ಮುಂಬೈ: ಐಸಿಐಸಿಐ ಬ್ಯಾಂಕ್ನ ಮಾಜಿ ಸಿಇಒ ಚಂದಾ ಕೊಚ್ಚರ್ (Chanda Kochhar) ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಕಳೆದ ತಿಂಗಳು ಬಂಧಿಸಿರುವುದು ಕಾನೂನುಬಾಹಿರವಾಗಿದೆ ಎಂದು ಅಭಿಪ್ರಾಯಪಟ್ಟ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ರೇವತಿ ಮೋಹಿತೆ ಡೆರೆ ಮತ್ತು ಪಿ.ಕೆ. ಚವಾಣ್ ಅವರ ವಿಭಾಗೀಯ ಪೀಠವು ಬಾಂಬೆ ಹೈಕೋರ್ಟ್ ಇಂದು ನ್ಯಾಯಾಂಗ ಬಂಧನದಲ್ಲಿರುವ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಕೊಚ್ಚರ್ ದಂಪತಿಯನ್ನು ಬಂಧಿಸಿರುವುದು ಕಾನೂನು ಸಮ್ಮತವಾಗಿಲ್ಲ ಎಂದು ಅಭಿಪ್ರಾಯಪಟ್ಟಿದೆ.
Advertisement
Advertisement
ಚಂದಾ ಕೊಚ್ಚರ್ ಖಾಸಗಿ ವಲಯದ ಬ್ಯಾಂಕ್ನ ಮುಖ್ಯಸ್ಥರಾಗಿದ್ದಾಗ ವೀಡಿಯೋಕಾನ್ ಗ್ರೂಪ್ಗೆ ನೀಡಲಾಗಿದ್ದ 3,000 ಕೋಟಿ ರೂ. ಸಾಲದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಪ್ರಕರಣದಲ್ಲಿ ಡಿ. 24ರಂದು ಸಿಬಿಐ ಬಂಧಿಸಿತ್ತು. ಈ ಸಂಬಂಧ ಜಾಮೀನು ಮಂಜೂರು ಮಾಡಬೇಕೆಂದು ಕೋರಿ ಕೊಚ್ಚರ್ ದಂಪತಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
Advertisement
ಪ್ರಕರಣವೇನು?: 2012ರಲ್ಲಿ ಐಸಿಐಸಿಐ ಬ್ಯಾಂಕ್ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ ರೂ. ಸಾಲ ಪಡೆದು, ಕೆಲ ತಿಂಗಳ ನಂತರ ವಿಡಿಯೋಕಾನ್ ಪ್ರವರ್ತಕ ವೇಣುಗೋಪಾಲ್ ಧೂತ್ ಅವರು ನ್ಯೂಪವರ್ ಕಂಪನಿಯಲ್ಲಿ ಕೋಟ್ಯಂತರ ರೂ. ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಾಲಗಳನ್ನು ನಂತರ ಅನುತ್ಪಾದಕ ಆಸ್ತಿ (ಎನ್ಪಿಎ) ಎಂದು ಘೋಷಿಸಲಾಗಿತ್ತು.
Advertisement
ಇದರಿಂದ ಬ್ಯಾಂಕ್ಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು. ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಚಂದಾ ಕೊಚ್ಚರ್, ಅವರ ಪತಿ ಮತ್ತು ವಿಡಿಯೋಕಾನ್ ಗ್ರೂಪ್ನ ವೇಣುಗೋಪಾಲ್ ಧೂತ್, ನ್ಯೂಪವರ್ ರಿನ್ಯೂವಬಲ್ಸ್, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು. ಇದನ್ನೂ ಓದಿ: JDS ಅಧಿಕಾರಕ್ಕೆ ಬಂದ್ರೆ ಈ ಬಾರಿಯೂ ರೈತರ ಸಾಲ ಮನ್ನಾ: HDK ಭರವಸೆ
ಇದೇ ಪ್ರಕರಣಕ್ಕೆ ಸಂಬಂಧಿಸಿ ಕೊಚ್ಚರ್ ಅವರನ್ನು ಈ ಹಿಂದೆ 2021ರಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿತ್ತು. 2018ರಲ್ಲಿ ತನಿಖೆ ಆರಂಭವಾಗಿದ್ದು, ಆ ಸಂದರ್ಭದಲ್ಲಿ ಚಂದಾ ಅವರು ತಮ್ಮ ಸ್ಥಾನದಿಂದ ಕೆಳಗಿಳಿದಿದ್ದರು. 2019ರಲ್ಲಿ ಚಂದಾ ಅವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಆಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದರು. ಇದನ್ನೂ ಓದಿ: ಸಾಗರದಲ್ಲಿ ಭಜರಂಗದಳ ಕಾರ್ಯಕರ್ತನ ಮೇಲೆ ಅಟ್ಯಾಕ್- ಆರೋಪಿ ಬಂಧನಕ್ಕೆ ಪ್ರೊಟೆಸ್ಟ್
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k