ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು, ಗುತ್ತಿಗೆದಾರರ ಸಂಘಗಳು ಭ್ರಷ್ಟಾಚಾರ ಆರೋಪ ಮಾಡುತ್ತಿರುವ ಸಂದರ್ಭದಲ್ಲಿಯೇ, ನನಗೆ ಯಾರು ಲಂಚ (Bribe) ಕೊಡಬೇಡಿ. ನಾನು ಭ್ರಷ್ಟ ಅಧಿಕಾರಿಯಾಗಲಾರೆ ಎಂಬ ನಾಮಫಲಕವನ್ನು ಸರ್ಕಾರಿ ಕಚೇರಿ (Government Office) ಗಳಲ್ಲಿ ಅಳವಡಿಸುವಂತೆ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸುತ್ತೋಲೆ ಹೊರಡಿಸಿದ್ದಾರೆ.
Advertisement
ಸಿಟಿಜನ್ ಎನ್‍ಕ್ವೈರಿ ಕೌನ್ಸಿಲ್ ಎಂಬ ಸಂಸ್ಥೆ ನಡೆಸಿರುವ ಭ್ರಷ್ಟಾಚಾರ (Corruption) ನಿರ್ಮೂಲನಾ ಅಭಿಯಾನದ ಅಂಗವಾಗಿ ಬೋರ್ಡ್ ಅಳವಡಿಸಿಕೊಳ್ಳಿ ಎಂದು ಆದೇಶ ನೀಡಿದ್ದಾರೆ. ಅಕ್ಟೋಬರ್ 2ರಿಂದ 20ರವರೆಗೆ ಈ ಕ್ಯಾಂಪೇನ್ ನಡೆಯಲಿದೆ. ಈ ಬಗ್ಗೆ ಕಾಂಗ್ರೆಸ್ (Congress) ಕಿಡಿಕಾರಿದೆ. ಸರ್ಕಾರದ ಮೇಲಿನ ಭ್ರಷ್ಟಾಚಾರದ ಆರೋಪಗಳನ್ನು ಡೈವರ್ಟ್ ಮಾಡಲು ಖಾಸಗಿ ಸಂಸ್ಥೆ ನಡೆಸಿರುವ ಅಭಿಯಾನವನ್ನು ಸರ್ಕಾರ ಒಪ್ಪಿಕೊಂಡಿದೆ. ಇದು ಎಷ್ಟು ದಿನ ನಡೆಯುತ್ತೋ ನೋಡ್ಬೇಕು ಎಂದು ಕೈ ನಾಯಕರು ಹೇಳಿದ್ದಾರೆ. ಇದನ್ನೂ ಓದಿ: ಮೋದಿ ಹೋದ ಕಡೆಯಲ್ಲಿ ಬಿಜೆಪಿ ಸೋತಿದೆ: ಸಿದ್ದರಾಮಯ್ಯ
Advertisement
Mr @BSBommai,
Instead of putting up anti-graft boards in front of the govt offices, make it mandatory to install CCTVs in the offices. Take action against the corrupt officers immediately when there are complaints from the aggrieved citizens.#40PercentSarkara
— Siddaramaiah (@siddaramaiah) September 26, 2022
ಸಿದ್ದರಾಮಯ್ಯ (Siddaramaiah) ಟ್ವೀಟ್ ಮಾಡಿ, ಮುಖ್ಯಮಂತ್ರಿ ಬೊಮ್ಮಾಯಿ ಅವರೇ, ಮೊದಲು ನಿಮ್ಮ ಮತ್ತು ಸಚಿವರ ಕಚೇರಿಗಳು, ಹಾಗೂ ಮನೆ ಮುಂದೆ ಈ ಬೋರ್ಡ್ ಹಾಕಿಸಿ. ಸರ್ಕಾರಿ ಗುತ್ತಿಗೆದಾರರು ಲಂಚದ ಆರೋಪ ಮಾಡಿರುವುದು ಸಚಿವರ ಮೇಲೆ, ಅಧಿಕಾರಿಗಳ ಮೇಲೆ ಅಲ್ಲ. ಅಧಿಕಾರಿಗಳನ್ನು ತೋರಿಸಿ ಕಮಿಷನ್ ಆರೋಪದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಬೇಡ. ಲಂಚಾವತಾರ ನಾಟಕದಲ್ಲಿ ಅಧಿಕಾರಿಗಳದ್ದು ಪೋಷಕ ಪಾತ್ರ, ಬಿಜೆಪಿ ಸರ್ಕಾರದ ಇಲಾಖಾ ಸಚಿವರದ್ದೇ ಮುಖ್ಯ ಪಾತ್ರ. ಈ ಬೋರ್ಡ್ ಬರೆಸಿ ಹಾಕುವ ನಾಟಕಗಳನ್ನೆಲ್ಲ ನಿಲ್ಲಿಸಿ ಎಂದಿದ್ದಾರೆ.