ಬೆಂಗಳೂರು: ಕಾಂಗ್ರೆಸ್‌ಗೆ (Congress) ಬಿಗ್ ಕೌಂಟರ್‌ಗೆ ನೀಡಲು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವೇದಿಕೆ ಸಿದ್ಧ ಮಾಡುತ್ತಿದ್ದಾರೆ ಎನ್ನಲಾಗಿದೆ.
ಫೆಬ್ರವರಿ ಮೂರನೇ ವಾರದಲ್ಲಿ ಬ್ರಹ್ಮಾಸ್ತ್ರ ಪ್ರಯೋಗ ಮಾಡಲು ಪ್ಲ್ಯಾನ್ ನಡೆದಿದೆ. ಫೆಬ್ರವರಿ ಮೂರನೇ ವಾರ ಬಜೆಟ್ ದಿನವೇ ಬಿಗ್ ಶಾಕ್ ಕೊಡಲು ಬೊಮ್ಮಾಯಿ ಸಿದ್ಧತೆ ನಡೆಸಿದ್ದಾರೆ ಎಂಬುದು ಬಿಜೆಪಿ (BJP) ಮೂಲಗಳು ತಿಳಿಸಿವೆ.
Advertisement
Advertisement
ಬಿಪಿಎಲ್ ಕುಟುಂಬದ ಮಹಿಳೆಯರಿಗೆ ಗರಿಷ್ಠ ಮಾಸಿಕ 2 ಸಾವಿರ ಘೋಷಣೆ ಮಾಡಿ ಜಾರಿ ಮಾಡುವ ಬಗ್ಗೆ ಚರ್ಚೆಯ ಹಂತದಲ್ಲಿದೆ ಎನ್ನಲಾಗಿದೆ. ಗೃಹ ನಿರ್ವಹಣೆಗೆ ಮಹಿಳೆಯರಿಗೆ ಆರ್ಥಿಕ ನೆರವು ನೀಡುವುದಾಗಿ ಜನವರಿ 14ರಂದು ಸಿಎಂ ಮಾಹಿತಿ ನೀಡಿದ್ದರು. ಒಂದು ಕುಟುಂಬದ ಮಹಿಳೆ ಸ್ವತಂತ್ರವಾಗಿ ಕನಿಷ್ಠ ಮನೆ ನಿರ್ವಹಣೆಗೆ ಅಗತ್ಯವಿರುವ ಆರ್ಥಿಕ ನೆರವು ಯೋಜನೆ ಘೋಷಣೆ ಸುಳಿವು ಕೊಟ್ಟಿದ್ದರು. ಕುಟುಂಬದ ಅಗತ್ಯವನ್ನು ನೋಡಿಕೊಂಡು 1000, 1500, 2000 ರೂ. ಮಾಸಿಕ ಗೌರವಧನ ನೀಡುವ ಬಗ್ಗೆ ಸಿಎಂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಸ್ಯಾಂಟ್ರೋ ರವಿ ಹಿಂದೆ ಇರೋ ಮುಖವಾಡಗಳು ಕಳಚಿ ಬೀಳಬೇಕು – ಆರಗ ಜ್ಞಾನೇಂದ್ರ
Advertisement
Advertisement
ಈಗಾಗಲೇ ಘೋಷಣೆ ಮಾಡಿರುವ ಸ್ತ್ರೀ ಸಾಮರ್ಥ್ಯ ಯೋಜನೆ ಜಾರಿಗೂ ಸಿದ್ಧತೆ ನಡೆದಿದೆ. ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಕ್ಕೆ 5 ಲಕ್ಷ ರೂ.ವರೆಗೆ ಸಹಾಯಧನ ನೀಡುವ ಯೋಜನೆ ಇದಾಗಿದೆ. ಜನವರಿ ಅಂತ್ಯಕ್ಕೆ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಚಾಲನೆ ನೀಡಲು ಸಿಎಂ ಪ್ಲ್ಯಾನ್ ಮಾಡಿದ್ದಾರೆ.
ಈ ನಡುವೆ ಗೃಹಲಕ್ಷ್ಮಿ ಯೋಜನೆ ಭರವಸೆಯನ್ನು ಕಾಂಗ್ರೆಸ್ ಘೋಷಣೆ ಮಾಡುವ ಸುಳಿವು ಸಿಎಂಗೆ ಮೊದಲೇ ಸಿಕ್ಕಿತ್ತಾ ಎಂಬ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಘೋಷಣೆಗೂ ಮುನ್ನವೇ ಯೋಜನೆ ಘೋಷಣೆ ಮಾಡುವುದಾಗಿ ಸಿಎಂ ಹೇಳಿದ್ದು ಏಕೆ? ಇಲ್ಲ, ಸಿಎಂ ಬಜೆಟ್‌ನಲ್ಲಿ ಘೋಷಣೆ ಮಾಡ್ತಾರೆ ಎಂಬುದು ಕಾಂಗ್ರೆಸ್‌ಗೆ ಮೊದಲೇ ಗೊತ್ತಿತ್ತಾ ಎಂಬ ಪ್ರಶ್ನೆಗಳ ಜೊತೆ ಬಗ್ಗೆ ಪರ ವಿರೋಧ ಮಾತುಗಳು ಕೇಳಿಬಂದಿವೆ. ಆದರೆ ಯಾರು ಮೊದಲು, ಯಾರು ಯಾರನ್ನು ಹೈಜಾಕ್ ಮಾಡಿದ್ರು ಎಂಬ ಪ್ರಶ್ನೆಗೆ ಉತ್ತರ ಮಾತ್ರ ಸಿಕ್ಕಿಲ್ಲ. ಇದನ್ನೂ ಓದಿ: 2 ಸಾವಿರ ರೂ. ಕೊಟ್ಟೇ `ನಾ ನಾಯಕಿ’ ಸಮಾವೇಶಕ್ಕೆ ಮಹಿಳೆಯರನ್ನ ಕರೆತರಲಾಗಿದೆ – ಟ್ವೀಟ್‌ನಲ್ಲಿ ಕಾಲೆಳೆದ BJP
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k