ದೆಹಲಿಯ 50, ಬೆಂಗ್ಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ

Public TV
1 Min Read
BOMB THREAT

ನವದೆಹಲಿ/ಬೆಂಗಳೂರು: ದೆಹಲಿಯಲ್ಲಿ (Delhi) 50 ಹಾಗೂ ಬೆಂಗಳೂರಿನ (Bengaluru) 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ (Bomb Threat) ಬಂದಿದೆ.

ದೆಹಲಿಯ ಪಶ್ಚಿಮ ವಿಹಾರ್‌ನಲ್ಲಿರುವ ರಿಚ್‌ಮಂಡ್ ಶಾಲೆಗೆ ಬೆದರಿಕೆ ಸಂದೇಶ ಬಂದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳವು ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸದ್ಯ ಶಾಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ. ಒಟ್ಟು ದೆಹಲಿಯ 50ಕ್ಕೂ ಅಧಿಕ ಶಾಲೆಗಳಲ್ಲಿ ಬಾಂಬ್ ಬೆದರಿಕೆ ಮೇಲ್ ಹಾಗೂ ಕರೆ ಬಂದಿದ್ದು, ಬಾಂಬ್ ನಿಷ್ಕ್ರಿಯ ದಳದಿಂದ ಶೋಧ ಕಾರ್ಯ ನಡೆಯುತ್ತಿದೆ. ಇನ್ನೂ ಬೆಂಗಳೂರಿನ ಆರ್‌ಆರ್ ನಗರ, ಕೆಂಗೇರಿ ಸೇರಿದಂತೆ ಒಟ್ಟು 40 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ.ಇದನ್ನೂ ಓದಿ: ಬಂದ್‌ಗೆ ಮುಂದಾಗಿದ್ದ ಸಾರಿಗೆ ಸಂಘಟನೆಗಳಿಗೆ ಶಾಕ್‌ – ಎಸ್ಮಾ ಜಾರಿ, 6 ತಿಂಗಳು ಪ್ರತಿಭಟನೆಗೆ ನಿಷೇಧ

ಬಾಂಬ್ ಬೆದರಿಕೆ ಬಂದ ಹಿನ್ನೆಲೆ ಮಕ್ಕಳನ್ನು ಹೊರಗೆ ಕಳುಹಿಸಿ ತಪಾಸಣೆ ನಡೆಸಲಾಗುತ್ತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಬಾಂಬ್ ನಿಷ್ಕ್ರಿಯ ದಳದಿಂದಲೂ ಪರಿಶೀಲನೆ ನಡೆದಿದೆ.

ಈ ಕುರಿತು ಸೈಂಟ್ ಜರ್ಮನ್ ಶಾಲೆಯ ಪ್ರಿನ್ಸಿಪಲ್ ಮೋನಿಕಾ ಅಂಟೋನಿ ಮಾತನಾಡಿ, ಇಂದು ಬೆಳಿಗ್ಗೆ 7:30ರ ಸುಮಾರಿಗೆ ನಮಗೆ ಮೇಲ್ ಬಂದಿದೆ. ನಾವು ಕೂಡಲೇ ನಾವು ಪೊಲೀಸರಿಗೆ ಕರೆ ಮಾಡಿ, ಮಾಹಿತಿ ನೀಡಿದ್ದೆವು. ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಯಾರೋ ಮಾನಸಿಕ ಪ್ರಭಾವಿತ ವ್ಯಕ್ತಿ ಮೇಲ್ ಮಾಡಿದ್ದಾನೆ, ಸದ್ಯ ಮಕ್ಕಳಿಗೆ ಎಕ್ಸಾಂ ಇದ್ದು, ಘಟನೆ ಬಗ್ಗೆ ದೂರು ಕೊಡಲಾಗಿದೆ ಎಂದು ತಿಳಿಸಿದ್ದಾರೆ.

ಚಾಮರಾಜಪೇಟೆ ವಿಸ್ಡಮ್ ಅಂತಾರಾಷ್ಟ್ರೀಯ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಶಾಲೆಯಲ್ಲಿದ್ದ 800 ಮಕ್ಕಳನ್ನು ಬೇರೆ ಕಟ್ಟಡಕ್ಕೆ ಶಿಫ್ಟ್ ಮಾಡಲಾಗಿದೆ.ಇದನ್ನೂ ಓದಿ: ಚಾಮುಂಡಿ ಬೆಟ್ಟಕ್ಕೆ ಬಂದು ದೇವಿ ದರ್ಶನ ಪಡೆದ ಸಿಎಂ ಪತ್ನಿ, ಸೊಸೆ

Share This Article