ಮುಂಬೈ: ಜಾನ್ಸನ್ & ಜಾನ್ಸನ್ (Johnson & Johnson) ಬೇಬಿ ಪೌಡರ್ (Johnson’s Baby Powder) ಉತ್ಪಾದನೆಗೆ ಮಹಾರಾಷ್ಟ್ರ ಸರ್ಕಾರ (Maharashtra Government) ಹೇರಿದ್ದ ನಿಷೇಧವನ್ನು ಬಾಂಬೆ ಹೈಕೋರ್ಟ್ (Bombay High Court) ರದ್ದುಗೊಳಿಸಿದ್ದು, ಬೇಬಿ ಪೌಡರ್ ಉತ್ಪಾದನೆ ಮತ್ತು ಮಾರಾಟಕ್ಕೆ ಅನುಮತಿ ನೀಡಿದೆ.
ಮಹಾರಾಷ್ಟ್ರ ಸರ್ಕಾರ ಹೇರಿದ್ದ ನಿಷೇಧವನ್ನು ರದ್ದುಗೊಳಿಸಿ ಬೇಬಿ ಪೌಡರ್ ಉತ್ಪಾದನೆ ಮತ್ತು ಮಾರಾಟಕ್ಕೆ ಅನುಮತಿ ನೀಡಿ ಬಾಂಬೆ ಹೈಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ಎಸ್.ಜಿ.ಡಿಗೆ ಅವರ ವಿಭಾಗೀಯ ಪೀಠವು, ಪೌಡರ್ ಉತ್ಪಾದನೆ ಮತ್ತು ಮಾರಾಟಕ್ಕೆ ಕಂಪನಿಗೆ ಅನುಮತಿ ನೀಡಿದೆ. ಇದನ್ನೂ ಓದಿ: 3 ಬೈಕ್ನಲ್ಲಿ 14 ಮಂದಿ- ಸ್ಟಂಟ್ ಮಾಡುತ್ತಿದ್ದ ಯುವಕರಿಗೆ ಕಾದಿತ್ತು ಪೊಲೀಸರಿಂದ ಶಾಕ್
Advertisement
Advertisement
ಜಾನ್ಸನ್ಸ್ ಬೇಬಿ ಪೌಡರ್ನಲ್ಲಿ ಹಾನಿಕಾರಕ ಅಂಶಗಳಿದ್ದು, ತಕ್ಷಣವೇ ಉತ್ಪಾದನೆಯನ್ನು ನಿಲ್ಲಿಸಬೇಕು ಎಂದು 2022ರ ಸೆಪ್ಟೆಂಬರ್ 15ರಂದು ಸೂಚನೆ ನೀಡಿ ಕಂಪನಿಯ ಪರವಾನಗಿಯನ್ನು ಮಹಾರಾಷ್ಟ್ರ ಸರ್ಕಾರ ರದ್ದುಗೊಳಿಸಿತ್ತು.
Advertisement
Advertisement
ಇದನ್ನು ಪ್ರಶ್ನಿಸಿ ಕಂಪನಿಯು ಹೈಕೋರ್ಟ್ ಮೊರೆ ಹೋಗಿತ್ತು. ಕಂಪನಿಯ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರದ ಆದೇಶವನ್ನು ರದ್ದುಗೊಳಿಸಿದೆ. “ಸೌಂದರ್ಯವರ್ಧಕ ಉತ್ಪನ್ನಗಳಿಗೆ ಗುಣಮಟ್ಟ ಮತ್ತು ಸುರಕ್ಷತೆಯ ಮಾನದಂಡ ಕಾಪಾಡಿಕೊಳ್ಳುವುದು ಅತ್ಯಂತ ಮಹತ್ವದ್ದಾಗಿದೆ. ಉತ್ಪನ್ನಗಳಲ್ಲಿ ಸ್ವಲ್ಪ ವ್ಯತ್ಯಯ ಉಂಟಾದರೆ ಇಡೀ ಉತ್ಪಾದನಾ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವುದು ಸಮಂಜಸವಾಗಿ ತೋರುತ್ತಿಲ್ಲ” ಎಂದು ಪೀಠವು ಅರ್ಜಿ ವಿಚಾರಣೆ ವೇಳೆ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಪಡೆದ ಆರ್.ಆರ್.ಆರ್ ತಂಡಕ್ಕೆ ಮೋದಿ ಅಭಿನಂದನೆ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k