಬಳಿಕ ಮತ್ತೆ ಇದೀಗ ಬಾಂಬ್ ಬೆದರಿಕೆ ಬಂದಿದೆ. ಸದ್ಯ ಪೊಲೀಸರು ಕ್ಯಾಂಪಸ್ಗಳ ಸುತ್ತಲೂ ಗಸ್ತು ತಿರುಗುವುದನ್ನು ಹೆಚ್ಚಿಸಿದ್ದು, ಬೆದರಿಕೆ ಬಂದ ಇಮೇಲ್ಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ವರದಿ ಮಾಡುವಂತೆ ಸಾರ್ವಜನಿಕರಿಗೆ ತಿಳಿಸಿದ್ದಾರೆ.
ಕೋಲ್ಕತ್ತಾ ಏರ್ಪೋರ್ಟ್ಗೆ ಬಾಂಬ್ ಬೆದರಿಕೆ
ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಕ್ಕೂ (Netaji Subhash Chandra Bose International Airport) ಬಾಂಬ್ ಬೆದರಿಕೆ ಬಂದಿದೆ. ವಿಮಾನ ನಿಲ್ದಾಣದ ಮಹಿಳಾ ಶೌಚಾಲಯದಲ್ಲಿ ಟಿಶ್ಯೂ ಪೇಪರ್ ಮೇಲೆ ಬಂಗಾಳಿ ಭಾಷೆಯಲ್ಲಿ ಕೈಬರಹದಲ್ಲಿ ಬರೆದಿರುವ ಬಾಂಬ್ ಬೆದರಿಕೆ ಪತ್ತೆಯಾಗಿದೆ. ಅದರಲ್ಲಿ ಗೇಟ್ ನಂಬರ್ 23ರಲ್ಲಿ ಬಾಂಬ್ ಇಡಲಾಗಿದೆ ಎಂದು ಬರೆಯಲಾಗಿದೆ.
ಇಂದು (ಅ.23) ಬೆಳಿಗ್ಗೆ ಸುಮಾರು 8:55ರ ಸುಮಾರಿಗೆ ಸ್ವಚ್ಛತಾ ಸಿಬ್ಬಂದಿಗೆ ಈ ಬಾಂಬ್ ಬೆದರಿಕೆಯ ಟಿಶ್ಯೂ ಸಿಕ್ಕಿದೆ. ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಗೇಟ್ 23ಅನ್ನು ತೆರವುಗೊಳಿಸಲಾಗಿದೆ. ಸಿಐಎಸ್ಎಫ್ ಸಿಬ್ಬಂದಿ, ಬಾಂಬ್ ನಿಷ್ಕ್ರೀಯ ತಂಡ ಹಾಗೂ ಶ್ವಾನದಳದೊಂದಿಗೆ ತೀವ್ರ ಶೋಧ ನಡೆಸಲಾಗುತ್ತಿದ್ದು, ತನಿಖೆ ಮುಂದುವರಿದಿದೆ.ಇದನ್ನೂ ಓದಿ: ಜಂಬೂ ಸವಾರಿಗೆ ಪುಷ್ಪಾರ್ಚನೆ – ಪ್ರೋಟೋಕಾಲ್ನಲ್ಲಿ ಸಿಎಂ ಪತ್ನಿ ಹೆಸರು ಇರಲಿಲ್ಲ: ಸಚಿವ ಯತೀಂದ್ರ
