ಮುಂಬೈ: ಪುಣೆ ಪೋರ್ಶೆ ಕಾರು (Pune Car Accident Case) ಅಪಘಾತದಲ್ಲಿ ಇಬ್ಬರು ಸಾಫ್ಟ್‌ವೇರ್ ಎಂಜಿನಿಯರ್‌ಗಳ ಸಾವು ಪ್ರಕರಣದ ಅಪ್ರಾಪ್ತ ಆರೋಪಿಗೆ ಬಾಂಬೆ ಹೈಕೋರ್ಟ್ (Bombay High Court) ಜಾಮೀನು ಮಂಜೂರು ಮಾಡಿದೆ.
ಜಾಮೀನು ನೀಡಿದ್ದಕ್ಕೆ ವ್ಯಕ್ತವಾದ ಆಕ್ರೋಶದ ಹಿನ್ನೆಲೆಯಲ್ಲಿ ಅಬ್ಸರ್ವೇಶನ್ ಹೋಮ್‌ನಲ್ಲಿದ್ದ ಬಾಲಾಪರಾಧಿ ಇದೀಗ ನ್ಯಾಯಾಲಯದ ಆದೇಶದ ನಂತರ ಬಿಡುಗಡೆಯಾಗಲಿದ್ದಾನೆ. ಇದನ್ನೂ ಓದಿ: ಪೋರ್ಶೆ ಕಾರು ಅಪಘಾತ ಪ್ರಕರಣ – ಆರೋಪಿಯ ಪೋಷಕರಿಗೆ ಜೂ.5 ರವರೆಗೆ ಪೊಲೀಸ್ ಕಸ್ಟಡಿ
ಮೇ 19 ರಂದು, ಪುಣೆಯ ಕಲ್ಯಾಣಿ ನಗರದಲ್ಲಿ ಇಬ್ಬರು ಐಟಿ ವೃತ್ತಿಪರರು ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಪೋರ್ಶೆ ಕಾರು ಡಿಕ್ಕಿ ಹೊಡೆದು ಮೃತಪಟ್ಟಿದ್ದರು. ಕಾರು ಚಲಾಯಿಸುತ್ತಿದ್ದ ಅಪ್ರಾಪ್ತ ಕುಡಿದ ಮತ್ತಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದರು.
ಜುವೆನೈಲ್ ಜಸ್ಟಿಸ್ ಬೋರ್ಡ್ ಸದಸ್ಯರಾದ ಎಲ್.ಎನ್. ದಾನವಾಡೆ ಅವರು ಆರೋಪಿಗೆ ಜಾಮೀನು ನೀಡಿದ್ದು ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ರಸ್ತೆ ಸುರಕ್ಷತೆಯ ಬಗ್ಗೆ 300 ಪದಗಳ ಪ್ರಬಂಧವನ್ನು ಬರೆಯುವಂತೆ ಆಗ ಅಪ್ರಾಪ್ತ ಆರೋಪಿಗೆ ಸೂಚಿಸಲಾಗಿತ್ತು. ಇದನ್ನೂ ಓದಿ: ಪೋರ್ಶೆ ಕಾರು ಅಪಘಾತ ಕೇಸ್ – ಆರೋಪಿ ಅಪ್ರಾಪ್ತನ ತಾಯಿ ಬಂಧನ
ಜಾಮೀನಿಗೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ನ್ಯಾಯಾಲಯ ತನ್ನ ಆದೇಶವನ್ನು ಮಾರ್ಪಡಿಸಿತು. ಬಾಲಾಪರಾಧಿಯನ್ನು ಅಬ್ಸರ್ವೇಶನ್ ಹೋಮ್‌ನಲ್ಲಿರಿಸಲಾಗಿತ್ತು. ಪ್ರಕರಣ ಸಂಬಂಧ ಬಾಲಾಪರಾಧಿ ತಂದೆ, ತಾಯಿ, ತಾತನನ್ನೂ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.